Assault Case: ಕಾರ್ಮಿಕರ ಮೇಲೆ ಹಲ್ಲೆ ಪ್ರಕರಣ; ಆರೋಪಿಗಳಿಂದ ಸ್ಥಳ ಮಹಜರು
Assault Case: ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆಯ ಪೊಲೀಸರು, ಬಂಧಿತ ಐವರು ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ದ ಇಂದು ಸ್ಥಳ ಮಹಜರು ನಡೆಸಿದ್ದಾರೆ.
ವಿಜಯಪುರ: ಕೆಲಸಕ್ಕೆ ಬರುವುದು ವಿಳಂಬವಾಗಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಇಟ್ಟಿಗೆ ಭಟ್ಟಿ ಮಾಲೀಕ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮೀಣ ಠಾಣೆಯ ಪೊಲೀಸರು, ಬಂಧಿತ ಐವರು ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ದ ಮಂಗಳವಾರ (ಜ. 21) ಸ್ಥಳ ಮಹಜರು ನಡೆಸಿದ್ದಾರೆ.
ವಿಜಯಪುರದ ಗಾಂಧಿ ನಗರದ ಹೊರವಲಯದ ಇಟ್ಟಿಗೆ ಭಟ್ಟಿಯಲ್ಲಿ ಮೂವರು ಕಾರ್ಮಿಕರ ಮೇಲೆ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಗ್ರಾಮೀಣ ಠಾಣೆಯ ಸಿಪಿಐ ರಾಯಗೊಂಡ ಜಾನರ್ ನೇತೃತ್ವದಲ್ಲಿ ಇಂದು ಆರೋಪಿಗಳನ್ನು ಘಟನಾ ಸ್ಥಳಕ್ಕೆ ಕರೆದೊಯ್ದು, ಸ್ಥಳ ಮಹಜರು ನಡೆಸಿದ್ದಾರೆ.
ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಮೂವರು ಕಾರ್ಮಿಕರ ಮೇಲೆ ಮಾಲೀಕ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದರಿಂದ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ ಕೇಳಿಬಂದಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್ ಸೇರಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದರು.
ಈ ಸುದ್ದಿಯನ್ನೂ ಓದಿ | Viral Video: ಕಂದಾಯ ಇಲಾಖೆಯ ಕಚೇರಿಯಲ್ಲಿ ಮಹಿಳೆಗೆ ಶೂನಿಂದ ಥಳಿಸಿದ ಗುಮಾಸ್ತ; ವಿಡಿಯೊ ವೈರಲ್