ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Cylinder Blast: ಹೊಸಪೇಟೆ ಸಿಲಿಂಡರ್ ಸ್ಫೋಟ ದುರಂತ: ಮೃತರ ಸಂಖ್ಯೆ 4ಕ್ಕೇರಿಕೆ, ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

Vijayanagara News: ಹೊಸಪೇಟೆಯ ಗಾದಿಗನೂರಿನಲ್ಲಿ ಮನೆಯಲ್ಲಿದ್ದ ಅಡುಗೆ‌ ಅನಿಲ ಸಿಲಿಂಡರ್ ಸ್ಫೋಟಗೊಂಡು ಗಂಭೀರ ಗಾಯಗಳಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಪೈಕಿ ಶನಿವಾರ ಮತ್ತೆ ಇಬ್ಬರು ಮೃತಪಟ್ಟಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು.

ಸಿಲಿಂಡರ್ ಸ್ಫೋಟ ದುರಂತ: ಮೃತರ ಕುಟುಂಬಸ್ಥರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ

-

Profile Siddalinga Swamy Oct 4, 2025 5:51 PM

ವಿಜಯನಗರ: ಜಿಲ್ಲೆಯ ಹೊಸಪೇಟೆಯ ಗಾದಿಗನೂರಿನ ಮನೆಯಲ್ಲಿ ಅಡುಗೆ‌ ಅನಿಲ ಸಿಲಿಂಡರ್ ಸ್ಫೋಟಗೊಂಡು (Cylinder Blast) ಗಂಭೀರ ಗಾಯಗಳಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಪೈಕಿ ಶನಿವಾರ ಮತ್ತೆ ಇಬ್ಬರು ಮೃತಪಟ್ಟಿದ್ದಾರೆ. ಹೀಗಾಗಿ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಆಸ್ಪತ್ರೆಗೆ ಭೇಟಿ ನೀಡಿ, ಮೃತರ ಕುಂಟುಂಬಸ್ಥರಿಗೆ ಸಾಂತ್ವನ ಹೇಳಿ, ಸರ್ಕಾರದ ಪರವಾಗಿ ಮೃತರಾದ ಮೈಲಾರಪ್ಪ ಹಾಗೂ ಕವಿತಾ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದರು.

ನಂತರ ಆಂಬುಲೆನ್ಸ್ ಮೂಲಕ ಮೃತದೇಹಗಳನ್ನು ಸ್ವಗ್ರಾಮಕ್ಕೆ ಕಳುಹಿಸಿಕೊಡಲು ಸಚಿವ ಜಮೀರ್ ಅಹಮದ್ ಖಾನ್ ಅವರು ವ್ಯವಸ್ಥೆ ಮಾಡಿಕೊಟ್ಟರು. ಒಟ್ಟಾರೆ ಘಟನೆಯಲ್ಲಿ ನಾಲ್ವರು ಮೃತಪಟ್ಟಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಡಿಸ್ಚಾರ್ಜ್‌ ಆಗಿದ್ದಾರೆ.

ಈ ಸುದ್ದಿಯನ್ನೂ ಓದಿ | Skeleton: ಬೆಂಗಳೂರಿನಲ್ಲಿ ಅರ್ಧ ಕಟ್ಟಿದ ಕಟ್ಟಡದಲ್ಲಿ ಮನುಷ್ಯನ ಅಸ್ಥಿಪಂಜರ ಪತ್ತೆ

ಮುಳಬಾಗಿಲಿನಲ್ಲಿ ನಾಪತ್ತೆಯಾಗಿದ್ದ ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆ!

ಕೋಲಾರ: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಯಳಚೇಪಲ್ಲಿಯಲ್ಲಿ ನಾಪತ್ತೆಯಾಗಿದ್ದ (Girls Missing Case) ಇಬ್ಬರು ಬಾಲಕಿಯರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಮನೆ ಮುಂದೆ ಆಟವಾಡಲು ಹೋಗಿದ್ದ ವೇಳೆ ಬಾಲಕಿಯರು ನಾಪತ್ತೆಯಾಗಿದ್ದರು. ಈ ಕುರಿತು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆದರೆ, ಇದೀಗ ಬಾಲಕಿಯರು ಶವವಾಗಿ ಪತ್ತೆಯಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಮೃತ ಬಾಲಕಿಯರನ್ನು ಧನ್ಯಾಬಾಯಿ (13), ಚೈತ್ರಾಬಾಯಿ (13) ಎಂದು ಗುರುತಿಸಲಾಗಿದೆ. ಗುರುವಾರ ಮನೆ ಮುಂದೆ ಆಟವಾಡುತ್ತಿದ್ದ ಇಬ್ಬರು ಬಾಲಕಿಯರು ಏಕಾಏಕಿ ನಾಪತ್ತೆಯಾಗಿದ್ದರು. ಈ ಕುರಿತು ಬಾಲಕಿಯರ ಕುಟುಂಬಸ್ಥರು ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಈ ಸುದ್ದಿಯನ್ನೂ ಓದಿ | Drink and Drive case: ಪತ್ರಕರ್ತ ರಾಜೀವ್ ಪ್ರತಾಪ್ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್‌; ತನಿಖಾಧಿಕಾರಿಗಳು ಹೇಳಿದ್ದೇನು?

ನಾಪತ್ತೆಯಾಗಿದ್ದ ಬಾಲಕಿಯರು ಮುಳಬಾಗಿಲು ತಾಲೂಕಿನ ಕುಪ್ಪಂಪಾಳ್ಯ ಬಳಿಯಿರುವ ಬಾವಿಯೊಂದರಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದುಷ್ಕರ್ಮಿಗಳು ಕೊಲೆ ಮಾಡಿ ಬಿಸಾಡಿರಬಹುದು ಅಥವಾ ಬಾಲಕಿಯರು ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ರವಾನಿಸಿದ್ದು, ಸಾವಿಗೆ ನಿಖರ ಕಾರಣ ಏನು ಎಂಬುದು ಪೋಲಿಸ್ ತನಿಖೆಯಿಂದಲೇ ತಿಳಿಯಬೇಕಿದೆ.