Double Murder: ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಡಬಲ್ ಮರ್ಡರ್! ಕಲ್ಲಿನಿಂದ ಜಜ್ಜಿ ಯುವಕರ ಬರ್ಬರ ಹತ್ಯೆ
Vijayapur Double Murder Case: ರಾಜ್ಯದಲ್ಲಿ ಮತ್ತೊಂದು ಭೀಕರ ಮರ್ಡರ್ ನಡೆದಿದ್ದು, ಹಳೇ ದ್ವೇಷ ಹಿನ್ನೆಲೆ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮೃತರನ್ನು . ಸಾಗರ್ ಬೆಳುಂಡಗಿ (25), ಇಸಾಕ್ ಖುರೇಶಿ (24) ಎಂದು ಗುರುತಿಸಲಾಗಿದೆ.

-

ವಿಜಯಪುರ : ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವ ಘಟನೆಯೊಂದು ವಿಜಯಪುರದಲ್ಲಿ ನಡೆದಿದೆ. ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಯುವಕರಿಬ್ಬರ ಬರ್ಬರ ಹತ್ಯೆ(Double Murder) ನಡೆದಿದೆ. ಹಳೇ ದ್ವೇಷ ಹಿನ್ನೆಲೆ ಕಲ್ಲಿನಿಂದ ಜಜ್ಜಿ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಸಾಗರ್ ಬೆಳುಂಡಗಿ (25), ಇಸಾಕ್ ಖುರೇಶಿ (24) ಕಲ್ಲಿನಿಂದ ಜಜ್ಜಿ ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.
2 ವರ್ಷದ ಹಿಂದೆ ಗ್ರಾಮದ ಈರಣ್ಣಗೌಡ ಮೇಲೆ ಕೊಲೆಯಾದ ಸಾಗರ್ ಹಾಗೂ ಇಸಾಕ್ ಹಲ್ಲೆ ನಡೆಸಿದ್ದರು. ಕೆಲ ದಿನಗಳ ಹಿಂದೆ ಚಿಕಿತ್ಸೆ ಫಲಿಸದೇ ಈರಣ್ಣಗೌಡ ಮೃತಪಟ್ಟಿದ್ದ. ಇದೇ ದ್ವೇಷಕ್ಕೆ ಕೊಲೆಗೈದಿರುವ ಸಂಶಯ ವ್ಯಕ್ತವಾಗಿದ್ದು, ಸ್ಥಳಕ್ಕೆ ವಿಜಯಪುರ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ ಸುದ್ದಿಯನ್ನೂ ಓದಿ: Murder Case: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷನ ಕೊಲೆ ಕೇಸ್; ನಾಲ್ವರು ಆರೋಪಿಗಳು ಅರೆಸ್ಟ್
ಲವ್ ಬ್ರೇಕಪ್; ಹಾಸನದಲ್ಲಿ ಯುವಕನ ಬರ್ಬರ ಹತ್ಯೆ
ಪ್ರೀತಿ-ಪ್ರೇಮ ವಿಚಾರಕ್ಕೆ ರಾಜ್ಯದಲ್ಲಿ ಮತ್ತೊಂದು ಬರ್ಬರ ಕೊಲೆಯಾಗಿದೆ (Murder Case). ಲವ್ ಬ್ರೇಕಪ್ ವಿಚಾರಕ್ಕೆ ಹಾಸನದ ಹೊಳೆನರಸೀಪುರದಲ್ಲಿ ಯುವಕನ ಕೊಲೆಯಾಗಿದೆ. ಹಾಸನ ಜಿಲ್ಲೆಯ ಹೊಳೆನರಸೀಪುರ ನಿವಾಸಿ ಸಂದೀಪ್ (24) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಹೊಳೆನರಸೀಪುರ ತಾಲೂಕಿನ ಎಸ್.ಅಂಕನಹಳ್ಳಿ ಬಳಿ ಮೃತದೇಹ ಪತ್ತೆಯಾಗಿದೆ. 3 ವರ್ಷಗಳಿಂದ ಮೈಸೂರು ಜಿಲ್ಲೆಯ ಯುವತಿಯನ್ನು ಪ್ರೀತಿಸುತ್ತಿದ್ದ. ಲವ್ ಬ್ರೇಕಪ್ ಹಿನ್ನೆಲೆ ಹುಡುಗಿ ಕಡೆಯವರಿಂದ ಕೊಲೆ ಆರೋಪ ಕೇಳಿಬಂದಿದೆ. ನಿನ್ನೆ ರಾತ್ರಿ ಮನೆಯಿಂದ ಬೈಕ್ ನಲ್ಲಿ ತೆರಳಿದ್ದ ಸುದೀಪ್ ಶವವಾಗಿ ಪತ್ತೆಯಾಗಿದ್ದಾನೆ.
ಮಚ್ಚಿನಿಂದ ಕೊಚ್ಚಿ ಕೊಲೆಗೈದು ಅಪಘಾತದ ರೀತಿ ಬಿಂಬಿಸುವ ಯತ್ನಿಸಲಾಗಿದೆ. ಕೊಲೆ ಮಾಡಿ ಶವ ಬೈಕನ್ನು ಮುಚ್ಚಿ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಹಳ್ಳಿ ಮೈಸೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.