ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Ganeshotsava in Police Station: ಶ್ರೀ ಸತ್ಯನಾರಾಯಣ ಮಹಾ ಪೂಜೆ ಹಾಗೂ ಅನ್ನ ಸಂತರ್ಪಣಾ ಕಾರ್ಯಕ್ರಮ

ಪ್ರತಿ ವರ್ಷದಂತೆ ಈ ವರ್ಷವೂ ಅಲಂಕೃತ ಮಂಟಪದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸ ಲಾಗಿದ್ದು, ಮುಂಜಾನೆ ಪಿಎಸ್ಐ ಮಾಂತೇಶ ಕುಂಬಾರ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು. ಪ್ರತಿನಿತ್ಯ ಒತ್ತಡದ ಕೆಲಸ ನಿರ್ವಹಿಸುತ್ತಿದ್ದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಕುಟುಂಬದ ಸದಸ್ಯರೊಂದಿಗೆ ಸೇರಿ ಸಂಭ್ರಮದಿಂದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ

-

Ashok Nayak Ashok Nayak Sep 1, 2025 8:41 PM

ಬನವಾಸಿ: ಇಲ್ಲಿನ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಪ್ರಯುಕ್ತ ಶ್ರೀ ಸತ್ಯನಾರಾಯಣ ಮಹಾ ಪೂಜೆ ಹಾಗೂ ಅನ್ನ ಸಂತರ್ಪಣಾ ಕಾರ್ಯಕ್ರಮ ಸಂಭ್ರಮದಿಂದ ಸೋಮವಾರ ನಡೆಯಿತು.

ಪ್ರತಿ ವರ್ಷದಂತೆ ಈ ವರ್ಷವೂ ಅಲಂಕೃತ ಮಂಟಪದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸ ಲಾಗಿದ್ದು, ಮುಂಜಾನೆ ಪಿಎಸ್ಐ ಮಾಂತೇಶ ಕುಂಬಾರ ನೇತೃತ್ವದಲ್ಲಿ ಶ್ರೀ ಸತ್ಯನಾರಾಯಣ ಪೂಜೆ ನೆರವೇರಿತು. ಪ್ರತಿನಿತ್ಯ ಒತ್ತಡದ ಕೆಲಸ ನಿರ್ವಹಿಸುತ್ತಿದ್ದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಕುಟುಂಬದ ಸದಸ್ಯರೊಂದಿಗೆ ಸೇರಿ ಸಂಭ್ರಮದಿಂದ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಇದನ್ನೂ ಓದಿ: Ganeshotsava: ಸಡಗರ, ಸಂಭ್ರಮದಿಂದ ಗಣೇಶೋತ್ಸವ ಆಚರಣೆ

ಮಧ್ಯಾಹ್ನ ಜನಪ್ರತಿನಿಧಿಗಳಿಗೆ, ವಿವಿಧ ಇಲಾಖೆಯ ಅಧಿಕಾರಿಗಳಿಗೆ, ಸಾರ್ವಜನಿಕರಿಗೆ ಅನ್ನಸಂತ ರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಶಿರಸಿ ವೃತ್ತ ನಿರೀಕ್ಷಕ ಶಶಿಕಾಂತ್ ವರ್ಮ ಪಿಎಸ್ಐಗಳಾದ ನಾಗಪ್ಪ ಬಿ. ರವೀಂದ್ರ ಬಿರಾದಾರ, ಎಎಸ್ಐ ಮಣಿಮಾಲನ್ ಮೇಸ್ತ್ರಿ, ಪ್ರಶಾಂತ ನಾಯ್ಕ್ ಹಾಗೂ ಠಾಣೆಯ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.