ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cylinder Blast: ಹೊಸಪೇಟೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಸ್ಫೋಟ, 8 ಮಂದಿಗೆ ಸುಟ್ಟ ಗಾಯ

Hosapete: ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡಿದ್ದು, ಸ್ಪೋಟದ ತೀವ್ರತೆಗೆ ಮನೆಯ ಗೋಡೆ ಕುಸಿದಿದೆ. ಮನೆಯಲ್ಲಿದ್ದ ಹಾಲಪ್ಪ, ಸೋದರ ಮೈಲಾರಪ್ಪ ಸೇರಿ 8 ಜನರಿಗೆ ಗಾಯವಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಹೊಸಪೇಟೆ : ಮನೆಯಲ್ಲಿದ್ದ ಅಡುಗೆ‌ ಅನಿಲ ಸಿಲಿಂಡರ್ (gas cylinder blast) ಸ್ಪೋಟಗೊಂಡು ಮನೆಯಲ್ಲಿದ್ದ 8 ಜನರು ಗಂಭೀರವಾಗಿ ಗಾಯಗೊಂಡಿರುವ (injured) ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ (hosapete) ತಾಲೂಕಿನ ಗಾದಿಗನೂರು ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಮನೆಯಲ್ಲಿ ಎಲ್ಲರೂ ಮಲಗಿರುವಾಗ ದುರಂತ ಸಂಭವಿಸಿದ್ದು, ಸ್ಪೋಟದ ರಭಸಕ್ಕೆ ಮನೆಯ ಗೋಡೆಯೇ ಛಿದ್ರವಾಗಿದೆ. ಗ್ಯಾಸ್‌ ಲೀಕ್‌ ಆಗಿದ್ದು ಯಾರಿಗೂ ಗೊತ್ತೇ ಆಗಿಲ್ಲ.

ಬೆಳಗಿನ ಜಾವ ಸಿಲಿಂಡರ್ ಸ್ಪೋಟಗೊಂಡಿದ್ದು, ಸ್ಪೋಟದ ತೀವ್ರತೆಗೆ ಮನೆಯ ಗೋಡೆ ಕುಸಿದಿದೆ. ಮನೆಯಲ್ಲಿದ್ದ ಹಾಲಪ್ಪ, ಸೋದರ ಮೈಲಾರಪ್ಪ ಸೇರಿ 8 ಜನರಿಗೆ ಗಾಯವಾಗಿದೆ. ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಸಂಜೀವಿನಿ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮನೆ ಮುಂದಿದ್ದ ಚರಂಡಿಗೆ ಬಿದ್ದು ಮಗು ಸಾವು

ಬಳ್ಳಾರಿ: ಮನೆ ಮುಂದೆ ಆಟವಾಡುತ್ತಿದ್ದ 4 ವರ್ಷದ ಬಾಲಕ ಚರಂಡಿ ಗುಂಡಿಗೆ ಬಿದ್ದು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆ (Bellary News) ಸಂಡೂರು ತಾಲೂಕಿನ ಕುರೇಕುಪ್ಪ ಗ್ರಾಮದಲ್ಲಿ ನಡೆದಿದೆ. ಕುರೇಕುಪ್ಪದ 6ನೇ ವಾರ್ಡ್‌ನ ಪಿ ಅರವಿಂದ್ ಮೃತ ಬಾಲಕ. ಸಂಜೆ ಆಟವಾಡುತ್ತಾ ತಾತನ ಮನೆಗೆ ಹೊರಟಿದ್ದ ಬಾಲಕ ಕಾಲು ಜಾರಿ ಚರಂಡಿ ನೀರು ತುಂಬಿದ್ದ ಗುಂಡಿಗೆ ಬಿದ್ದು ಕೊನೆಯುಸಿರೆಳೆದಿದ್ದಾನೆ.

ಆಟವಾಡಲು ಹೋಗಿದ್ದ ಬಾಲಕ ರಾತ್ರಿಯಾದರೂ ಮನೆಗೆ ಬಾರದೇ ಇದ್ದಾಗ ಗಾಬರಿಗೊಂಡ ಪೋಷಕರು ಹುಡುಕಾಡಿದ್ದಾರೆ. ತಡರಾತ್ರಿ ಚರಂಡಿ ನೀರಿನಲ್ಲಿ ಬಾಲಕನ ಮೃತದೇಹ ತೇಲಿದೆ. ಕೂಡಲೇ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಬಾಲಕನನ್ನು ಜಿಂದಾಲ್ ಆಸ್ಪತ್ರೆಗೆ ಪೋಷಕರು ದಾಖಲಿಸಿದರು. ನೀರಿನಲ್ಲೇ ಮಗು ಮೃತಪಟ್ಟಿದ್ದ ಬಗ್ಗೆ ವೈದ್ಯರು ಪೋಷಕರಿಗೆ ಮಾಹಿತಿ ನೀಡಿದ್ದಾರೆ.

ಕೊನೇ ಕ್ಷಣದಲ್ಲಿ ಮಗು ಚರಂಡಿ ನೀರಿನಲ್ಲಿ ಬಿದ್ದು ಒದ್ದಾಡುವ ದೃಶ್ಯಗಳು ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಇನ್ನೂ ಮಗು ಸಾವಿಗೆ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಬಾಲಕನ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಘಟನೆ ಸಂಬಂಧ ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: Self Harming: ಜಾತ್ರೆಯಿಂದ ಖುಷಿಯಾಗಿ ಬಂದ ವಿದ್ಯಾರ್ಥಿನಿ ಪಿಜಿಯಲ್ಲಿ ಅನುಮಾನಾಸ್ಪದ ಸಾವು

ಹರೀಶ್‌ ಕೇರ

View all posts by this author