ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ವಿಜಯನಗರ ಶಾಸಕ- ಜಿಲ್ಲಾ ಉಸ್ತುವಾರಿ ಸಚಿವರ ನಡುವೆ ಸಮನ್ವಯ ಕೊರತೆಯಿಂದ ಅಭಿವೃದ್ಧಿ ಕಾರ್ಯ ಸ್ಥಗಿತ: ಆನಂದ್ ಸಿಂಗ್ ಕಿಡಿ

Anand Singh: ಶಾಸಕ ಗವಿಯಪ್ಪ ಅವರ ಸ್ವಪ್ರತಿಷ್ಠೆಯಿಂದ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಆಗುತ್ತಿಲ್ಲ. ಸಕ್ಕರೆ ಕಾರ್ಖಾನೆ ಬಗ್ಗೆ ಕೇವಲ ಭರವಸೆ ನೀಡುತ್ತಿದ್ದಾರೆ. ಕಳೆದ ಮೂರು ವರ್ಷದಿಂದ ಈ ಬಗ್ಗೆ ಯಾವುದೇ ಕಾರ್ಯ ನಡೆಸದೇ ಕೇವಲ ಮಾಡುವುದಾಗಿಯೇ ಭರವಸೆ ನೀಡುತ್ತಿದ್ದಾರೆ ಹೊರತು ಯಾವುದೇ ಕಾರ್ಯವಾಗುತ್ತಿಲ್ಲ ಎಂದು ಮಾಜಿ ಸಚಿವ ಆನಂದ್ ಸಿಂಗ್ ಆರೋಪಿಸಿದ್ದಾರೆ.

ಹೊಸಪೇಟೆ, ಅ.16: ವಿಜಯನಗರ ಕ್ಷೇತ್ರದ ಶಾಸಕ ಗವಿಯಪ್ಪ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ನಡುವಿನ ಸಮನ್ವಯ ಕೊರತೆಯಿಂದ ಕ್ಷೇತ್ರದ ರೈತರು ಬಡವರಾಗುತ್ತಿದ್ದಾರೆ ಎಂದು ಮಾಜಿ ಸಚಿವ ಆನಂದ್ ಸಿಂಗ್‌ (Anand Singh) ಆರೋಪಿಸಿದರು. ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಶಾಸಕ ಗವಿಯಪ್ಪ ಅವರ ಸ್ವಪ್ರತಿಷ್ಠೆಯಿಂದ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ. ಸಕ್ಕರೆ ಕಾರ್ಖಾನೆ ಬಗ್ಗೆ ಕೇವಲ ಭರವಸೆ ನೀಡುತ್ತಿದ್ದಾರೆ. ಕಳೆದ ಮೂರು ವರ್ಷದಿಂದ ಈ ಬಗ್ಗೆ ಯಾವುದೇ ಕಾರ್ಯ ನಡೆಸದೆ ಕೇವಲ ಮಾಡುವುದಾಗಿಯೇ ಭರವಸೆ ನೀಡುತ್ತಿದ್ದಾರೆ ಹೊರತು ಯಾವುದೇ ಕೆಲಸವಾಗುತ್ತಿಲ್ಲ ಎಂದು ಟೀಕಿಸಿದ ಅವರು, ರೈತರ ಹೋರಾಟಕ್ಕೆ ಸದಾ ನನ್ನ ಬೆಂಬಲವಿದೆ ಎಂದು ಹೇಳಿದರು.

ಬರಗಾಲದ ತೀವ್ರತೆ ಅರ್ಥ ಮಾಡಿಕೊಳ್ಳಲು ಕರ್ನಾಟಕಕ್ಕೆ ಭೇಟಿ ನೀಡಿ, ರೈತರಿಗೆ ಹೆಚ್ಚಿನ ಪರಿಹಾರ ಕೊಡಿಸಿ: ರಾಹುಲ್‌ ಗಾಂಧಿಗೆ ಆರ್‌.ಅಶೋಕ್‌ ಆಗ್ರಹ

ಈ ಸಂದರ್ಭದಲ್ಲಿ ಮುಖಂಡರಾದ ಅಶೋಕ ಜಿರೆ, ಬಿಜೆಪಿ ಜಿಲ್ಲಾಧ್ಯಕ್ಷ ಸಂಜೀವ್ ರೆಡ್ಡಿ ಉಪಸ್ಥಿತರಿದ್ದರು.