ವಿಜಯನಗರ: ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ (Union Minister Nirmala Sitharaman) ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಎರಡು ದಿನಗಳ ವಿಜಯನಗರ ಪ್ರವಾಸವನ್ನು ಮುಕ್ತಾಯಗೊಳಿಸಿದ್ದಾರೆ. ಈ ವೇಳೆ ಅವರು ಅವರು (Hampi) ಸೇರಿದಂತೆ ಹಲವು ಐತಿಹಾಸಿಕ ತಾಣಗಳಿಗೆ ಭೇಟಿ ನೀಡಿದರು. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್‌ಐ) ಹಂಪಿ ವೃತ್ತ ಮತ್ತು ಜಿಲ್ಲಾಡಳಿತದ ಕಳಪೆ ನಿರ್ವಹಣೆ ಮತ್ತು ಸರಿಯಾದ ಶಿಷ್ಟಾಚಾರದ ಕೊರತೆಯ ಬಗ್ಗೆ ಸಚಿವ ತೀವ್ರ ಬೇಸರ ವ್ಯಕ್ತಪಡಿಸಿದರು. ಮೂಲಗಳ ಪ್ರಕಾರ, ಭಾನುವಾರ ಹಂಪಿಯ ಐತಿಹಾಸಿಕ ಕೋದಂಡರಾಮ ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾಗ, ದೇವಾಲಯಕ್ಕೆ ಹೋಗುವ ದಾರಿಯುದ್ದಕ್ಕೂ ಮಾನವ ಮಲ ಸೇರಿದಂತೆ ಅನೈರ್ಮಲ್ಯ ಪರಿಸ್ಥಿತಿ ಕಂಡು ಬಂದಿದೆ.
ಯುನೆಸ್ಕೋ ವಿಶ್ವ ಪರಂಪರೆಯ ತಾಣದ ಸ್ವಚ್ಛತೆ ಮತ್ತು ಒಟ್ಟಾರೆ ನಿರ್ವಹಣೆಯ ಬಗ್ಗೆ ನಿರ್ಮಲಾ ಪ್ರಶ್ನೆ ಮಾಡಿದ್ದು, ಅಧಿಕಾರಿಗಳು ತಬ್ಬಿಬ್ಬಾಗಿದ್ದಾರೆ. ಪಾರಂಪರಿಕ ಪ್ರದೇಶದಲ್ಲಿ ಲಭ್ಯವಿರುವ ಸಾರ್ವಜನಿಕ ಶೌಚಾಲಯಗಳ ಸಂಖ್ಯೆಯ ಬಗ್ಗೆ ಅಧಿಕಾರಿಗಳನ್ನು ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಂಪಿಗೆ ಭೇಟಿ ನೀಡಿದ ಸಂದರ್ಭದಲ್ಲಿ , ಸೀತಾರಾಮನ್ ಅವರು ಫೆಬ್ರವರಿಯಲ್ಲಿ ಮಂಡಿಸಲಿರುವ ಮುಂಬರುವ ಕೇಂದ್ರ ಬಜೆಟ್‌ನ ಸಿದ್ಧತೆಗಳ ಕುರಿತು ಚರ್ಚಿಸಲಾದ ಚಿಂತನಾ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿದ್ದರು. ಐಎಎಸ್ ಅಧಿಕಾರಿಗಳು ಸೇರಿದಂತೆ 120 ಕ್ಕೂ ಹೆಚ್ಚು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಆದಾಗ್ಯೂ, ಅಭಿವೃದ್ಧಿ ಯೋಜನೆಗಳಿಗೆ ಹೆಚ್ಚುವರಿ ಹಣಕ್ಕಾಗಿ ಸ್ಥಳೀಯ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಪದೇ ಪದೇ ವಿನಂತಿಸಿದ್ದರಿಂದ ಭೇಟಿಯು ಅಡ್ಡಿಯಾಯಿತು ಎಂದು ವರದಿಯಾಗಿದೆ, ಇದು ಸಚಿವರ ಅಸಮಾಧಾನವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಮೂಲಗಳು ಹೇಳುತ್ತವೆ. ಸದ್ಯ ಸಚಿವೆ ಭೇಟಿ ಬಳಿಕ ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
2027 ರ ಜನಗಣತಿಗಾಗಿ 11,718 ಕೋಟಿ ರೂ. ಬಜೆಟ್; ಕೇಂದ್ರ ಸಚಿವ ಸಂಪುಟ ಅನುಮೋದನೆ
ಕಮಲಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರವಿವಾರ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮದಲ್ಲಿ ನಿರ್ಮಲಾ ಭಾಗವಹಿಸಿದ್ದರು. ಹಣಕಾಸು ಸಚಿವಾಲಯದ 120 ಅಧಿಕಾರಿಗಳ ತಂಡವು ಹಂಪಿಗೆ ಭೇಟಿ ನೀಡಿ ವಿಶ್ವ ಪಾರಂಪರಿಕ ತಾಣ ವೀಕ್ಷಿಸಿದೆ ಎಂದು ಅವರು ಹೇಳಿದ್ದಾರೆ. ಕಾರ್ಪೊರೇಟ್ ವ್ಯವಹಾರಗಳು ಮತ್ತು ರಸ್ತೆ ಸಾರಿಗೆ ಮತ್ತು ಹೆದ್ದಾರಿ ರಾಜ್ಯ ಸಚಿವ ಹರ್ಷ ಮಲ್ಹೋತ್ರಾ, ಸಂಸದರಾದ ಇ.ತುಕಾರಾಂ, ಶಾಸಕರಾದ ಎಚ್.ಆರ್.ಗವಿಯಪ್ಪ, ಡಾ.ಎನ್.ಟಿ.ಶ್ರೀನಿವಾಸ್, ಕೇಂದ್ರ ಹಣಕಾಸು ಸಚಿವಾಲಯದ ಕಾರ್ಯದರ್ಶಿ ನಾಗರಾಜು ಮದ್ದೀರಲಾ, ಕೇಂದ್ರ ನೇರ ತೆರಿಗೆ ಮಂಡಳಿಯ ಅಧ್ಯಕ್ಷ ರವಿ ಅಗರ್ವಾಲ್, ಹಣಕಾಸು ವ್ಯವಹಾರಗಳ ಇಲಾಖೆ ಕಾರ್ಯದರ್ಶಿ ಅನುರಾಧ ಠಾಕೂರ್ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.