Vijayanagara News: ಹೊಸಪೇಟೆಯಲ್ಲಿ ವೈದ್ಯಕೀಯ ಗರ್ಭಪಾತದ ತರಬೇತಿ ಕಾರ್ಯಾಗಾರ
Vijayanagara News: ಹೊಸಪೇಟೆ ನಗರದ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ ವೈದ್ಯಕೀಯ ಗರ್ಭಪಾತದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಟಿ. ಲಿಂಗರಾಜು ಸಸಿಗೆ ನೀರೇರುವ ಮೂಲಕ ಚಾಲನೆ ನೀಡಿದರು.
-
ವಿಜಯನಗರ, ನ.12: ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಸಭಾಂಗಣದಲ್ಲಿ (Vijayanagara News) ವೈದ್ಯಕೀಯ ಗರ್ಭಪಾತದ ತರಬೇತಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಸಮನ್ವಯ ಇಲಾಖೆಗಳಾದ ಆರೋಗ್ಯ ಇಲಾಖೆ, ನ್ಯಾಯಾಂಗ ಇಲಾಖೆ, ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೋಲಿಸ್ ಇಲಾಖೆ ಮತ್ತು ಜಿಲ್ಲಾ ಮಕ್ಕಳ ರಕ್ಷಣ ಘಟಕ, ಜಿಲ್ಲಾ ಸುಖೀ ಕೇಂದ್ರದ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಾಗಾರಕ್ಕೆ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಟಿ. ಲಿಂಗರಾಜು ಅವರು ಸಸಿಗೆ ನೀರುಣಿಸುವ ಮೂಲಕ ಚಾಲನೆ ನೀಡಿದರು.
ತರಬೇತಿ ಕಾರ್ಯಾಗಾರದಲ್ಲಿ ಜಿಲ್ಲಾ ಕಾರ್ಯಕ್ರಮಾಧಿಕಾರಿಗಳಾದ ಡಾ.ಜಂಬಯ್ಯ, ಬಿ. ಡಾ. ಷಣ್ಮುಖ ನಾಯ್ಕ್, ಡಾ.ರಾಧಿಕಾ, ಡಾ.ಸತೀಶ್, ತಾಲೂಕು ಆರೋಗ್ಯ ಅಧಿಕಾರಿಗಳು ಉಪಸ್ಥಿತರಿದ್ದರು. ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಗಂಗಪ್ಪ, ಮಕ್ಕಳ ರಕ್ಷಣಾ ಘಟಕದ ಕೋ ಆರ್ಡಿನೇಟರ್ ಚಿದಾನಂದ, ಸಖೀ ಜಿಲ್ಲಾ ಸಂಯೋಜಕಿ ವಿದ್ಯಾ ಮತ್ತು ತಾಲೂಕಿನ ಎಲ್ಲಾ ಸಖೀ ಕೇಂದ್ರದ ಎಲ್ಲಾ ಸಿಬ್ಬಂದಿಗಳು ಇದ್ದರು.
ಆಶಾ ಕಾರ್ಯಕರ್ತೆಯರು ಮತ್ತು ಎಲ್ಲಾ ಅಧಿಕಾರಿಗಳಿಗೆ ವೈದ್ಯಕೀಯ ಗರ್ಭಪಾತದ ಬಗ್ಗೆ ಕಾನೂನು ಮತ್ತು ವೈದ್ಯಕೀಯ ಮತ್ತು ಶಿಕ್ಷಣ ಇಲಾಖೆ, ನ್ಯಾಯಾಂಗ ಇಲಾಖೆಯ ಅಧಿಕಾರಿಗಳಿಗೆ ಸಮಗ್ರ ನಿಯಮ ಮತ್ತು ಅವರ ಕರ್ತವ್ಯಗಳ ಬಗ್ಗೆ ಡಾ ಬಸವರಾಜ ಮಾಹಿತಿ ನೀಡಿದರು. ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ವಿನಯ್ ಎಂ. ಪ್ರಾಸ್ತಾವಿಕ ನುಡಿಗಳನ್ನಾಡಿದರು. ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ.ದೊಡಮನಿ ಸ್ವಾಗತಿಸಿದರು. ಎಂ. ಧರ್ಮನಗೌಡ ವಂದಿಸಿದರು.