#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Vande Bharat Train: ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಸಂಚಾರ ಶೀಘ್ರ ಆರಂಭ

Vande Bharat Train: ಬೆಂಗಳೂರು-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಅತಿ ಶೀಘ್ರದಲ್ಲಿಯೇ ಸಂಚರಿಸಲಿದೆ. ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ ಮತ್ತು ಬೆಳಗಾವಿ ಸಂಸದ ಜಗದೀಶ್‌ ಶೆಟ್ಟರ್ ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.

ಬೆಂಗಳೂರು- ಬೆಳಗಾವಿ ವಂದೇ ಭಾರತ್ ರೈಲು ಸಂಚಾರ ಶೀಘ್ರ ಆರಂಭ

ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಸಂಚಾರ ಕುರಿತ ಸಾಧಕ-ಬಾಧಕ ಬಗ್ಗೆ ಕೇಂದ್ರ ಸಚಿವರಾದ ಅಶ್ವಿನಿ ವೈಷ್ಣವ್, ಪ್ರಲ್ಹಾದ್‌ ಜೋಶಿ ಹಾಗೂ ಸಂಸದ ಜಗದೀಶ್‌ ಶೆಟ್ಟರ್‌ ವಿಸ್ತೃತ ಚರ್ಚೆ ನಡೆಸಿದರು.

Profile Siddalinga Swamy Feb 11, 2025 2:55 PM

ನವದೆಹಲಿ: ಅತಿ ಶೀಘ್ರದಲ್ಲಿಯೇ ಬೆಂಗಳೂರು-ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು (Vande Bharat Train) ಸಂಚರಿಸಲಿದೆ. ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ್‌ ಜೋಶಿ (Pralhad Joshi) ಮತ್ತು ಬೆಳಗಾವಿ ಸಂಸದ ಜಗದೀಶ್‌ ಶೆಟ್ಟರ್ (Jagadish Shettar) ಸಭೆ ಸೇರಿ ಈ ಬಗ್ಗೆ ಚರ್ಚೆ ನಡೆಸಿದ್ದಾರೆ. ಅತೀ ಶೀಘ್ರದಲ್ಲಿಯೇ ಬೆಳಗಾವಿ - ಬೆಂಗಳೂರಿನ ಮಧ್ಯೆ ವಂದೇ ಭಾರತ್ ರೈಲಿನ ಆರಂಭದ ವೇಳಾಪಟ್ಟಿ ಬಿಡುಗಡೆಯಾಗಲಿದೆ. ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ ಅವರ ದೆಹಲಿ ಸಂಸದೀಯ ಕಚೇರಿಯಲ್ಲಿ ಸಚಿವದ್ವಯರು ಮತ್ತು ಮಾಜಿ ಸಿಎಂ ಸೇರಿ ʼಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಸಂಚಾರ ಕುರಿತ ಸಾಧಕ-ಬಾಧಕ ಬಗ್ಗೆ ವಿಸ್ತೃತ ಚರ್ಚೆ ನಡೆಸಿದರು.

ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸುವ ಕುರಿತು ಈ ಹಿಂದೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹಾಗೂ ಬೆಳಗಾವಿ ಶಾಸಕ ಅಭಯ ಪಾಟೀಲ್ ಸಹ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೆಲ ದಿನಗಳ ಹಿಂದಷ್ಟೇ ಸಚಿವ ಪ್ರಲ್ಹಾದ್‌ ಜೋಶಿ ಅವರು ಹುಬ್ಬಳ್ಳಿಯ ತಮ್ಮ ಲೋಕಸಭಾ ಕ್ಷೇತ್ರದ ಕಾರ್ಯಾಲಯದಲ್ಲಿ ನೈರುತ್ಯ ವಲಯದ ರೇಲ್ವೆ ಜನರಲ್ ಮ್ಯಾನೇಜರ್ , ಡಿಆರ್‌ಎಂ (DRM) ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಬೆಂಗಳೂರಿನಿಂದ ಬೆಳಗಾವಿವರೆಗೆ ವಂದೇ ಭಾರತ್ ರೈಲು ಸಂಚಾರ ವಿಸ್ತರಣೆ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದರು.

ವಂದೇ ಭಾರತ್ ರೈಲು ಬೆಳಗ್ಗೆ ಬೆಳಗಾವಿಯಿಂದ ಹೊರಟು ಬೆಂಗಳೂರು ತಲುಪಿ ಮತ್ತೆ ಬೆಂಗಳೂರಿಂದ ಬೆಳಗಾವಿಗೆ ರಾತ್ರಿ ತಲುಪುವ ಹಾಗೆ ವೇಳೆ ನಿಗದಿಗೊಳಿಸಿ ಎಂದು ಸಚಿವ ಪ್ರಲ್ಹಾದ್‌ ಜೋಶಿ, ನೈಋತ್ಯ ರೈಲ್ವೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದರು. ರೈಲ್ವೆ ಅಧಿಕಾರಿಗಳು ತಾಂತ್ರಿಕ ಅಂಶಗಳನ್ನು ವಿಶ್ಲೇಷಿಸಿ, ಸಾಧಕ-ಬಾಧಕಗಳನ್ನು ಅವಲೋಕಿಸಿ ವರದಿ ಸಲ್ಲಿಸಿದ್ದು, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಈ ವರದಿ ಪರಿಗಣಿಸಿ ಬೆಂಗಳೂರು -ಬೆಳಗಾವಿ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಸಕಾರಾತ್ಮಕ ಪ್ರತಿಕ್ರಿಯೆ ತೋರಿದ್ದಾರೆ.

ವೇಳಾಪಟ್ಟಿ ಶೀಘ್ರ ಬಿಡುಗಡೆ

ಅತೀ ಶೀಘ್ರದಲ್ಲಿಯೇ ಬೆಳಗಾವಿ - ಬೆಂಗಳೂರಿನ ಮಧ್ಯೆ ವಂದೇ ಭಾರತ್ ರೈಲಿನ ಆರಂಭದ ವೇಳಾಪಟ್ಟಿ ಬಿಡುಗಡೆಯಾಗಲಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ | Pralhad Joshi: ಸದನದಲ್ಲಿ ರಚನಾತ್ಮಕ ವಿಪಕ್ಷವಾಗಿ ಕಾಂಗ್ರೆಸ್‌ ವರ್ತಿಸಬೇಕು: ಪ್ರಲ್ಹಾದ್‌ ಜೋಶಿ

ಈ ರೈಲು ಸಂಚಾರದಿಂದ ಹುಬ್ಬಳ್ಳಿ-ಧಾರವಾಡ ಹಾಗೂ ಬೆಳಗಾವಿ ಭಾಗದ ಜನತೆಗೆ ಬೆಂಗಳೂರು ಪ್ರಯಾಣಕ್ಕೆ ಅನುಕೂಲವಾಗಲಿದೆ ಎಂದು ತಿಳಿಸಿರುವ ಸಚಿವರು, ನಮ್ಮ ಮನವಿಗೆ ಸ್ಪಂದಿಸಿ ವಂದೇ ಭಾರತ್ ರೈಲನ್ನು ಬೆಳಗಾವಿವರೆಗೆ ವಿಸ್ತರಿಸಲು ಸಮ್ಮತಿ ಸೂಚಿಸಿದ ಕೇಂದ್ರ ರೈಲ್ವೆ ಸಚಿವರಿಗೆ ಧನ್ಯವಾದ ಅರ್ಪಿಸುವೆ ಎಂದಿದ್ದಾರೆ.