ಹೊಸಪೇಟೆ: ಹಂಪಿಯ ಅಷ್ಟಭುಜ ಸ್ನಾನದ ಕೊಳ ಸಮೀಪದ ಗುಡ್ಡದ ಹತ್ತಲು ಯತ್ನಿಸಿ ಕಾಲು ಜಾರಿ ಬಿದ್ದಿದ್ದ ಫ್ರಾನ್ಸ್‌ನ ಪ್ರವಾಸಿಗರೊಬ್ಬರನ್ನು (French tourist rescued) ಎರಡು ದಿನಗಳ ಬಳಿಕ ಪೊಲೀಸರು ರಕ್ಷಿಸಿದ್ದು, ಆತನನ್ನು ಕೊಪ್ಪಳ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಿ.24ರಂದು ಸಂಜೆ ಗುಡ್ಡ ಹತ್ತಲು ಯತ್ನಿಸಿದ್ದ ಬ್ರೂನೊ ರೋಜರ್ (52) ಕಾಲು ಜಾರಿ ಬಿದ್ದಿದ್ದರು. ಕಾಲಿಗೆ ತೀವ್ರ ಗಾಯವಾಗಿದ್ದರಿಂದ ಅವರು ಎರಡು ದಿನ ಅಲ್ಲೇ ಇದ್ದರು. ಸ್ಥಳೀಯರಿಂದ ಮಾಹಿತಿ ಪಡೆದು ಪ್ರವಾಸಿಗನನ್ನು ಪೊಲೀಸರು ರಕ್ಷಿಸಿದ್ದಾರೆ.
ಪ್ರವಾಸಿಗ ಬಿದ್ದ ಸ್ಥಳ ನಿರ್ಜನ ಪ್ರದೇಶವಾಗಿತ್ತು. ಹೀಗಾಗಿ ಅವರು ಎರಡು ದಿನ ಅಲ್ಲೇ ಇದ್ದರು. ಬಳಿಕ ಹೇಗೋ ತೆವಳಿಕೊಂಡು ಸಮೀಪದ ಬಾಳೆ ತೋಟಕ್ಕೆ ಶುಕ್ರವಾರ ಬಂದಿದ್ದಾರೆ. ಸ್ಥಳೀಯ ರೈತರು ಅವರನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರು ಮತ್ತು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಅಧಿಕಾರಿಗಳು ಅವರನ್ನು ಆಸ್ಪತ್ರೆಗೆ ದಾಖಲಿಸುವ ವ್ಯವಸ್ಥೆ ಮಾಡಿದರು.
ಫ್ರಾನ್ಸ್‌ನಿಂದ ಏಕಾಂಗಿಯಾಗಿ ಬಂದಿದ್ದ ರೋಜರ್ ಅವರು ಕಡ್ಡಿರಾಂಪುರದ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು ಎನ್ನಲಾಗಿದೆ. ಸದ್ಯ ಪ್ರವಾಸಿಗ ಮಾತನಾಡುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಭೀಕರ ಅಪಘಾತ; ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ನಾಲ್ವರ ದುರ್ಮರಣ
ಮೈಸೂರಿನಲ್ಲಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟ; ಗಾಯಾಳು ಮಂಜುಳಾ ಸಾವು
ಮೈಸೂರು: ನಗರದ ಅರಮನೆ ಬಳಿ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ಗಾಯಗೊಂಡಿದ್ದ ಹೂವಿನ ವ್ಯಾಪಾರಿ ಮಂಜುಳಾ ಎಂಬುವವರು ಚಿಕಿತ್ಸೆ ಫಲಿಸದೇ ಶುಕ್ರವಾರ ಮೃತಪಟ್ಟಿದ್ದಾರೆ. ಇದರಿಂದ ಪ್ರಕರಣದಲ್ಲಿ ಮೃತರ ಸಂಖ್ಯೆ 2ಕ್ಕೆ ಏರಿದೆ. ಗುರುವಾರ ರಾತ್ರಿ ಅರಮನೆ ಮುಂದೆ ಬಲೂನ್‌ಗೆ ಗಾಳಿ ತುಂಬುವ ಹೀಲಿಯಂ ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಬಲೂನ್ ಮಾರುತ್ತಿದ್ದ ಉತ್ತರ ಪ್ರದೇಶದ ಕನೌಜ್ ಮೂಲದ ವ್ಯಾಪಾರಿ ಸಲೀಂ ಖಮರುದ್ದೀನ್ (40) ಎಂಬಾತ ಮೃತಪಟ್ಟಿದ್ದ.
ಪ್ರಕರಣದಲ್ಲಿ ಹೂವಿನ ವ್ಯಾಪಾರಿ ಮಂಜುಳಾ, ಬೆಂಗಳೂರಿನ ಕಾಮಾಕ್ಷಿಪಾಳ್ಯದ ಲಕ್ಷ್ಮಿ, ಕೋಲ್ಕತಾದ ಶಮಿನಾ ಶಬಿಲ್, ರಾಣೆಬೆನ್ನೂರಿನ ಕೊಟ್ರೇಶ್ ಮತ್ತು ರಂಜಿತಾ ಸೇರಿ ಐವರು ಗಾಯಗೊಂಡಿದ್ದರು. ಇವರನ್ನು ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ತಲೆಗೆ ಗಂಭೀರವಾಗಿ ಗಾಯವಾಗಿದ್ದರಿಂದ ಚಿಕಿತ್ಸೆ ಫಲಿಸದೆ ಗಾಯಾಳು ಮಹಿಳೆ ಮಂಜುಳಾ ಮೃತಪಟ್ಟಿದ್ದಾರೆ.
ಬಲೂನ್ಗಳಿಗೆ ಹೀಲಿಯಂ ಗ್ಯಾಸ್ ತುಂಬಿಸುವಾಗ ಏಕಾಏಕಿ ಸಿಲಿಂಡರ್ ಸ್ಫೋಟಗೊಂಡಿದ್ದರಿಂದ ದುರಂತ ಸಂಭವಿಸಿತ್ತು. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ದೌಡಾಯಿಸಿ, ಪರಿಶೀಲನೆ ನಡೆಸಿದ್ದಾರೆ. ಮೈಸೂರು ಅರಮನೆಯ ಬಳಿ ಜಯಮಾರ್ತಾಂಡ ದ್ವಾರದ ಬಳಿ ಗುರುವಾರ ನಡೆದ ಸ್ಫೋಟದಿಂದ ಆತಂಕಕರ ವಾತಾವರಣ ನಿರ್ಮಾಣವಾಗಿತ್ತು.