ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಮಲಪನಗುಡಿ ಗ್ರಾಮದಲ್ಲಿ ಸಂಭ್ರಮದಿಂದ ಕನಕದಾಸರ ಜಯಂತಿ ಆಚರಣೆ

ಜಯಂತಿ ಅಂಗವಾಗಿ ಶ್ರೀ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಡೋಲು ವಾದ್ಯಗಳ ಭರ್ಜರಿ ನಾದದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಗ್ರಾಮಸ್ಥರು ಭಕ್ತಿಭಾವದಿಂದ ಪಾಲ್ಗೊಂಡು ಕನಕದಾಸರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದರು.

ಮಲಪನಗುಡಿ ಗ್ರಾಮದಲ್ಲಿ ಸಂಭ್ರಮದಿಂದ ಕನಕದಾಸರ ಜಯಂತಿ ಆಚರಣೆ

-

Profile
Ashok Nayak Nov 28, 2026 9:29 AM

ಹೊಸಪೇಟೆ: ತಾಲೂಕಿನ ಮಲಪನಗುಡಿ ಗ್ರಾಮದಲ್ಲಿ ಶ್ರೀ ಭಕ್ತ ಕನಕದಾಸರ ಜಯಂತಿ ಅತ್ಯಂತ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಯಿತು.

ಜಯಂತಿ ಅಂಗವಾಗಿ ಶ್ರೀ ಭಕ್ತ ಕನಕದಾಸರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಡೋಲು ವಾದ್ಯಗಳ ಭರ್ಜರಿ ನಾದದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಅದ್ಧೂರಿ ಮೆರವಣಿಗೆ ನಡೆಸಲಾಯಿತು. ಮೆರವಣಿಗೆಯಲ್ಲಿ ಗ್ರಾಮಸ್ಥರು ಭಕ್ತಿಭಾವದಿಂದ ಪಾಲ್ಗೊಂಡು ಕನಕದಾಸರ ಭಾವಚಿತ್ರಕ್ಕೆ ಗೌರವ ನಮನ ಸಲ್ಲಿಸಿದರು.

ಇದನ್ನೂ ಓದಿ: Hospet News: ಸಾಧ್ಯ ವಿಶೇಷ ಮಕ್ಕಳ ವಸತಿ ಶಾಲೆ ಮಕ್ಕಳಿಂದ ವೇಟ್ ಲಿಫ್ಟಿಂಗ್‌ʼನಲ್ಲಿ ವಿಶೇಷ ಸಾಧನೆ

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಹುಡಾ ಅಧ್ಯಕ್ಷ ಹೆಚ್.ಎನ್. ಮೊಹಮ್ಮದ್ ಇಮಾಮ್ ನಿಯಾಜಿ ಭಾಗವಹಿಸಿದ್ದರು. ಇದೇ ಸಂದರ್ಭದಲ್ಲಿ ಸಮುದಾಯದ ಹಿರಿಯ ಮುಖಂಡರಾದ ಸಿದ್ದನಗೌಡ, ಭರಮನಗೌಡ , ಅಯ್ಯಾಳಿ ತಿಮ್ಮಪ್ಪ, ಹಾಲಪ್ಪ, ವೇದಮೂರ್ತಿ ಸೇರಿದಂತೆ ಹಲವಾರು ಸಮುದಾಯದ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸಾಮಾಜಿಕ ಸಮಾನತೆ, ಭಕ್ತಿ ಮತ್ತು ಮಾನವೀಯ ಮೌಲ್ಯಗಳ ಸಂದೇಶ ಸಾರಿದ ಭಕ್ತ ಕನಕದಾಸರ ಜಯಂತಿಯನ್ನು ಎಲ್ಲರೂ ಒಗ್ಗಟ್ಟಿನಿಂದ ಆಚರಿಸಿ ಸಂಭ್ರಮಿಸಿದರು. ಡೋಲು ವಾದ್ಯಗಳ ಸದ್ದು ಹಾಗೂ ಗ್ರಾಮಸ್ಥರು ಉತ್ಸಾಹದಿಂದ ಗ್ರಾಮದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.