Assault case: ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ; ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ರಾಕ್ಷಸಿ ಕೃತ್ಯ!
Assault case: ಅಡ್ವಾನ್ಸ್ಡ್ ಹಣ ಪಡೆದು, ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರುವುದು ವಿಳಂಬವಾಗಿದ್ದಕ್ಕೆ ಮಾಲೀಕ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ವಿಜಯಪುರ ನಗರದ ಸಿಂದಗಿ ರಸ್ತೆಯಲ್ಲಿ ಘಟನೆ ನಡೆದಿದೆ.
ವಿಜಯಪುರ: ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ನಗರದಲ್ಲಿ ನಡೆದಿದೆ. ವಿಜಯಪುರ ನಗರದ ಸಿಂದಗಿ ರಸ್ತೆಯಲ್ಲಿರುವ ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ ಎಂಬಾತ ರಾಕ್ಷಸಿ ಕೃತ್ಯ ಎಸಗಿದ್ದಾನೆ.
ನಾಗರಿಕ ಸಮಾಜ ತಲೆತಗ್ಗಿಸುವ ಘಟನೆ ವಿಡಿಯೊ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಟ್ಟಿಗೆ ಭಟ್ಟಿಯಲ್ಲಿ ಪೈಪ್‌ಗಳಿಂದ ಕಾರ್ಮಿಕರ ಮೇಲೆ ಮನಬಂದಂತೆ ಹಲ್ಲೆ ಮಾಡಲಾಗಿದೆ. ಬಿಡಿ... ಬಿಡಿ... ಎಂದು ಪರಿಪರಿಯಾಗಿ ಕೇಳಿಕೊಂಡರೂ ಬಿಡದೇ ಅಮಾನುಷವಾಗಿ ಹಲ್ಲೆ ನಡೆಸಲಾಗಿದೆ.
ಗಾಂಧಿ ನಗರದ ಸ್ಟಾರ್ ಚೌಕ್ ಬಳಿ ಇಟ್ಟಿಗೆ ಭಟ್ಟಿಯಲ್ಲಿ ಘಟನೆ ನಡೆದಿದ್ದ,
ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದ ಮೂವರು ಕಾರ್ಮಿಕರ ಮೇಲೆ ಹಲ್ಲೆ ನಡೆದಿದೆ. ಸದಾಶಿವ ಮಾದರ್, ಸದಾಶಿವ ಬಬಲಾದಿ, ಉಮೇಶ ಮಾದರ್ ಎಂಬುವರ ಮೇಲೆ ಪೈಪ್‌ಗಳನ್ನು ಬಳಸಿ ಅಂಗಾಲಿಗೆ ಮನಸೋ ಇಚ್ಛೆ ಹಲ್ಲೆ ಮಾಡಲಾಗಿದೆ.
ಅಡ್ವಾನ್ಸ್ಡ್ ಹಣ ಪಡೆದು, ಹಬ್ಬಕ್ಕೆ ಊರಿಗೆ ಹೋಗಿ ವಾಪಸ್ ಬರುವುದು ವಿಳಂಬವಾಗಿದ್ದಕ್ಕೆ ಮಾಲೀಕ ಹಲ್ಲೆ ನಡೆಸಿದ್ದಾನೆ ಎಂದು ತಿಳಿದುಬಂದಿದೆ. ಗಾಯಾಳು ಕಾರ್ಮಿಕರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಈ ಸುದ್ದಿಯನ್ನೂ ಓದಿ | Saif Ali Khan : ಇವನು ಅವನಲ್ಲ ಅಂತಾ ಹೇಳ್ತಾ ಇರೋ ನೆಟ್ಟಿಗರು ! ಸೈಫ್ ಅಲಿ ಖಾನ್‌ಗೆ ಇರಿದ ಆರೋಪಿಯನ್ನು ಬಿಟ್ಟು ಬೇರೆಯವರನ್ನು ಬಂಧಿಸಿದ್ರಾ ಪೊಲೀಸರು ?
ತಪ್ಪಿತಸ್ಥರ ಮೇಲೆ ಕಠಿಣ ಕ್ರಮ: ಸಚಿವ ಎಂ.ಬಿ.ಪಾಟೀಲ್
ವಿಜಯಪುರ ನಗರದ ಹೊರಭಾಗದಲ್ಲಿರುವ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಖಂಡನೀಯ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿರುವೆ. ಆರೋಪಿಗಳನ್ನು ತ್ವರಿತವಾಗಿ ಬಂಧಿಸಿ, ಕಾನೂನು ಪ್ರಕ್ರಿಯೆಯ ಮೂಲಕ ಕಠಿಣ ಕ್ರಮ ಕೈಗೊಳ್ಳಲಾಗುವುದು. ಪ್ರಕರಣ ದಾಖಲಾಗಿದ್ದು, ಶೀಘ್ರದಲ್ಲೇ ತನಿಖೆ ಆರಂಭವಾಗಲಿದೆ ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಹಾಡಹಗಲೇ ಮೈಸೂರಿನಲ್ಲಿ ಉದ್ಯಮಿ ದರೋಡೆ, ಕಾರು- ಹಣ ಸಮೇತ ದುಷ್ಕರ್ಮಿಗಳು ಪರಾರಿ
ಮೈಸೂರು: ಮೈಸೂರಿನಲ್ಲಿ (Mysuru news) ಬೆಚ್ಚಿ ಬೀಳಿಸುವಂಥ ಘಟನೆ ನಡೆದಿದೆ. ಉದ್ಯಮಿಯೊಬ್ಬರನ್ನು ದುಷ್ಕರ್ಮಿಗಳು ಹಾಡಹಗಲೇ ಕಾರು ಅಡ್ಡಗಟ್ಟಿ ದರೋಡೆ (Robbery Case) ಮಾಡಿದ್ದಾರೆ. ಉದ್ಯಮಿಯ ಬಳಿ ಇದ್ದ ಹಣ ಕಸಿದುಕೊಂಡು ಕಾರು ಸಮೇತ ಪರಾರಿಯಾಗಿದ್ದಾರೆ. ಮೈಸೂರು ತಾಲೂಕಿನ ಹಾರೋಹಳ್ಳಿ ಗ್ರಾಮದ ಬಳಿ ಘಟನೆ ನಡೆದಿದೆ.
ರಾಜ್ಯದ ಹಲವು ಕಡೆ ದರೋಡೆ ಸುದ್ದಿಗಳು ಕೇಳಿಬರುತ್ತಿರುವ ನಡುವೆಯೇ ಈ ಘಟನೆ ನಡೆದಿದೆ. ಕೇರಳ ಮೂಲದ ಉದ್ಯಮಿ ಸೂಫಿ ಎಂಬವರಿಗೆ ಸೇರಿದ ಇನ್ನೋವಾ ಕಾರು, ಹಣ ಎಗರಿಸಿಕೊಂಡು ಖದೀಮರು ಪರಾರಿಯಾಗಿದ್ದಾರೆ. ಎರಡು ಕಾರುಗಳಲ್ಲಿ ಬಂದಿದ್ದ ನಾಲ್ವರು ಮುಸುಕುಧಾರಿಗಳು ಉದ್ಯಮಿ ಸೂಫಿ ಅವರ ಕಾರು ಕಿತ್ತುಕೊಂಡ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.
ಮೈಸೂರಿನ ಜಯಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸ್ಥಳಕ್ಕೆ ಡಿವೈಎಸ್‌ಪಿ ರಘು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಉದ್ಯಮಿ ಸೂಫಿಯಿಂದ ಜಯಪುರ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ.
ಈ ಸುದ್ದಿಯನ್ನೂ ಓದಿ | Sharon Raj Murder Case: ಕೇರಳದ ಶರೋನ್ ರಾಜ್ ಕೊಲೆ ಪ್ರಕರಣ; ಪ್ರೇಯಸಿ ಗ್ರೀಷ್ಮಾಗೆ ಗಲ್ಲುಶಿಕ್ಷೆ!
ಇತ್ತೀಚೆಗೆ ಹಲವು ದರೋಡೆ ಪ್ರಕರಣಗಳು ರಾಜ್ಯದಲ್ಲಿ ವರದಿಯಾಗಿವೆ. ಬೀದರ್ನಲ್ಲಿ ಎಟಿಎಂಗೆ ಹಣ ತುಂಬಿಸುವವರ ಮೇಲೆ ಶೂಟೌಟ್ ನಡೆಸಿ ಇಬ್ಬರನ್ನು ಸಾಯಿಸಿ ಹಣ ದರೋಡೆ ಮಾಡಲಾಗಿತ್ತು. ಮಂಗಳೂರಿನ ಉಳ್ಳಾಲ ಕೋಟೆಕಾರು ಎಂಬಲ್ಲಿ ಬ್ಯಾಂಕ್ ದರೋಡೆ ಮಾಡಲಾಗಿತ್ತು. ಇವುಗಳ ಬೆನ್ನಲ್ಲೇ ಮೈಸೂರಿನಲ್ಲಿಯೂ ಹಾಡಹಗಲೇ ಈ ಕೃತ್ಯ ನಡೆದಿದೆ.