ವಿಜಯಪುರ: ಬಿಜೆಪಿಯ ಪ್ರಮುಖ ನಾಯಕ ಬಸನಗೌಡ ಪಾಟೀಲ್ ಯತ್ನಾಳ ಅವರನ್ನು ಪಕ್ಷದಿಂದ ಉಚ್ಛಾಟನೆ ಹಿನ್ನೆಲೆಯಲ್ಲಿ ಇದನ್ನು ವಿರೋಧಿಸಿ ರಾಜೀನಾಮೆ ನೀಡಿದ್ದ ಪದಾಧಿಕಾರಿ ಅಪಘಾತದಲ್ಲಿ ಮೃತಪಟ್ಟಿದ್ದಾರ. ಬಿಜೆಪಿ ನಗರ ಎಸ್ಟಿ ಮೋರ್ಚಾದ ಕಾರ್ಯದರ್ಶಿ ಸಂತೋಷ ತಟಗಾರ ಪ್ರಯಾಣಿಸುತ್ತಿದ್ದ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಯಾಗಿ ಈ ಘಟನೆ ನಡೆದಿದೆ.
ಇದನ್ನೂ ಓದಿ: Vijayapura Breaking: ಆದಾಯ ಮೀರಿ ಆಸ್ತಿ ಗಳಿಕೆ: ಕೆಎಚ್‌ಬಿ ಎಫ್ ಡಿ ಎ ಶಿವಾನಂದ ಕೆಂಬಾವಿಗೆ ಲೋಕಾಯುಕ್ತ ಬಿಸಿ
ಯತ್ನಾಳ ಅವರನ್ನು ಪಕ್ಷದಿಂದ ಉಚ್ಚಾಟನೆ ಮಾಡಿರಬಹುದು, ಜನರ ಮನಸ್ಸಿನಿಂದ ಉಚ್ಛಾಟನೆ ಮಾಡಲಾಗಲ್ಲ. ವೇಟ್ ಆ್ಯಂಡ್ ಸೀ ಎಂದು ಬಿಜೆಪಿಗೆ ಭಾವಪೂರ್ವ ಶ್ರದ್ಧಾಂಜ ಲಿ ಎಂದು ಸಂತೋಷ ತಟಗಾರ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದರು.