ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Vijayanagara News: ಹೊಸಪೇಟೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ

Vijayanagara News: ಹೊಸಪೇಟೆ ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎನ್. ಸುಬ್ರಹ್ಮಣ್ಯ ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಶಾಂತ ನಾಗಲಾಪುರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಹೊಸಪೇಟೆಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ

-

Profile
Siddalinga Swamy Oct 14, 2026 5:42 PM

ಹೊಸಪೇಟೆ, ಅ.14: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ವಿಭಾಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಸಂಕ್ಲಾಪುರದ ಟಿಎಂಎಸ್ ಸೊಸೈಟಿ ಕಾಲೇಜ್ ಆಫ್ ನರ್ಸಿಂಗ್ ಇವರ ಸಹಯೋಗದಲ್ಲಿ ನಗರದ (Vijayanagara News) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಲ್ಲಿ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಸಿಜೆಎಂ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಎನ್. ಸುಬ್ರಹ್ಮಣ್ಯ ಹಾಗೂ ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಪ್ರಶಾಂತ ನಾಗಲಾಪುರ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಟಿ. ಲಿಂಗರಾಜು ಅಧ್ಯಕ್ಷತೆ ವಹಿಸಿದ್ದರು.‌

ಕೆಎಸ್‌ಕ್ಯೂ ಅಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲುಗೆ ಐಸಿಸಿ ಕತಾರ್ ಸನ್ಮಾನ

ಈ ಸಂದರ್ಭದಲ್ಲಿ ವಿಜಯನಗರ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಗುಜ್ಜಲ್ ನಾಗರಾಜ, ಟಿಎಂಎಸ್ ಸೊಸೈಟಿ ಕಾಲೇಜ್ ಆಫ್ ನರ್ಸಿಂಗ್ ಪ್ರಾಂಶುಪಾಲ ಎನ್. ಸೋಮಶೇಖರ್, ಡಾ. ಜಂಬಯ್ಯ, ಡಾ. ಸತೀಶ್ ಚಂದ್ರ, ಡಾ. ವಿನಯ್, ಡಾ. ಭಾಸ್ಕರ್, ಡಾ. ಷಣ್ಮುಖ ನಾಯ್ಕ್ ಹಾಗೂ ಡಾ. ವಿನೋದ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಎಂ.ಪಿ. ದೊಡಮನಿ. ಮತ್ತು ಜಿಲ್ಲಾ ಅರೋಗ್ಯ ನಿರೀಕ್ಷಣಾಧಿಕಾರಿ ಎಂ. ಧರ್ಮನಗೌಡ, ಮಾನಸಿಕ ಆರೋಗ್ಯ ಕೌನ್ಸಿಲ್ ಮಾರೇಶ ಮತ್ತು ಮಾನಸಿಕ ಆರೋಗ್ಯ ಕಾರ್ಯಕ್ರಮದ ಎಲ್ಲಾ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದರು.