ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

TJS George: ಸರಕಾರಿ ಗೌರವಗಳೊಂದಿಗೆ ಟಿಜೆಎಸ್‌ ಜಾರ್ಜ್‌ ಅಂತ್ಯಕ್ರಿಯೆ: ಆದೇಶ

State Funeral: ಪತ್ರಕರ್ತ, ಅಂಕಣಕಾರ, ಲೇಖಕ ಹೀಗೆ ಹಲವು ಹೆಸರಿನಿಂದ ಗುರುತಿಸಿಕೊಂಡಿದ್ದ ಟಿಜೆಎಸ್‌ ಜಾರ್ಜ್‌ ಅವರು ಮಲಯಾಳಂ ಮತ್ತು ಇಂಗ್ಲಿಷ್‌ನಲ್ಲಿ ಅನೇಕ ಕೃತಿ ರಚಿಸಿದ್ದಾರೆ. ಏಷ್ಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಜರ್ನಲಿಸಂ ಚೇರ್‌ಮ್ಯಾನ್‌ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಬೆಂಗಳೂರು: ನಿನ್ನೆ ನಿಧನರಾದ ಹಿರಿಯ ಪತ್ರಕರ್ತ ಟಿಜೆಎಸ್‌ ಜಾರ್ಜ್‌ (Journalist TJS George) ಅವರ ಅಂತ್ಯಕ್ರಿಯೆಯನ್ನು ಸಕಲ ಸರಕಾರಿ ಗೌರವಗಳೊಂದಿಗೆ (state funeral) ನೆರವೇರಿಸಲು ರಾಜ್ಯ ಸರಕಾರ ಆದೇಶಿಸಿದೆ. ಈ ಕುರಿತ ಆದೇಶವನ್ನು ಕರ್ನಾಟಕ ಸರ್ಕಾರ ಸಚಿವಾಲಯದ ಅಧೀನ ಕಾರ್ಯದರ್ಶಿ ಹೊರಡಿಸಿದ್ದಾರೆ. ಹೃದಯಾಘಾತದಿಂದ ಹಿರಿಯ ಪತ್ರಕರ್ತ, ಬರಹಗಾರ ಟಿಜೆಎಸ್‌. ಜಾರ್ಜ್‌ ಶುಕ್ರವಾರ ಬೆಂಗಳೂರಿನಲ್ಲಿ ನಿಧನ ಹೊಂದಿದ್ದರು. ಅವರಿಗೆ 97 ವರ್ಷ ವಯಸ್ಸಾಗಿತ್ತು.

1928ರಲ್ಲಿ ಕೇರಳದ ಪತ್ತನಂತಿಟ್ಟ ಜಿಲ್ಲೆಯ ತುಂಬಮಣಿ ಎಂಬಲ್ಲಿ ಜನಿಸಿದ ಅವರ ಪೂರ್ಣ ಹೆಸರು ತಯ್ಯಿಲ್‌ ಜೇಕಬ್‌ ಸೋನಿ ಜಾರ್ಜ್‌. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಮಣಿಪಾಲ್‌ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾಹಿತ್ಯ ಮತ್ತು ಪತ್ರಿಕೋದ್ಯಮಕ್ಕೆ ಸಲ್ಲಿಸಿದ ಅನನ್ಯ ಸೇವೆಯನ್ನು ಗುರುತಿಸಿ ಕೇಂದ್ರ ಸರ್ಕಾರ 2011ರಲ್ಲಿ ಅವರಿಗೆ ಪದ್ಮ ಭೂಷಣ ಪ್ರಶಸ್ತಿ ನೀಡಿತ್ತು. ಪತ್ರಕರ್ತರಿಗೆ ಕೇರಳ ಸರ್ಕಾರ ನೀಡುವ ಅತೀ ದೊಡ್ಡ ಪುರಸ್ಕಾರ ಸ್ವದೇಶಾಭಿಮಾನಿ ಕೇಸರಿ ಪ್ರಶಸ್ತಿ 2019ರಲ್ಲಿ ಟಿ.ಜೆ.ಎಸ್‌. ಜಾರ್ಜ್‌ ಅವರನ್ನು ಅರಸಿಕೊಂಡು ಬಂದಿತ್ತು. ಪತ್ರಕರ್ತ, ಅಂಕಣಕಾರ, ಲೇಖಕ ಹೀಗೆ ಹಲವು ಹೆಸರಿನಿಂದ ಗುರುತಿಸಿಕೊಂಡಿದ್ದ ಅವರು ಮಲಯಾಳಂ ಮತ್ತು ಇಂಗ್ಲಿಷ್‌ನಲ್ಲಿ ಅನೇಕ ಕೃತಿ ರಚಿಸಿದ್ದಾರೆ. ಏಷ್ಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಜರ್ನಲಿಸಂ ಚೇರ್‌ಮ್ಯಾನ್‌ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ.

ಇದನ್ನೂ ಓದಿ: TJS George: ನುಡಿನಮನ: ನೇರ ಮಾತಿನ ಸೊಗಸುಗಾರ ಟಿಜೆಎಸ್‌ ಜಾರ್ಜ್‌

ಹರೀಶ್‌ ಕೇರ

View all posts by this author