Assault Case: ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ; ಮತ್ತೊಂದು ವಿಡಿಯೊ ವೈರಲ್

Assault Case: ಪ್ರಕರಣ ಸಂಬಂಧ ಈಗಾಗಲೇ ಐದು ಜನರನ್ನ ಬಂಧಿಸಿದ್ದು, ಅವರೆಲ್ಲಾ ನ್ಯಾಯಾಂಗ ಬಂಧನಲ್ಲಿದ್ದಾರೆ. ಇದೀಗ ಇಟ್ಟಿಗೆ ಭಟ್ಟಿ ಕಾರ್ಮಿಕರ ಮೇಲೆ ಹಲ್ಲೆಗೆ ಸಂಬಂಧಿಸಿ ಮತ್ತೊಂದು ವಿಡಿಯೊ ವೈರಲ್‌ ಆಗುತ್ತಿದೆ.

Assault Case (1)
Profile Prabhakara R January 22, 2025

ವಿಜಯಪುರ: ಇಟ್ಟಿಗೆ ಭಟ್ಟಿಯಲ್ಲಿ ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣದಲ್ಲಿ ಈಗಾಗಲೇ ಐವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣಕ್ಕೆ (Assault Case) ಇದೀಗ ಮತ್ತೊಂದು ಹಲ್ಲೆ ವಿಡಿಯೊ ವೈರಲ್‌ ಆಗಿದ್ದು, ಇದರಲ್ಲಿ ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಲ್ಲೆ ನಡೆಸಿರುವುದು ಕಂಡುಬಂದಿದೆ.

ಈ ಹಿಂದಿನ ವಿಡಿಯೊದಲ್ಲಿ ಇಬ್ಬರು ಕಾರ್ಮಿಕರ ಕಾಲಿಗೆ ಪೈಪ್‌ನಿಂದ ಹೊಡೆಯುತ್ತಿರುವುದು ಬೆಳಕಿಗೆ ಬಂದಿತ್ತು. ಇದೀಗ ಬೆಳಕಿಗೆ ಬಂದಿರುವ ವಿಡಿಯೊದಲ್ಲಿ ಕಾರ್ಮಿಕರ ಕೈಗಳಿಗೆ ಪೈಪ್​ನಿಂದ ಹೊಡೆಯಲಾಗಿದೆ. ಬಳಿಕ ಸುಡುವ ಬೂದಿಯಲ್ಲಿ ಕೈ ಉಜ್ಜುವ ಶಿಕ್ಷೆ ನೀಡಲಾಗಿದ್ದು,ಇಟ್ಟಿಗೆ ತಯಾರಿಸುವ ಬಿಸಿ ಬಿಸಿ ಬೂದಿಯಲ್ಲಿ ಕಾರ್ಮಿಕರು ಕೈ ಉಜ್ಜುವ ದೃಶ್ಯ ಇದರಲ್ಲಿದೆ.

ಈಗ ವೈರಲ್ ಆಗಿರುವ ವಿಡಿಯೊದಲ್ಲಿ ಮೂವರ ಮೇಲೂ ಹಲ್ಲೆ ಮಾಡಿರುವುದು ದಾಖಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಐದು ಜನರನ್ನ ಬಂಧಿಸಿದ್ದು, ಅವರೆಲ್ಲಾ ನ್ಯಾಯಾಂಗ ಬಂಧನಲ್ಲಿದ್ದಾರೆ. ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್, ಸಚಿನ್ ಮಾನವರ್, ವಿಶಾಲ್ ಜುಮನಾಳ್, ರೋಹನ್ ರಾಠೋಡ ಮತ್ತು ಕನಕಮೂರ್ತಿ ಎಂಬುವರನ್ನು ಬಂಧಿಸಲಾಗಿದೆ.

ಈ ಸುದ್ದಿಯನ್ನೂ ಓದಿ | Pavithra Gowda: ಸೋಶಿಯಲ್ ಮೀಡಿಯಾಗೆ ಪವಿತ್ರಾ ಗೌಡ ಕಮ್ ಬ್ಯಾಕ್, ಜೈಲಿನಿಂದ ಬಂದ ನಂತರ ಮೊದಲ ಪೋಸ್ಟ್‌

ಆರೋಪಿಗಳೊಂದಿಗೆ ಸ್ಥಳ ಮಹಜರು

ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆಯ ಪೊಲೀಸರು, ಬಂಧಿತ ಐವರು ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ದ ಮಂಗಳವಾರ ಸ್ಥಳ ಮಹಜರು ನಡೆಸಿದರು.

ವಿಜಯಪುರದ ಗಾಂಧಿ ನಗರದ ಹೊರವಲಯದ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿತ್ತು. ಗ್ರಾಮೀಣ ಠಾಣೆಯ ಸಿಪಿಐ ರಾಯಗೊಂಡ ಜಾನರ್ ನೇತೃತ್ವದಲ್ಲಿ ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ದು, ಸ್ಥಳ ಮಹಜರು ನಡೆಸಲಾಗಿದೆ.

ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಮಾಲೀಕ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದರಿಂದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್ ಸೇರಿದಂತೆ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಈ ಸುದ್ದಿಯನ್ನೂ ಓದಿ | Viral Video: ಕಂದಾಯ ಇಲಾಖೆಯ ಕಚೇರಿಯಲ್ಲಿ ಮಹಿಳೆಗೆ ಶೂನಿಂದ ಥಳಿಸಿದ ಗುಮಾಸ್ತ; ವಿಡಿಯೊ ವೈರಲ್

Three labourers brutally assaulted by brick kiln owner
1:53 PM January 20, 2025

Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!

Saif Ali Khan, Ibrahim
2:50 PM January 16, 2025

Saif Ali Khan: 1,200 ಕೋಟಿ ರೂ. ಆಸ್ತಿಗಳ ಒಡೆಯ ಸೈಫ್‌ ಆಲಿ ಖಾನ್‌ನನ್ನು‌ ಆಟೋದಲ್ಲಿ ಆಸ್ಪತ್ರೆಗೆ ಕರೆದೊಯ್ದ ಪುತ್ರ ಇಬ್ರಾಹಿಂ; ಕಾರಣವೇನು?

Student dies 1
8:51 PM January 18, 2025

Heart Attack: ಕಾಲೇಜು ಮುಗಿಸಿ ಹೋಗುವಾಗ ಹೃದಯಾಘಾತವಾಗಿ ವಿದ್ಯಾರ್ಥಿನಿ ಸಾವು

robbery case shooting
1:49 PM January 16, 2025

Murder Case: ಸೆಕ್ಯೂರಿಟಿ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ ಮಾಡಿ 93 ಲಕ್ಷ ರೂ. ದರೋಡೆ

BBK 11 Mid week Elimination (1)
9:12 PM January 15, 2025

BBK 11: ಇಂದೇ ನಡೆಯಲಿದೆ ಮಿಡ್ ವೀಕ್ ಎಲಿಮಿನೇಷನ್: ಔಟ್ ಆದ ಸ್ಪರ್ಧಿ ಇವರೇ ನೋಡಿ

Saif ali Khan (1)
9:38 AM January 18, 2025

Saif Ali Khan: ರಕ್ತಸಿಕ್ತವಾದ ಬಟ್ಟೆ, ಸಂಪೂರ್ಣ ಅಸ್ವಸ್ಥರಾಗಿದ್ದ ಸೈಫ್‌! ಆ ರಾತ್ರಿ ನಡೆದಿದ್ದಾದರೂ ಏನು? ಆಟೋ ಡ್ರೈವರ್‌ ಹೇಳಿದ್ದೇನು?

Naga Sadhus
11:15 PM January 18, 2025

Maha Kumbh Mela: ಕುಂಭಮೇಳದ ವೇಳೆ ನಾಗ ಸಾಧುಗಳು ಬರುವುದೆಲ್ಲಿಂದ? ಬಳಿಕ ಅಪ್ರತ್ಯಕ್ಷರಾಗುವುದೇಕೆ? ಅವರ ನಿಗೂಢ ಪ್ರಪಂಚ ಹೇಗಿದೆ? ಇಲ್ಲಿದೆ ಸಮಗ್ರ ವಿವರ

Chaithra Kundapura remuneration (1)
7:13 AM January 16, 2025

BBK 11: ಬಿಗ್ ಬಾಸ್​ನಿಂದ ಹೊರಬಂದ ಚೈತ್ರಾ ಕುಂದಾಪುರಗೆ ಸಿಕ್ಕ ಹಣ ಎಷ್ಟು ಗೊತ್ತೇ?

Honnamaradi jatre
5:53 PM January 15, 2025

Honnamaradi Jatre: ವೈಭವದಿಂದ ನಡೆದ ಹೊನ್ನಮರಡಿ ಜಾತ್ರೆ; ಶ್ರೀ ರಂಗನಾಥಸ್ವಾಮಿ ದರ್ಶನ ಪಡೆದ ಸಾವಿರಾರು ಭಕ್ತರು

Eshwara Khandre
6:54 PM January 16, 2025

Bidar ATM Robbery: ಬೀದರ್ ಎಟಿಎಂ ದರೋಡೆ ಪ್ರಕರಣ; ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸಚಿವ ಖಂಡ್ರೆ ಸೂಚನೆ