ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Hospet News: ಶ್ರೀವರದೇಶದಾಸರ ಮಧ್ಯಾರಾಧನೆ ಪ್ರಯುಕ್ತ ದಾಸ ಸಾಹಿತ್ಯ ಕಾರ್ಯಕ್ರಮ

ಪರಮಪೂಜ್ಯ ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ, ಮಂತ್ರಾಲಯ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ವತಿಯಿಂದ ಶ್ರೀಗುರುಜಗನ್ನಾಥದಾಸರ ಪ್ರಿಯ ಶಿಷ್ಯರಾದ ಶ್ರೀವರದೇಶದಾಸರ ಆರಾಧನೆ ಅಂಗವಾಗಿ ನಗರದ ಶ್ರೀರಾಘವೇಂದ್ರ ಸ್ವಾಮಿ ಮಠ( ಹಳೆರಾಯರ ಮಠ)ದಲ್ಲಿ ದಸ ಸಾಹಿತ್ಯ ಕಾರ್ಯಕ್ರಮ ನಡೆಯಿತು.

ಹೊಸಪೇಟೆ: ಪರಮಪೂಜ್ಯ ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆಜ್ಞಾನುಸಾರ, ಮಂತ್ರಾಲಯ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ವತಿಯಿಂದ ಶ್ರೀಗುರುಜಗನ್ನಾಥದಾಸರ ಪ್ರಿಯ ಶಿಷ್ಯರಾದ ಶ್ರೀವರದೇಶದಾಸರ ಆರಾಧನೆ ಅಂಗವಾಗಿ ನಗರದ ಶ್ರೀರಾಘವೇಂದ್ರ ಸ್ವಾಮಿ ಮಠ( ಹಳೆರಾಯರ ಮಠ)ದಲ್ಲಿ ದಸ ಸಾಹಿತ್ಯ ಕಾರ್ಯಕ್ರಮ ನಡೆಯಿತು.

Hospet 14

ಶ್ರೀವರದೇಶದಾಸರ ಭಾವಚಿತ್ರದ ಶೋಭಾಯಾತ್ರೆ, ಸಾಮೂಹಿಕ ಭಜನೆ ಹಮ್ಮಿಕೊಳ್ಳ ಲಾಗಿತ್ತು. ಮಠಾಧಿಕಾರಿ ಭೀಮಸೇನಾಚಾರ್ಯ ಕಾರ್ಯಕ್ರಮ ಉದ್ಘಾಟಿಸಿದರು.

ಇದನ್ನೂ ಓದಿ: Hospet News: ಭೂಮಿಯ ಮೇಲೆ ಬದುಕುವ ಹಕ್ಕು ಪ್ರತಿಯೊಂದು ಜೀವಿಗೂ ಸಮಾನವಾಗಿದೆ

ಮಂತ್ರಾಲಯ ಶ್ರೀಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ರಾಜ್ಯ ಸಂಚಾಲಕ ಸುಳಾದಿ ಹನುಮೇಶಾಚಾರ್ಯ ಶ್ರೀವರದೇಶದಾಸರ ಜೀವನ ಚರಿತ್ರೆ ಕುರಿತು ವಿಶೇಷ ಉಪನ್ಯಾಸ ನೀಡಿ ಸಾಮೂಹಿಕ ಭಜನೆ ನಡೆಸಿಕೊಟ್ಟರು. ಮಂತ್ರಾಲಯ ಶ್ರೀ ಗುರುಸಾರ್ವಭೌಮ ದಾಸ ಸಾಹಿತ್ಯ ಪ್ರಾಜೆಕ್ಟ್ ಜಿಲ್ಲಾ ಕೋ-ಆರ್ಡಿನೇಟರ್ ಅನಂತ ಪದ್ಮನಾಭ ಪ್ರಾಸ್ತಾವಿಕ ಮಾತನಾಡಿ, ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಹರಿದಾಸಬಂಧುಗಳಾದ ಗುರುರಾಜ್ ಆಚಾರ್ಯ, ಪವನಾಚಾರ್ಯ, ನರಸಿಂಹ ಆಚಾರ್ಯ, ವೆಂಕಟೇಶ್, ಸತ್ಯನಾರಾಯಣ, ಪ್ರಭಾಕರ್ ಸೇರಿದಂತೆ ಮಹಿಳಾ ಭಜನಾ ಮಂಡಳಿ ಸದಸ್ಯರು ಇದ್ದರು.