ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Assault Case: ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ; ಇಟ್ಟಿಗೆ ಭಟ್ಟಿ ಮಾಲೀಕ ಸೇರಿ ಮೂವರ ಬಂಧನ

Assault Case: ಜ.18ರಂದು ಮಾಲೀಕ ಖೇಮು ರಾಥೋಡ್, ಸಹಚರರಿಂದ ವಿಜಯಪುರ ಹೊರವಲಯದ ಇಟ್ಟಿಗೆ ಕಾರ್ಖಾನೆಯಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಚಿಕ್ಕಲಕಿ ಗ್ರಾಮದ ಕಾರ್ಮಿಕರ ಮೇಲೆ ಹಲ್ಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಇಟ್ಟಿಗೆ ಭಟ್ಟಿ ಮಾಲೀಕ ಸೇರಿ ಮೂವರು ಅರೆಸ್ಟ್‌ ಆಗಿದ್ದಾರೆ.

Assault Case: ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ; ಇಟ್ಟಿಗೆ ಭಟ್ಟಿ ಮಾಲೀಕ ಸೇರಿ ಮೂವರ ಬಂಧನ

Profile Prabhakara R Jan 20, 2025 7:30 PM

ವಿಜಯಪುರ, ಜನವರಿ 20: ಮೂವರು ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣಕ್ಕೆ ( Assault Case) ಸಂಬಂಧಿಸಿ ಇಟ್ಟಿಗೆ ಭಟ್ಟಿ ಮಾಲೀಕ ಸೇರಿ ಮೂವರನ್ನು ವಿಜಯಪುರ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ. ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಮಾಲೀಕ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದರಿಂದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿತ್ತು. ಇದರ ಬೆನ್ನೆಲ್ಲೇ ಮಾಲೀಕ ಸೇರಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್, ವಿಶಾಲ ಜುಮನಾಳ ಹಾಗೂ ಸಚಿನ್ ಮಾನವರ್‌ನನ್ನು ಪೊಲೀಸರು ಗಾಂಧಿನಗರದ ಖೇಮು ನಿವಾಸದಲ್ಲಿ ಬಂಧಿಸಿದ್ದಾರೆ. ಇನ್ನು ಪರಾರಿಯಾದ ಇಬ್ಬರಿಗಾಗಿ ಹುಡುಕಾಟ ನಡೆಯುತ್ತಿದೆ.

ಈ ಬಗ್ಗೆ ವಿಜಯಪುರ ಎಸ್‌ಪಿ ಲಕ್ಷ್ಮಣ ನಿಂಬರಗಿ ಪ್ರತಿಕ್ರಿಯಿಸಿ, ಜನವರಿ 18ರಂದು ಮಾಲೀಕ ಖೇಮು ರಾಥೋಡ್, ಸಹಚರರಿಂದ ವಿಜಯಪುರ ಹೊರವಲಯದ ಇಟ್ಟಿಗೆ ಕಾರ್ಖಾನೆಯಲ್ಲಿ ಬಾಗಲಕೋಟೆ ಜಿಲ್ಲೆಯ ಜಮಖಂಡಿ ಚಿಕ್ಕಲಕಿ ಗ್ರಾಮದ ಕಾರ್ಮಿಕರ ಮೇಲೆ ಹಲ್ಲೆ ಮಾಡಲಾಗಿದೆ. ಮುಂಗಡ ಹಣ, ಕೆಲಸ ಮಾಡುವ ವಿಚಾರವಾಗಿ ಹಲ್ಲೆ ನಡೆದಿದೆ ಎಂದರು.

ಸಂಕ್ರಾಂತಿ ಹಬ್ಬಕ್ಕೆ ಹೋಗಿದ್ದವರು ಹಿಂದಿರುಗುವುದು ತಡವಾಗಿದ್ದಕ್ಕೆ ಮೂವರು ಕಾರ್ಮಿಕರ ಪಾದಗಳಿಗೆ ಕಟ್ಟಿಗೆ, ಪೈಪ್​ಗಳಿಂದ ಹೊಡೆದಿದ್ದಾರೆ. ಕಾರ್ಮಿಕರ ಮೇಲೆ ಹಲ್ಲೆ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಅಮಾನವೀಯ ಹಲ್ಲೆ ಸಂಬಂಧ ಪ್ರಕರಣ ದಾಖಲಿಸಿ ಮೂವರನ್ನು ಬಂಧಿಸಲಾಗಿದೆ. ಪರಾರಿಯಾಗಿರುವ ಇಬ್ಬರು ಆರೋಪಿಗಳಿಗಾಗಿ ಶೋಧ ನಡೆಯುತ್ತಿದೆ. ಹಲ್ಲೆಗೊಳಗಾದ ಕಾರ್ಮಿಕರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದರು.

ಈ ಸುದ್ದಿಯನ್ನೂ ಓದಿ | Kolkata Horror: ಕೊಲ್ಕತ್ತಾ ವೈದ್ಯೆ ಕೊಲೆ ಪ್ರಕರಣ; 17 ಲಕ್ಷ ಪರಿಹಾರ ತಿರಸ್ಕರಿಸಿದ ಪೋಷಕರು

ಹಾಡಹಗಲೇ ಮೈಸೂರಿನಲ್ಲಿ ಉದ್ಯಮಿ ದರೋಡೆ, ಕಾರು- ಹಣ ಸಮೇತ ದುಷ್ಕರ್ಮಿಗಳು ಪರಾರಿ

ಮೈಸೂರು: ಮೈಸೂರಿನಲ್ಲಿ (Mysuru news) ಬೆಚ್ಚಿ ಬೀಳಿಸುವಂಥ ಘಟನೆ ನಡೆದಿದೆ. ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆ (Robbery Case) ಮಾಡಿದ್ದಾರೆ. ಉದ್ಯಮಿಯ ಬಳಿ ಇದ್ದ ಹಣ ಕಸಿದುಕೊಂಡು ಕಾರು ಸಮೇತ ಪರಾರಿಯಾಗಿದ್ದಾರೆ. ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.

ರಾಜ್ಯದ ಹಲವು ಕಡೆ ದರೋಡೆ ಸುದ್ದಿಗಳು ಕೇಳಿಬರುತ್ತಿರುವ ನಡುವೆಯೇ ಈ ಘಟನೆ ನಡೆದಿದೆ. ಕೇರಳ ಮೂಲದ ಉದ್ಯಮಿ ಸೂಫಿ ಎಂಬವರಿಗೆ ಸೇರಿದ ಇನ್ನೋವಾ ಕಾರು, ಹಣ ಎಗರಿಸಿಕೊಂಡು ಖದೀಮರು ಪರಾರಿಯಾಗಿದ್ದಾರೆ. ಎರಡು ಕಾರುಗಳಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿಗಳು ಉದ್ಯಮಿ ಸೂಫಿ ಅವರ ಕಾರು ಕಿತ್ತುಕೊಂಡ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.

ಮೈಸೂರಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಡಿವೈಎಸ್‌ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉದ್ಯಮಿ ಸೂಫಿಯಿಂದ ಜಯಪುರ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.

ಇತ್ತೀಚೆಗೆ ಹಲವು ದರೋಡೆ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿವೆ. ಬೀದರ್​​ನಲ್ಲಿ ಎಟಿಎಂಗೆ ಹಣ ತುಂಬಿಸುವವರ ಮೇಲೆ ಶೂಟೌಟ್ ನಡೆಸಿ ಇಬ್ಬರನ್ನು ಸಾಯಿಸಿ ಹಣ ದರೋಡೆ ಮಾಡಲಾಗಿತ್ತು. ಮಂಗಳೂರಿನ ಉಳ್ಳಾಲ ಕೋಟೆಕಾರು ಎಂಬಲ್ಲಿ ಬ್ಯಾಂಕ್ ದರೋಡೆ ಮಾಡಲಾಗಿತ್ತು. ಇವುಗಳ ಬೆನ್ನಲ್ಲೇ ಮೈಸೂರಿನಲ್ಲಿಯೂ ಹಾಡಹಗಲೇ ಈ ಕೃತ್ಯ ನಡೆದಿದೆ.

ಈ ಸುದ್ದಿಯನ್ನೂ ಓದಿ | ಆನ್‌ಲೈನ್ ಗೇಮ್‌ಗೆ ಯುವಕ ಬಲಿ; ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ