ಬಿಗ್​ಬಾಸ್ ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Uttara Kannada News: ಕಟ್ಟಡ ಕಾಮಗಾರಿ ವೇಳೆ ಲಿಫ್ಟ್‌ ಕುಸಿದು ಇಬ್ಬರು ಕಾರ್ಮಿಕರ ಸಾವು

Lift Fall accident: ಮುರ್ಡೇಶ್ವರದ ಓಲಗ ಮಂಟಪದ ಸಮೀಪ ನಾಲ್ಕು ಮಹಡಿಗಳ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ತಾತ್ಕಾಲಿಕ ಲಿಫ್ಟ್ ಅಳವಡಿಸಲಾಗಿತ್ತು. ಅತಿ ಭಾರವಾದ ಕಾರಣ ಏಕಾಏಕಿ ಹಗ್ಗ ತುಂಡಾಗಿ ಲಿಫ್ಟ್ ನೆಲಕ್ಕೆ ಕುಸಿದಿದೆ. ಅದರಲ್ಲಿದ್ದ ಇಬ್ಬರು ಕಾರ್ಮಿಕರು ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಉತ್ತರ ಕನ್ನಡ: ಉತ್ತರ ಕನ್ನಡ (Uttara Kannada News) ಜಿಲ್ಲೆಯ ಭಟ್ಕಳ (Bhatkal) ತಾಲೂಕಿನ ಮುರುಡೇಶ್ವರದಲ್ಲಿ ಘೋರವಾದ ದುರಂತವೊಂದು ಸಂಭವಿಸಿದೆ. ಕಟ್ಟಡ ಕಾಮಗಾರಿ (Building construction) ಸಂದರ್ಭದಲ್ಲಿ ಏಕಾಏಕಿ ಲಿಫ್ಟ್ (Lift) ಕುಸಿದು ಬಿದ್ದು ಇಬ್ಬರು ಕಾರ್ಮಿಕರು ಸಾವಿಗೀಡಾಗಿದ್ದಾರೆ. ಮೃತರನ್ನು ಪ್ರಭಾಕರ್‌ ಮುತ್ತಪ್ಪ ಶೆಟ್ಟಿ, ಬಾಬಣ್ಣ ಪೂಜಾರಿ ಎಂದು ಗುರುತಿಸಲಾಗಿದೆ. ಕಟ್ಟಡ ನಿರ್ಮಾಣ ಸಾಮಗ್ರಿ ಸಾಗಣೆಗಾಗಿ ಅಳವಡಿಸಲಾಗಿದ್ದ ತಾತ್ಕಾಲಿಕ ಲಿಫ್ಟ್‌ ಕುಸಿದು (Lift Fall accident) ದುರಂತ ಸಂಭವಿಸಿದೆ.

ಮುರ್ಡೇಶ್ವರದ ಓಲಗ ಮಂಟಪದ ಸಮೀಪ ನಾಲ್ಕು ಮಹಡಿಗಳ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಕಟ್ಟಡ ನಿರ್ಮಾಣ ಸಾಮಗ್ರಿಗಳನ್ನು ಸಾಗಿಸಲು ತಾತ್ಕಾಲಿಕ ಲಿಫ್ಟ್ ಅಳವಡಿಸಲಾಗಿತ್ತು. ಅತಿ ಭಾರವಾದ ಕಾರಣ ಏಕಾಏಕಿ ಹಗ್ಗ ತುಂಡಾಗಿ ಲಿಫ್ಟ್ ನೆಲಕ್ಕೆ ಕುಸಿದಿದೆ. ಅದರಲ್ಲಿದ್ದ ಇಬ್ಬರು ಕಾರ್ಮಿಕರು ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹಗಳನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಕಟ್ಟಡ ನಿರ್ಮಾಣದ ವೇಳೆ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿದ್ದರೇ ಇಲ್ಲವೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ.

ನಿಂತಿದ್ದ ಬೈಕ್‌ಗೆ ಗುದ್ದಿದ ಆ್ಯಂಬುಲೆನ್ಸ್‌; ದಂಪತಿ ಸ್ಥಳದಲ್ಲಿಯೇ ಸಾವು

ಬೆಂಗಳೂರು: ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಆ್ಯಂಬುಲೆನ್ಸ್‌ (Road Accident) ಡಿಕ್ಕಿಯಾದ ಪರಿಣಾಮ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೆಂಗಳೂರಿನ ಶಾಂತಿನಗರ ಬಸ್ ನಿಲ್ದಾಣದ ಬಳಿ ಅಪಘಾತ ಸಂಭವಿಸಿದೆ. ರೆಡ್‌ ಸಿಗ್ನಲ್‌ ಇದ್ದರಿಂದ ಬೈಕ್‌ ಸವಾರ ಬೈಕ್‌ ನಿಲ್ಲಿಸಿದ್ದ. ರಿಚ್ಮಂಡ್ ಸರ್ಕಲ್ ಕಡೆಯಿಂದ ವೇಗವಾಗಿ ಬಂದ ಆ್ಯಂಬುಲೆನ್ಸ್‌ ನಿಯಂತ್ರಣ ತಪ್ಪಿ ಬೈಕ್‌ ಸವಾರನಿಗೆ ಗುದ್ದಿದೆ. ಅಪಘಾತದ ತೀವ್ರತೆ ಎಷ್ಟಿತ್ತೆಂದರೆ ಬೈಕ್‌ನ್ನು ಆ್ಯಂಬುಲೆನ್ಸ್‌ 50 ಮೀಟರ್ ದೂರು ಎಳೆದೊಯ್ದಿದೆ. ಅಪಘಾತದ ಬಳಿಕ ಆ್ಯಂಬುಲೆನ್ಸ್‌ ಚಾಲಕ ತಲೆಮರಿಸಿಕೊಂಡಿದ್ದಾನೆ.

ಇದನ್ನೂ ಓದಿ: Train Accident: ಬೆಳ್ಳಂ ಬೆಳಗ್ಗೆ ಘೋರ ದುರಂತ! ಹಳಿ ದಾಟುತ್ತಿದ್ದ ಯಾತ್ರಿಕರಿಗೆ ರೈಲು ಡಿಕ್ಕಿ

ಇಸ್ಮಾಯಿಲ್(40), ಸಮೀನಾಬಾನು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಾಯಾಳು ಸಿದ್ದಿಖಿ ಸೇರಿ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅತಿವೇಗ, ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆ್ಯಂಬುಲೆನ್ಸ್‌ ಚಾಲಕನಿಗಾಗಿ ಹುಡುಕಾಟ ನಡೆಯುತ್ತಿದೆ.

ಬೆಂಗಳೂರಿನಲ್ಲಿ ಶನಿವಾರ ರಾತ್ರಿ ನಡೆದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಇಬ್ಬರು ಆಟೋ ಚಾಲಕರು ಸಾವನ್ನಪ್ಪಿದ್ದಾರೆ. ಅಶೋಕನಗರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಆಸ್ಟಿನ್ ಟೌನ್ ಬಳಿ ನೀಲಸಂದ್ರದಿಂದ ಮದರ್ ತೆರೇಸಾ ರಸ್ತೆಯ ಕಡೆಗೆ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದಾಗ ಕಾರು ಡಿಕ್ಕಿಯಾಗಿ 50 ವರ್ಷದ ಆಟೋರಿಕ್ಷಾ ಚಾಲಕನೊಬ್ಬ ಸಾವನ್ನಪ್ಪಿದ್ದಾನೆ. ಮೃತ ಚಾಲಕನನ್ನು ನೀಲಸಂದ್ರ ನಿವಾಸಿ ಸೈಯದ್ ಅಕ್ರಮ್ ಪಾಷಾ (50) ಎಂದು ಗುರ್ತಿಸಲಾಗಿದೆ. ಅಕ್ರಮ್ ಪಾಷಾ ಶನಿವಾರ ರಾತ್ರಿ ಪ್ರಯಾಣಿಕರನ್ನು ಕೂರಿಸಿಕೊಂಡು ಒಆರ್‌ಸಿ ರಸ್ತೆಯ ಚೌಟರಿ ಹಾಲ್ ಬಳಿ ಏಕಮುಖ ಸಂಚಾರದ ರಸ್ತೆಯ ವಿರುದ್ಧ ದಿಕ್ಕಿನಲ್ಲಿ ವೇಗವಾಗಿ ಆಟೋ ಚಲಾಯಿಸಿದ್ದಾನೆ.

ಈ ವೇಳೆ ನಿಯಂತ್ರಣ ಕಳೆದುಕೊಂಡ ಆಟೋ, ರಸ್ತೆ ಬದಿ ನಿಲುಗಡೆ ಮಾಡಿದ್ದ ಕಾರಿಗೆ ಡಿಕ್ಕಿ ಹೊಡೆದು, ನಂತರ ಎದುರಿನಿಂದ ಬರುತ್ತಿದ್ದ ಕ್ಯಾಬ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಆಟೊ ರಸ್ತೆಗೆ ಉರುಳಿ ಬಿದ್ದಿದೆ. ಗಂಭೀರವಾಗಿ ಗಾಯಗೊಂಡಿದ್ದ ಪಾಷಾ ಅವರು ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಯಾಣಿಕರಿಗೆ ಸಮೀಪದ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಸ್ಥಳಕ್ಕೆ ಅಶೋಕ ನಗರ ಸಂಚಾರ ಪೊಲೀಸರು ತೆರಳಿ ಪರಿಶೀಲಿನೆ ನಡೆಸಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಸರಸ್ವತಿಪುರಂ ನಿವಾಸಿ 62 ವರ್ಷದ ಆಟೋರಿಕ್ಷಾ ಚಾಲಕ ವೆಂಕಟರಾಮಯ್ಯ ಎಂಬುವವರು ಅಪಘಾತದಿಂದ ಮೃತಪಟ್ಟಿದ್ದಾರೆ.

ಇದನ್ನೂ ಓದಿ: Air India Plain Crash: ʼಹೆಂಡತಿ, ಮಗುವಿನೊಂದಿಗೂ ಮಾತನಾಡಲಾಗುತ್ತಿಲ್ಲʼ; ಏರ್ ಇಂಡಿಯಾ ದುರಂತದಲ್ಲಿ ಬದುಕುಳಿದಿದ್ದ ವ್ಯಕ್ತಿ ಹೇಳಿದ್ದೇನು?

ಹರೀಶ್‌ ಕೇರ

View all posts by this author