ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Hospet News: ವಿಜಯನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇಮಾಮ್ ನಿಯಾಜಿ ನೇಮಿಸಲು ಮನವಿ

ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ‌ ಆಗಮಿಸಿದ್ದ ತೆಲಂಗಾಣ ಸರ್ಕಾರದ ಸಲಹೆಗಾರರು ( ಪ್ರೋಟಾಕಾಲಾ & ಪಬ್ಲಿಕ್ ರಿಲೇಷನ್ ) ಹಾಗೂ ಎಐಸಿಸಿ ವೀಕ್ಷಕರಾದ ಹರಕಾರ್ ವೇಣುಗೋಪಾಲ್ ರಾವ್ ವೀಕ್ಷಕರಿಗೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್. ಮೊಹಮ್ಮದ್ ಇಮಾಮ್ ನಿಯಾಜಿ ಅವರು ತಮ್ಮನ್ನು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡುವಂತೆ ಮನವಿ ಸಲ್ಲಿಸಿದರು.

ಹೊಸಪೇಟೆ: ವಿಜಯನಗರ ಜಿಲ್ಲಾ ಕಾಂಗ್ರೆಸ್ ಸಮಿತಿಗೆ ನೂತನ ಜಿಲ್ಲಾಧ್ಯಕ್ಷರ ನೇಮಕಾತಿ ಸಂಬಂಧ ಹೊಸಪೇಟೆ ನಗರದ ಕೊಂಡನಾಯಕನ ಹಳ್ಳಿಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಗೆ‌ ಆಗಮಿಸಿದ್ದ ತೆಲಂಗಾಣ ಸರ್ಕಾರದ ಸಲಹೆಗಾರರು ( ಪ್ರೋಟಾಕಾಲಾ & ಪಬ್ಲಿಕ್ ರಿಲೇಷನ್ ) ಹಾಗೂ ಎಐಸಿಸಿ ವೀಕ್ಷಕರಾದ ಹರಕಾರ್ ವೇಣುಗೋಪಾಲ್ ರಾವ್ ವೀಕ್ಷಕರಿಗೆ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎನ್. ಮೊಹಮ್ಮದ್ ಇಮಾಮ್ ನಿಯಾಜಿ ಅವರು ತಮ್ಮನ್ನು ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡುವಂತೆ ಮನವಿ ಸಲ್ಲಿಸಿದರು.

ಇದನ್ನೂ ಓದಿ: Hospet News: 25ಕ್ಕೆ ಜಿಲ್ಲಾ ಮಟ್ಟದ ಪತ್ರಿಕಾ ದಿನಾಚರಣೆ: ಉಪಲೋಕಾಯುಕ್ತ ಬಿ.ವೀರಪ್ಪ ಭಾಗಿ

ಈ ಸಂದರ್ಭದಲ್ಲಿ ಪಕ್ಷದ ಸಂಘಟನೆಗೆ ತಾವು ಸುಮಾರು 20 ವರ್ಷಗಳಿಂದ ನಿಷ್ಠೆಯಿಂದ ಸೇವೆ ಸಲ್ಲಿಸಿರುವುದಾಗಿ ತಿಳಿಸಿದ ಅವರು, ಜಿಲ್ಲೆಯಾದ್ಯಂತ ಪಕ್ಷವನ್ನು ಇನ್ನಷ್ಟು ಬಲಪಡಿಸುವ ಉದ್ದೇಶ ದಿಂದ ಕಾರ್ಯನಿರ್ವಹಿಸಲು ಅವಕಾಶ ನೀಡುವಂತೆ ಕೋರಿದರು.

ಪಕ್ಷದ ಹಿರಿಯರು, ಕಾರ್ಯಕರ್ತರು ಹಾಗೂ ವಿವಿಧ ಮುಖಂಡರೊಂದಿಗೆ ಸಮನ್ವಯ ಸಾಧಿಸಿ ಕಾಂಗ್ರೆಸ್ ಸಂಘಟನೆಯನ್ನು ಬಲಿಷ್ಠಗೊಳಿಸುವ ಸಂಕಲ್ಪ ಹೊಂದಿದ್ದೇನೆ ಎಂದು ಇಮಾಮ್ ನಿಯಾಜಿ ಹೇಳಿದರು.

ಕಾಂಗ್ರೆಸ್ ವೀಕ್ಷಕರು ಜಿಲ್ಲೆಯ ವಿವಿಧ ಮುಖಂಡರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಅಭಿಪ್ರಾಯಗಳನ್ನು ಆಲಿಸಿ ಜಿಲ್ಲಾಧ್ಯಕ್ಷರ ನೇಮಕಾತಿಗೆ ಸಂಬಂಧಿಸಿದ ವರದಿಯನ್ನು ಪಕ್ಷದ ಹೈಕಮಾಂಡ್‌ಗೆ ಸಲ್ಲಿಸಲಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ, ಹೂವಿನಹಡಗಲಿ ಕ್ಷೇತ್ರದ ಶಾಸಕಿ ಲತಾ ಮಲ್ಲಿಕಾರ್ಜುನ ಉಪಸ್ಥಿತರಿದ್ದರು.