Self Harming: ಹಂಪಿ ಪ್ರವಾಸದಲ್ಲಿ ಒಂದೇ ಕುಟುಂಬದ ನಾಲ್ವರಿಂದ ಆತ್ಮಹತ್ಯೆಗೆ ಯತ್ನ; ಒಬ್ಬರ ಸಾವು
Self Harming: ಹಂಪಿಗೆ ಪ್ರವಾಸ ಬಂದಿದ್ದ ಕೊಟ್ಟೂರಿನ ಕುಟುಂಬವೊಂದರ ನಾಲ್ವರು ಸದಸ್ಯರು ಬುಧವಾರ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ಪೈಕಿ ಒಬ್ಬರು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಉಳಿದವರಿಗೆ ಹೊಸಪೇಟೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ಹೊಸಪೇಟೆ: ಹಂಪಿಗೆ ಪ್ರವಾಸ ಬಂದಿದ್ದ ಕೊಟ್ಟೂರಿನ ಕುಟುಂಬವೊಂದರ ನಾಲ್ವರು ಸದಸ್ಯರು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಚಂದ್ರಯ್ಯ (43) ಎಂಬುವವರು ಮೃತಪಟ್ಟಿದ್ದಾರೆ. ಪತ್ನಿ ಸೌಮ್ಯ (38), ಪುತ್ರಿ ಭವಾನಿ (12), ಶಿವು (10) ಅಪಾಯದಿಂದ ಪಾರಾಗಿದ್ದಾರೆ.
ಚಂದ್ರಯ್ಯ ಮತ್ತು ಅವರ ಕುಟುಂಬದ ಸದಸ್ಯರು ಹಂಪಿ ಕಮಲಾಪುರ ಸಮೀಪದ ಸರಸ್ವತಿ ದೇವಸ್ಥಾನದ ಬಳಿ ಬುಧವಾರ ವಿಷ ಸೇವಿಸಿದ್ದರು. ಇದಕ್ಕೆ ನಿಖರ ಕಾರಣ ತಿಳಿಯಲು ಪ್ರಯತ್ನಿಸಲಾಗುತ್ತಿದೆ, ಚಂದ್ರಯ್ಯ ಸಾಲ ಮಾಡಿಕೊಂಡಿದ್ದರು ಎಂಬ ಶಂಕೆ ಇದೆ' ಎಂದು ಎಸ್ಪಿ ಶ್ರೀಹರಿಬಾಬು ಬಿ.ಎಲ್ ತಿಳಿಸಿದ್ದಾರೆ.
ಮೂವರು ಸದ್ಯ ಇಲ್ಲಿನ 100 ಹಾಸಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಕ್ರಿಮಿನಾಶಕದ ಅಡ್ಡಪರಿಣಾಮ ಗಂಭೀರ ಇರಬಹುದಾದ ಕಾರಣ ಅವರನ್ನು ಬಳ್ಳಾರಿ ಆಸ್ಪತ್ರೆಗೆ ಕಳುಹಿಸಲು ಸಿದ್ಧತೆ ನಡೆದಿದೆ ಎಂದು ಎಸ್ಪಿ ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ | Viral Video: ಕಟ್ಟಿ ಹಾಕಿದ ಒಂಟೆಯ ಮೇಲೆ ಕುಣಿದು ಕುಪ್ಪಳಿಸಿದ ಮಹಿಳೆ; ಇದೆಂಥ ಸಂಪ್ರದಾಯವೆಂದು ಕಿಡಿಕಾರಿದ ನೆಟ್ಟಿಗರು!
ಆಟವಾಡುವಾಗ ಸಂಪ್‌ಗೆ ಬಿದ್ದು ಇಬ್ಬರು ಮಕ್ಕಳ ದುರ್ಮರಣ
ಕಲಬುರಗಿ: ಕಲಬುರಗಿಯಲ್ಲಿ (Kalaburagi news) ಒಂದು ಘೋರ ದುರಂತ ಸಂಭವಿಸಿದೆ. ಆಟವಾಡುತ್ತಿದ್ದ ಇಬ್ಬರು ಮಕ್ಕಳು ನೀರಿನ ಸಂಪ್‌ಗೆ (water Sump) ಬಿದ್ದು ದುರ್ಮರಣ (children death) ಹೊಂದಿದ ಘಟನೆ (Crime News) ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಕೋಳಕೂರ ಗ್ರಾಮದಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಮೃತ ಮಕ್ಕಳನ್ನು ಗಿರೀಶ್ ತಿಪ್ಪಣ್ಣ (3) ಹಾಗೂ ತಿಪ್ಪಣ್ಣ ಅವರ ಸಹೋದರಿಯ ಮಗಳು ಶ್ರೇಷ್ಠಾ ಮಹೇಶ್ (2) ಎಂದು ಗುರುತಿಸಲಾಗಿದೆ.
ಆಟವಾಡುತ್ತಿದ್ದಾಗ ಇಬ್ಬರು ಮಕ್ಕಳು ಕಣ್ಮರೆ ಆಗಿದ್ದರು. ಪೋಷಕರು ಎಷ್ಟೇ ಹುಡುಕಾಡಿದರೂ ಮಕ್ಕಳು ಸಿಕ್ಕಿರಲಿಲ್ಲ. ಮಕ್ಕಳು ಕಾಣದೆ ಇದ್ದಾಗ ಗಾಬರಿಯಾದ ಪೋಷಕರು ಗ್ರಾಮದ ಸಿದ್ದಬಸವೇಶ್ವರ ದೇವಸ್ಥಾನದ ಮೈಕ್ ಮೂಲಕ ಮಕ್ಕಳು ಕಾಣೆಯಾಗಿರುವ ಬಗ್ಗೆ ಗ್ರಾಮಸ್ಥರಿಗೆ ವಿಷಯ ಮುಟ್ಟಿಸಿದರು. ಕೊನೆಗೆ ಪೊಲೀಸರು ಸಂಪ್ ತೆರೆದು ನೋಡಿದಾಗ ಮಕ್ಕಳು ಒಳಗೆ ಬಿದ್ದಿರುವುದು ಗೊತ್ತಾಗಿದೆ. ಜೇವರ್ಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಟವಾಡುತ್ತ ಸಂಪ್ ಬಳಿಗೆ ಹೋದ ಮಕ್ಕಳು ಕುತೂಹಲದಿಂದ ಸಂಪ್‌ಗೆ ಬಾಗಿ ನೋಡಿದಾಗ ಬಿದ್ದಿರಬಹುದು ಎಂದು ಅನುಮಾನಿಸಲಾಗಿದೆ. ಆದರೆ ದುಷ್ಕೃತ್ಯದ ಸಾಧ್ಯತೆಯನ್ನು ಪೊಲೀಸರು ಪೂರ್ತಿ ನಿರಾಕರಿಸಿಲ್ಲ. ಹೆಚ್ಚಿನ ತನಿಖೆ ಪೊಲೀಸರಿಂದ ನಡೆಯುತ್ತಿದೆ.