ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Hospet News: 25ಕ್ಕೆ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ: ಉಪಲೋಕಾಯುಕ್ತ ಬಿ.ವೀರಪ್ಪ ಭಾಗಿ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಜು.25ರಂದು ಮಧ್ಯಾಹ್ನ 12 ಗಂಟೆಗೆ ಬಳ್ಳಾರಿ ರಸ್ತೆಯ ಶ್ರೀ ಪುಣ್ಯಾನಂದಪುರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಕರ್ನಾಟಕ ಲೋಕಾಯುಕ್ತದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

25ಕ್ಕೆ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ: ಉಪಲೋಕಾಯುಕ್ತ ಬಿ.ವೀರಪ್ಪ ಭಾಗಿ

-

Profile
Ashok Nayak Jul 23, 2026 10:26 PM

ಹೊಸಪೇಟೆ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯುಜೆ) ವಿಜಯನಗರ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ ಜು.25ರಂದು ಮಧ್ಯಾಹ್ನ 12 ಗಂಟೆಗೆ ಬಳ್ಳಾರಿ ರಸ್ತೆಯ ಶ್ರೀ ಪುಣ್ಯಾನಂದಪುರಿ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ. ಕರ್ನಾಟಕ ಲೋಕಾಯುಕ್ತದ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.

ಇದನ್ನೂ ಓದಿ: Hospet News: ವಿಜಯಶ್ರೀ ಚೈಲ್ಡ್ ಕೇರ್' ಆಸ್ಪತ್ರೆ ಉದ್ಘಾಟನೆ

ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ನ್ಯಾ.ಕೆ.ಎಂ.ರಾಜಶೇಖರ್, ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿ ನೋಂಗ್ಜಾಯ್‌ ಮೊಹಮ್ಮದ್ ಅಲಿ ಅಕ್ರಂ ಷಾ, ಜಿಲ್ಲಾ ಪೊಲೀಸ್ ಅಧೀಕ್ಷಕಿ ಎಸ್‌.ಜಾಹ್ನವಿ, ಬಳ್ಳಾರಿ ವಿಜಯನಗರ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ವಾಸುದೇವರಾಮ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಧನಂಜಯಪ್ಪ, ಕೆಯುಡಬ್ಲ್ಯುಜೆ ರಾಜ್ಯ ಸಮಿತಿ ಸದಸ್ಯ ಪಿ.ವೆಂಕೋಬ ನಾಯಕ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

‘ಕನ್ನಡಪ್ರಭ’ ದಿನಪತ್ರಿಕೆಯ ಹುಬ್ಬಳ್ಳಿ ಸ್ಥಾನಿಕ ಸಂಪಾದಕ ಮಲ್ಲಿಕಾರ್ಜುನ ಸಿದ್ದಣ್ಣನವರ ಆಶಯ ಭಾಷಣ ಮಾಡಲಿದ್ದು, ಸಂಘದ ಅಧ್ಯಕ್ಷ ಪಿ.ಸತ್ಯನಾರಾಯಣ ಅಧ್ಯಕ್ಷತೆ ವಹಿಸಲಿದ್ದಾರೆ. ಪ್ರಧಾನ ಕಾರ್ಯದರ್ಶಿ ಕೆ.ಲಕ್ಷ್ಮಣ  ಪ್ರಾಸ್ತಾವಿಕ ಮಾತನಾಡಲಿದ್ದಾರೆ. 

ಪತ್ರಕರ್ತರ ಕುಟುಂಬದವರಿಗೆ ಯೋಗ, ಆಟೋಟ, ಮನರಂಜನೆ ಸ್ಪರ್ಧೆಗಳನ್ನು, ಪತ್ರಕರ್ತರಿಗೆ ಕ್ರಿಕೆಟ್ ಪಂದ್ಯಾಟ ನಡೆಸಲಾಗಿದ್ದು, ಬಹುಮಾನ ವಿತರಣೆ, ಪ್ರತಿಭಾ ಪುರಸ್ಕಾರ ಹಾಗೂ ಹಿರಿಯ ಪತ್ರಕರ್ತರಿಗೆ ಇದೇ ಸಂದರ್ಭದಲ್ಲಿ ಸನ್ಮಾನ ನಡೆಯಲಿದೆ.