ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MLA H R Gaviyappa: ಜಿಲ್ಲಾ ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ ಆರ್ಥಿಕ ಮಂಜೂರಾತಿ ನೀಡಲು ಮನವಿ

ವಿಜಯನಗರ ಜಿಲ್ಲಾ ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ ಆರ್ಥಿಕ ಮಂಜೂ ರಾತಿ ನೀಡಲು ಸ್ಥಳೀಯ ವಕೀಲರ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಈ ಬಗ್ಗೆ ಸಂಘದ ಪದಾಧಿಕಾರಿ ಗಳು ಜಿಲ್ಲಾ ಉಸ್ತುವಾರಿ ಸಚಿವ ಬಸವಂತಪ್ಪ ಮತ್ತು ಶಾಸಕ ಹೆಚ್.ಆರ್. ಗವಿಯಪ್ಪ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಜಿಲ್ಲಾ ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ ಆರ್ಥಿಕ ಮಂಜೂರಾತಿಗೆ ಮನವಿ

-

Profile
Ashok Nayak Oct 9, 2026 2:15 PM

ಹೊಸಪೇಟೆ: ವಿಜಯನಗರ ಜಿಲ್ಲಾ ನ್ಯಾಯಾಲಯದ ಕಟ್ಟಡ ನಿರ್ಮಾಣಕ್ಕೆ ಆರ್ಥಿಕ ಮಂಜೂ ರಾತಿ ನೀಡಲು ಸ್ಥಳೀಯ ವಕೀಲರ ಸಂಘದ ಪದಾಧಿಕಾರಿಗಳು ಮನವಿ ಮಾಡಿದ್ದಾರೆ. ಈ ಬಗ್ಗೆ ಸಂಘದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಸಚಿವ ಬಸವಂತಪ್ಪ ಮತ್ತು ಶಾಸಕ ಹೆಚ್.ಆರ್. ಗವಿಯಪ್ಪ(MLA H R Gaviyappa) ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

ಇದನ್ನೂ ಓದಿ: Hospet News: ಸಮುದಾಯ ಆರೋಗ್ಯ ಅಧಿಕಾರಿಗಳು ಪಿಎಚ್ಸಿಒ, ಎಚ್ಐಒಗಳ ಬಗ್ಗೆ ಅಸಂಬದ್ಧ ಹೇಳಿಕೆ ನೀಡಿರುವುದನ್ನು ಖಂಡನೀಯ: ಎಂ.ಧರ್ಮನಗೌಡ

ಈ ಹಿಂದೆ ಸರ್ಕಾರವು ಜಿಲ್ಲಾ ನ್ಯಾಯಾಲಯಕ್ಕಾಗಿ ಡಿ.ಸಿ. ಕಚೇರಿ ಹಿಂಭಾಗದಲ್ಲಿ 9 ಎಕರೆ 88 ಸೆಂಟ್ಸ್ ಜಾಗವನ್ನು ಮಂಜೂರು ಮಾಡಿದೆ. ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರು ಸ್ವತಃ ಮಂಜೂರಾದ ಜಾಗಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಲೋಕೋಪಯೋಗಿ ಇಲಾಖೆ ವತಿಯಿಂದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ನಕ್ಷೆ ಸಹ ಅಂತಿಮಗೊಂಡಿದೆ. ಜಾಗ, ನಕ್ಷೆ ಎಲ್ಲವೂ ಸಿದ್ದವಿದ್ದು, ಕಟ್ಟಡ ನಿರ್ಮಾಣಕ್ಕೆ ಸರ್ಕಾರದಿಂದ ಆರ್ಥಿಕ ಮಂಜೂರಾತಿ ಬರುವುದು ಮಾತ್ರ ಬಾಕಿ ಇದೆ.

Hospet 9.1

ಅನುದಾನ ಬಿಡುಗಡೆಯಾದ ತಕ್ಷಣ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಬಹುದು ಎಂದು ವಿವರಿಸಿದರು.

ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಜಿಲ್ಲಾ ಸಚಿವರು ಶೀಘ್ರದಲ್ಲೇ ಬೆಂಗಳೂರಿನಲ್ಲಿ ಕಾನೂನು ಸಚಿವರು ಮತ್ತು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಅನುದಾನ ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು.

ನಿಯೋಗದಲ್ಲಿ ಸಂಘದ ಅಧ್ಯಕ್ಷ ಗುಜ್ಜಲ ನಾಗರಾಜ, ಪ್ರಧಾನ ಕಾರ್ಯದರ್ಶಿ ಶ್ರೀಕೃಷ್ಣದೇವ ರಾಯಲು , ಉಪಾಧ್ಯಕ್ಷ ಎಚ್.ಎಸ್. ದಿವಾಕರ ರಾವ್, ಜಂಟಿ ಕಾರ್ಯದರ್ಶಿ ಎಲ್.ಎನ್. ಭರತ್ ಕುಮಾರ್, ಕಾರ್ಯಕಾರಿ ಸದಸ್ಯ ಇ.ಎ. ಕೇಶ್ ಹಾಗೂ ಸದಸ್ಯರು ಉಪಸ್ಥಿತರಿದ್ದರು.