ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವಿದ್ಯುತ್ ಉಪಕೇಂದ್ರದ ಭೂಮಿ ಪೂಜೆ

ತಾಲೂಕಿನ ಬಂಡ್ರಿ ಗ್ರಾಮದಲ್ಲಿ ಶಾಸಕಿ ಅನ್ನಪೂರ್ಣ ತುಕಾರಾಮ್ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ನೂತನವಾಗಿ ನಿರ್ಮಿಸಲಾಗುತ್ತಿರುವ 66/11 ಕೆ.ವಿ. ವಿದ್ಯುತ್ ಉಪಕೇಂದ್ರದ ಭೂಮಿಪೂಜೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ತಾಲೂಕಿನಾದ್ಯಂತ 52 ನೂತನ ಅಂಗನವಾಡಿ ಕಟ್ಟಡಗಳ ನಿರ್ಮಾಣ ಹಾಗೂ 117 ಅಂಗನವಾಡಿ ಕಟ್ಟಡಗಳ ಉನ್ನತೀಕರಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಸಂಡೂರು: ತಾಲೂಕಿನ ಬಂಡ್ರಿ ಗ್ರಾಮದಲ್ಲಿ ಶಾಸಕಿ ಅನ್ನಪೂರ್ಣ ತುಕಾರಾಮ್(MLA Annapurna Tukaram) ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ವತಿಯಿಂದ ನೂತನವಾಗಿ ನಿರ್ಮಿಸಲಾಗುತ್ತಿರುವ 66/11 ಕೆ.ವಿ. ವಿದ್ಯುತ್ ಉಪಕೇಂದ್ರದ ಭೂಮಿಪೂಜೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ತಾಲೂಕಿನಾದ್ಯಂತ 52 ನೂತನ ಅಂಗನವಾಡಿ ಕಟ್ಟಡಗಳ ನಿರ್ಮಾಣ ಹಾಗೂ 117 ಅಂಗನವಾಡಿ ಕಟ್ಟಡಗಳ ಉನ್ನತೀಕರಣ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ ದರು.

ಇದನ್ನೂ ಓದಿ: Sandur News: ಸಂಡೂರಿನಲ್ಲಿ 58ನೇ ಗಣಿ ಸುರಕ್ಷತಾ ಸಪ್ತಾಹ ಆಚರಣೆ

ಈ ಯೋಜನೆಗಳ ಮೂಲಕ ಬಂಡ್ರಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ವಿದ್ಯುತ್ ಸೌಲಭ್ಯ ಮತ್ತಷ್ಟು ಸುಧಾರಣೆಯಾಗಲಿದ್ದು, ಅಂಗನವಾಡಿಗಳಲ್ಲಿ ಮಕ್ಕಳಿಗೆ ಉತ್ತಮ ಕಲಿಕಾ ವಾತಾವರಣ ಹಾಗೂ ಅಗತ್ಯ ಮೂಲಸೌಕರ್ಯ ಕಲ್ಪಿಸಲು ಸಹಕಾರಿಯಾಗಲಿದೆ ಶಾಸಕಿ‌ ಹೇಳಿದರು.

ಕಾರ್ಯಕ್ರಮದಲ್ಲಿ ಮುಖಂಡ ಪಿ ಜಯರಾಮ್,ಪಕ್ಷದ ಪದಾಧಿಕಾರಿಗಳು ಕಾರ್ಯಕರ್ತರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.