ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Earthquake: ವಿಜಯಪುರದಲ್ಲಿ 2.8 ರಿಕ್ಟರ್‌ ಮಾಪನದ ಭೂಕಂಪನ

Vijayapura: ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಭಾಗದಲ್ಲಿ ನಿನ್ನೆ ರಾತ್ರಿ ಭೂಕಂಪ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ. ಜನ ಭಯಭೀತರಾಗಿದ್ದಾರೆ. ಆದರೆ ಯಾವುದೇ ಆಸ್ತಿ ಪಾಸ್ತಿ ಹಾನಿ ಉಂಟಾಗಿಲ್ಲ. ವಿಜಯಪುರ ಭಾಗದಲ್ಲಿ ಇಂಥ ಸಣ್ಣಪುಟ್ಟ ಭೂಕಂಪನಗಳು ಆಗಾಗ ವರದಿಯಾಗುತ್ತವೆ.

ವಿಜಯಪುರ : ವಿಜಯಪುರ (Vijayapura) ಜಿಲ್ಲೆಯಲ್ಲಿ ಮತ್ತೆ ಭೂಮಿ ಕಂಪಿಸಿದ (Earthquake) ಅನುಭವವಾಗಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ವಿಜಯಪುರ ಜಿಲ್ಲೆಯ ತಿಕೋಟ ತಾಲೂಕಿನ ಭಾಗದಲ್ಲಿ ಭೂಕಂಪ ಅನುಭವವಾಗಿದೆ. ರಿಕ್ಟರ್ ಮಾಪಕದಲ್ಲಿ 2.8 ರಷ್ಟು ತೀವ್ರತೆ ದಾಖಲಾಗಿದೆ. ಸೆಸ್ಮಿಕ್ ತೀವ್ರತೆಯ ನಕ್ಷೆಯ ಪ್ರಕಾರ, ಭೂಕಂಪನದ ತೀವ್ರತೆಯು ತುಂಬಾ ಕಡಿಮೆ ಇದೆ. ತೀವ್ರತೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಈ ರೀತಿಯ ಭೂಕಂಪಗಳು ಜನವಸತಿಗೆ ಯಾವುದೇ ಹಾನಿಯನ್ನುಂಟುಮಾಡುವುದಿಲ್ಲ. ಆದರೂ ಕಂಪನಗಳನ್ನು ಜನ ಅನುಭವಿಸಿದ್ದಾರೆ ಎಂದು ಗೊತ್ತಾಗಿದೆ.

ವಿಜಯಪುರ ವಿಮಾನ ನಿಲ್ದಾಣ ಸುಧಾರಣೆಗೆ 270.83 ಕೋಟಿ ರೂ.

ಬೆಂಗಳೂರು: ಏರ್‌ಬಸ್‌-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್‌ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್‌ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ (MB Patil) ಹೇಳಿದ್ದಾರೆ. ಈ ಬಗ್ಗೆ ವಿವರ ಮಾಹಿತಿ ನೀಡಿರುವ ಅವರು, ʻಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ, ಒಪ್ಪಿಗೆ ನೀಡಲಾಗಿದೆ. ಇದರಿಂದಾಗಿ ವಿಜಯಪುರ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಒಟ್ಟು ವೆಚ್ಚವು 618.75 ಕೋಟಿ ರೂ.ಗಳಾಗಲಿದೆ. ಎಟಿಆರ್‌ ಮಾದರಿಯ ನಾಗರಿಕ ವಿಮಾನ ಕಾರ್ಯಾಚರಣೆಗೆ ಸೀಮಿತವಾಗಿದ್ದ ವಿಮಾನ ನಿಲ್ದಾಣದ ಮೂಲ ವಿನ್ಯಾಸವನ್ನು ಏರ್‌ಬಸ್‌-320 ಮಾದರಿಯ ವಿಮಾನಗಳ ಕಾರ್ಯಾಚರಣೆಗೂ ಅನುಕೂಲವಾಗುವಂತೆ ಬದಲಿಸಿದ್ದರಿಂದ ವೆಚ್ಚ ಹೆಚ್ಚಾಗುತ್ತಿದೆʼ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: Campa Cola: ವಿಜಯಪುರದಲ್ಲಿ ರಿಲಯನ್ಸ್‌ನ ಕ್ಯಾಂಪಾ ಕೋಲಾ ಘಟಕ; ವಿವಿಧ ಕಂಪನಿಗಳಿಂದ 17 ಸಾವಿರ ಕೋಟಿ ರೂ. ಹೂಡಿಕೆ ಪ್ರಸ್ತಾಪ

ವಿಮಾನ ನಿಲ್ದಾಣದ ಮೂಲವಿನ್ಯಾಸವನ್ನು ಚಿಕ್ಕ ವಿಮಾನಗಳನ್ನು ಗಮನದಲ್ಲಿ ಇಟ್ಟಿಕೊಂಡು ಮಾತ್ರ ಮಾಡಲಾಗಿತ್ತು. ಅದರಲ್ಲಿ ಏರ್‌ಬಸ್‌ ಮಾದರಿಯ ವಿಮಾನ ಕಾರ್ಯಾಚರಣೆಗಳಿಗಾಗಲಿ, ನೈಟ್‌ ಲ್ಯಾಂಡಿಂಗ್‌ಗಾಗಲಿ ಅವಕಾಶವಿರಲಿಲ್ಲ. ಆದರೆ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ಉತ್ತರ ಕರ್ನಾಟಕದ ನಗರಗಳು ಕ್ಷಿಪ್ರವಾಗಿ ಬೆಳೆಯುತ್ತಿವೆ. ಜತೆಗೆ ಮಹಾರಾಷ್ಟ್ರದ ಸೊಲ್ಲಾಪುರ, ಸತಾರಾ ಜಿಲ್ಲೆಗಳೂ ವಿಜಯಪುರಕ್ಕೆ ಹತ್ತಿರವಾಗಿವೆ. ಇತ್ತ ಬೆಳಗಾವಿ, ಕಲಬುರಗಿ ಜಿಲ್ಲೆಯ ಹಲವು ತಾಲೂಕುಗಳ ಒಡನಾಟವೂ ವಿಜಯಪುರದೊಂದಿಗೆ ಹೆಚ್ಚಾಗಿದೆ. ಹೀಗಾಗಿ ಮುಂದಿನ ಐವತ್ತು ವರ್ಷಗಳ ಅಗತ್ಯವನ್ನು ಪರಿಗಣಿಸಿ, ಹಲವು ಹೆಚ್ಚುವರಿ ಸೌಲಭ್ಯಗಳನ್ನು ಈಗ ಸೇರಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಈಗ ಒದಗಿಸಲಾಗಿರುವ ಹಣದಲ್ಲಿ ನೈಟ್‌ ಲ್ಯಾಂಡಿಂಗ್‌ ಸಂಬಂಧಿತ ಕಾಮಗಾರಿಗಳು, ರನ್‌ವೇಯ ಎರಡೂ ಬದಿಗಳಿಗೆ ಪೇವ್ಡ್‌ ಶೋಲ್ಡರ್‌ ನಿರ್ಮಾಣ ಮತ್ತು ಭೂಸ್ವಾಧೀನಕ್ಕೆ ಸಂಬಂಧಿಸಿದ ಪರಿಹಾರ ಬಾಬ್ತಿಗೆ 65 ಕೋಟಿ ರೂ. ವಿನಿಯೋಗಿಸಲಾಗುವುದು. ವಿಜಯಪುರ ವಿಮಾನ ನಿಲ್ದಾಣದಿಂದ ರಾ.ಹೆ.50ಕ್ಕೆ ಸಂಪರ್ಕ ಕಲ್ಪಿಸಲಿರುವ ಮೀಸಲು ರಸ್ತೆಯ ಅಭಿವೃದ್ಧಿಗೆ 52 ಕೋಟಿ ರೂ. ವೆಚ್ಚವಾಗಲಿದೆ. ವಿಮಾನ ನಿಲ್ದಾಣದ ಮೂಲವಿನ್ಯಾಸದಲ್ಲಿ ಇವುಗಳ ಪ್ರಸ್ತಾಪವೇ ಇರಲಿಲ್ಲ ಎಂದು ಅವರು ತಿಳಿಸಿದ್ದಾರೆ.

ಹರೀಶ್‌ ಕೇರ

View all posts by this author