National Aryabhata Award: ಧರ್ಮನಗೌಡಗೆ ರಾಷ್ಟ್ರೀಯ ಆರ್ಯಭಟ ಪ್ರಶಸ್ತಿ ಪ್ರದಾನ
ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ನೆರವೇರಿಸುವುದರಿಂದ ಹಿಡಿದು ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಹಾಗೂ ಮಾಸ್ಕ್ ವಿತರಣೆ ಕಾರ್ಯ ಗಳಲ್ಲಿ ಅವರು ಮುಂಚೂಣಿಯಲ್ಲಿ ಕಾಣಿಸಿಕೊಂಡರು. ಸಮಾಜ ಸೇವೆಯ ಜೊತೆಗೆ ಪರಿಸರ ಸಂರಕ್ಷಣೆ ಯಲ್ಲಿಯೂ ಧರ್ಮನಗೌಡ ಅವರು ಗಮನಾರ್ಹ ಕೆಲಸ ಮಾಡಿದ್ದಾರೆ.
-
ಹೊಸಪೇಟೆ: ವೃತ್ತಿ ಬದುಕಿನ ಜೊತೆ ಜೊತೆಗೆ ಸಮಾಜಮುಖಿ ಕಾರ್ಯಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿರುವ ಧರ್ಮನಗೌಡ ಅವರಿಗೆ ರಾಷ್ಟ್ರೀಯ ಆರ್ಯಭಟ ಪ್ರಶಸ್ತಿ(National Aryabhata Award) ಲಭಿಸಿದ್ದು ಬೆಂಗಳೂರಿನಲ್ಲಿ ಭಾನುವಾರ ಪ್ರದಾನ ಮಾಡಲಾಯಿತು.
ಮುಂಬಯಿಯ ಆರ್ಯಭಟ ಎಜುಕೇಶನಲ್ ಟ್ರಸ್ಟ್ ಸಹಯೋಗದಲ್ಲಿ ಚೇತನ ಫೌಂಡೇಶನ್ ಕರ್ನಾಟಕದಿಂದ ರಾಷ್ಟ್ರೀಯ ಪ್ರಶಸ್ತಿ ಸಮಾರಂಭದಲ್ಲಿ ಪ್ರಶಸ್ತಿ ಫಲಕ ನೀಡಿ ಗೌರವಿಸಲಾಯಿತು.
ಸಮಾಜ ಸೇವೆ ಎನ್ನುವುದು ಕೇವಲ ಮಾತಿನ ವಿಷಯವಲ್ಲ, ಅದನ್ನು ಬದುಕಿನ ಭಾಗವನ್ನಾಗಿ ಮಾಡಿಕೊಂಡು ಜನಸೇವೆ ಮೂಲಕ ಜನಮನ ಗೆದ್ದಿರುವ ವ್ಯಕ್ತಿತ್ವವೆಂದರೆ ಹೊಸಪೇಟೆ ನಗರದ ಎಂ. ಧರ್ಮನಗೌಡ. ಕಳೆದ ಎರಡು ದಶಕಗಳಿಂದ ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿರುವ ಅವರು, ಸಂಕಷ್ಟದಲ್ಲಿರುವ ಜನರಿಗೆ ನೆರವಾಗುವ ಮೂಲಕ ವಿಶೇಷ ಹೆಸರು ಪಡೆದಿದ್ದಾರೆ.
1970ರ ಜೂನ್ 1ರಂದು ಜನಿಸಿದ ಎಂ.ಧರ್ಮನಗೌಡ ಅವರು ಹೊಸಪೇಟೆ ನಿವಾಸಿಯಾಗಿದ್ದು, ವಿವಿಧ ಸಾಮಾಜಿಕ ಹಾಗೂ ಮಾನವೀಯ ಕಾರ್ಯಗಳಲ್ಲಿ ಸಕ್ರಿಯರಾಗಿದ್ದಾರೆ.
2004ರಿಂದ ಸಾಮಾಜಿಕ ಬದುಕಿಗೆ ಕಾಲಿಟ್ಟು ಎರಡು ದಶಕಗಳಿಂದ ಸಾಮಾಜಿಕ ಜವಾಬ್ದಾರಿಗಳನ್ನು ತನುಮನದೊಂದಿಗೆ ನಿರ್ವಹಿಸಿ ಜನಪರ ಹೋರಾಟಗಳಲ್ಲಿ ಭಾಗಿಯಾಗಿದ್ದಾರೆ. ಕೋವಿಡ್-19 ಮಹಾಮಾರಿ ಸಮಯದಲ್ಲಿ ಧರ್ಮನಗೌಡ ಅವರ ಸೇವೆ ವಿಶೇಷ ಮೆಚ್ಚುಗೆಗೆ ಪಾತ್ರವಾಯಿತು.
ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆ ನೆರವೇರಿಸುವುದರಿಂದ ಹಿಡಿದು ಬಡ ಕುಟುಂಬಗಳಿಗೆ ಆಹಾರ ಸಾಮಗ್ರಿ ವಿತರಣೆ, ಆರೋಗ್ಯ ಜಾಗೃತಿ ಕಾರ್ಯಕ್ರಮಗಳು ಹಾಗೂ ಮಾಸ್ಕ್ ವಿತರಣೆ ಕಾರ್ಯಗಳಲ್ಲಿ ಅವರು ಮುಂಚೂಣಿಯಲ್ಲಿ ಕಾಣಿಸಿಕೊಂಡರು. ಸಮಾಜ ಸೇವೆಯ ಜೊತೆಗೆ ಪರಿಸರ ಸಂರಕ್ಷಣೆಯಲ್ಲಿಯೂ ಧರ್ಮನಗೌಡ ಅವರು ಗಮನಾರ್ಹ ಕೆಲಸ ಮಾಡಿದ್ದಾರೆ.
ರೈತರ ಜೊತೆಗೂಡಿ ಕೃಷಿ ಚಟುವಟಿಕೆಗಳಲ್ಲಿ ಭಾಗವಹಿಸುವುದು, ಗಿಡ ನೆಡುವ ಕಾರ್ಯಕ್ರಮಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಜನಜಾಗೃತಿ ಮೂಡಿಸುವ ಕಾರ್ಯಗಳನ್ನು ಕೈಗೊಂಡಿದ್ದಾರೆ.
ಈ ಸೇವಾ ಚಟುವಟಿಕೆಗಳಿಗೆ ವಿವಿಧ ಸಂಘಟನೆಗಳಿಂದ ಪ್ರಶಸ್ತಿ ಹಾಗೂ ಸನ್ಮಾನಗಳು ದೊರೆತಿವೆ. ಇತ್ತೀಚೆಗೆ ವಿವಿಧ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಸಂಸ್ಥೆಗಳು ಧರ್ಮನಗೌಡ ಅವರ ಸಮಾಜ ಸೇವೆಯನ್ನು ಗುರುತಿಸಿ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ.
ಜನಸೇವೆ, ಮಾನವೀಯತೆ ಹಾಗೂ ಸಾಮಾಜಿಕ ಬದ್ಧತೆ ಯ ಮೂಲಕ ಯುವಕರಿಗೆ ಮಾದರಿ ಯಾಗಿರುವ ಎಂ. ಧರ್ಮನಗೌಡ ಅವರು “ಸೇವೆ ಎಂಬುದು ಸಮಾಜದ ಪರಿವರ್ತನೆಯ ಶಕ್ತಿ” ಎಂಬ ಸಂದೇಶವನ್ನು ತಮ್ಮ ಕಾರ್ಯಗಳ ಮೂಲಕ ಸಾರು ತ್ತಿದ್ದಾರೆ. ಇವರ ಸೇವೆ ಹಾಗೂ ಸಾಧನೆಗಳನ್ನು ಪರಿಗಣಿಸಿ, ಮುಂಬಯಿಯ ಆರ್ಯಭಟ ಎಜು ಕೇಶನಲ್ ಟ್ರಸ್ಟ್ ಸಹಯೋಗದಲ್ಲಿ ಹಾಗೂ ಚೇತನ ಫೌಂಡೇಶನ್ ಕರ್ನಾಟಕ ಇವರ ವತಿಯಿಂದ ಜೂನ್ 21ರ ಬೆಂಗಳೂರಿನಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ “ಆರ್ಯಭಟ ರಾಷ್ಟ್ರೀಯ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.
ಧರ್ಮನಗೌಡ ಅವರ ಸೇವಾ ಪಯಣ ಇನ್ನಷ್ಟು ಉನ್ನತ ಮಟ್ಟಕ್ಕೆ ಏರಲಿ ಎಂದು ಅಭಿಮಾನಿಗಳು ಹಾಗೂ ಸಾರ್ವಜನಿಕರು ಹಾರೈಸಿದ್ದಾರೆ.