ಪ್ರವಾಸಕ್ಕೆ ತೆರಳಿದ್ದಾಗ ಪುರಾತನ ಬಾವಿಗೆ ಬಿದ್ದು ಬಾಲಕ ಸಾವು
Vijayanagara News: ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಬಾಗಳಿಯ ಶ್ರೀ ಕಲ್ಲೇಶ್ವರ ದೇಗುಲದ ಬಳಿ ಘಟನೆ ನಡೆದಿದೆ. ಹರಪನಹಳ್ಳಿಯ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಮೃತದೇಹ ಹೊರ ತೆಗೆದಿದ್ದಾರೆ. ಘಟನೆ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
ವಿಜಯನಗರ: ಪ್ರವಾಸಕ್ಕೆ ತೆರಳಿದ್ದ ವೇಳೆ ಕಾಲು ಜಾರಿ ಪುರಾತನ ಬಾವಿಗೆ ಬಿದ್ದು ಬಾಲಕ ಮೃತಪಟ್ಟಿರುವ ಘಟನೆ ವಿಜಯನಗರ ಜಿಲ್ಲೆಯ (Vijayanagara News) ಹರಪನಹಳ್ಳಿ ತಾಲೂಕಿನ ಬಾಗಳಿಯ ಶ್ರೀ ಕಲ್ಲೇಶ್ವರ ದೇಗುಲದ ಬಳಿ ನಡೆದಿದೆ. ಹರಪನಹಳ್ಳಿಯ ಗಾಜಿನಕೇರಿಯ ನಿವಾಸಿಗಳಾದ ವಿನೋದ್ ಮತ್ತು ವಿದ್ಯಾ ದಂಪತಿ ಪುತ್ರ ವಿಷ್ಣು (10) ಮೃತ ಬಾಲಕ.
ಕುಟುಂಬ ಸದ್ಯಸರು ಮಕ್ಕಳ ಜತೆ ಪ್ರವಾಸಕ್ಕೆ ತೆರಳಿದ್ದ ವೇಳೆ ದುರಂತ ಸಂಭವಿಸಿದೆ. ಮಗನನ್ನು ಕಳೆದುಕೊಂಡ ತಂದೆ, ತಾಯಿಯರ ಆಕ್ರಂದನ ಮುಗಿಲು ಮುಟ್ಟಿದೆ. ಹರಪನಹಳ್ಳಿಯ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿ ಬಾಲಕನ ಮೃತದೇಹ ಹೊರ ತೆಗೆದಿದ್ದಾರೆ. ಘಟನೆ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಟವಾಡುತ್ತಿದ್ದಾಗ ಕಾರು ಡಿಕ್ಕಿಯಾಗಿ ಬಾಲಕ ದುರ್ಮರಣ
ಶಿವಮೊಗ್ಗ: ಮನೆಯ ಮುಂದೆ ಆಟವಾಡುತ್ತಿದ್ದ ಬಾಲಕ ಒಮ್ಮೆಲೆ ರಸ್ತೆಗೆ ಬಂದ ವೇಳೆ ಕಾರು ಡಿಕ್ಕಿಯಾಗಿ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ಗುಂಡುಗದ್ದೆಯಲ್ಲಿ ನಡೆದಿದೆ.
ಗುಂಡುಗದ್ದೆ ಗ್ರಾಮದ ನಿವಾಸಿ ಪ್ರಗತ್.ಕೆ.ಆರ್ ಮತ್ತು ರಂಜನಾ ದಂಪತಿ ಪುತ್ರ ಋಷ್ಯ.ಪಿ (7) ಮೃತಪಟ್ಟ ಬಾಲಕ. ಮನೆಯ ಬಳಿ ಮಧ್ಯಾಹ್ನದ ವೇಳೆಗೆ ಆಟವಾಡುತ್ತಿದ್ದ ಬಾಲಕ, ಒಮ್ಮೆಲೆ ರಸ್ತೆಗೆ ಬಂದಿದ್ದಾನೆ. ಈ ವೇಳೆ ಕಾರು ಡಿಕ್ಕಿಯಾಗಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾಲಕನನ್ನು ತಕ್ಷಣವೇ ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಲೆಗೆ ಗಂಭೀರ ಗಾಯವಾಗಿದ್ದರಿಂದ ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.
ದಾಂಡೇಲಿಯ ರೆಸಾರ್ಟ್‌ನಲ್ಲಿ ಜಿಪ್‌ಲೈನ್ ಲಾಕ್ ತುಂಡಾಗಿ 40 ಅಡಿ ಮೇಲಿಂದ ಬಿದ್ದ ಯುವಕ; ಗಂಭೀರ ಗಾಯ! Video
ಮನೆಯ ಬಳಿ ರಸ್ತೆಯಲ್ಲಿ ಲಾರಿ ನಿಂತಿದ್ದರಿಂದ ಬಾಲಕ ರಸ್ತೆಗೆ ಬಂದಿದ್ದು, ಕಾಣಿಸದೇ ಕಾರು ಡಿಕ್ಕಿಯಾಗಿದೆ ಎನ್ನಲಾಗಿದೆ. ಈ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.