ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Firing Case: ಭೀಮಾ ತೀರದಲ್ಲಿ ಮತ್ತೆ ಗುಂಡಿನ‌ ಮೊರೆತ; ಮಹಾದೇವ ಭೈರಗೊಂಡನ ಶಿಷ್ಯನ ಮೇಲೆ ಫೈರಿಂಗ್‌

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರಿಗೆ ಎಂಬ ಗ್ರಾಮದಲ್ಲಿ ರೌಡಿಶೀಟರ್ ಭಿಮನಗೌಡ ಬಿರಾದರ್ (45) ಮೇಲೆ ಫೈರಿಂಗ್ ನಡೆಸಲಾಗಿದೆ.

ಭೀಮಾ ತೀರದಲ್ಲಿ ಮತ್ತೆ ಗುಂಡಿನ‌ ಮೊರೆತ

-

Vishakha Bhat Vishakha Bhat Sep 3, 2025 11:34 AM

ವಿಜಯಪುರ: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿದೆ. (Firing Case) ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ದುಷ್ಕರ್ಮಿಗಳಿಂದ ಗುಂಡಿನ ದಾಳಿ ನಡೆದಿದೆ. ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರಿಗೆ ಎಂಬ ಗ್ರಾಮದಲ್ಲಿ ರೌಡಿಶೀಟರ್ ಭಿಮನಗೌಡ ಬಿರಾದರ್ (45) ಮೇಲೆ ಫೈರಿಂಗ್ ನಡೆಸಲಾಗಿದೆ. ಗಾಯಗೊಂಡ ಭೀಮನಗೌಡನನ್ನು ವಿಜಯಪುರ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ರೌಡಿಶೀಟ‌ರ್ ಭೀಮನಗೌಡ ಬೀರಾದಾರ್ ಮೇಲೆ ಫೈರಿಂಗ್ ಮಾಡಿ ಎಸ್ಕೇಪ್‌ ಆಗಿದ್ದಾರೆ.

ಆರೋಪಿಗಳು ಭೀಮನಗೌಡಗೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಹೇರ್ ಕಟಿಂಗ್ ಮಾಡಿಸಿಕೊಳ್ಳುವಾಗ ಕಣ್ಣಿಗೆ ಖಾರದ ಪುಡಿ ಎರಚಿ ಕೃತ್ಯ ನಡೆಸಿದ್ದಾರೆ.ಘಟನೆ ನಡೆದ ಸ್ಥಳಕ್ಕೆ ಚಡಚಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಘಟನೆಯಲ್ಲಿ, ಭೀಮನಗೌಡನ ತಲೆ ಹಾಗೂ ಎದೆಗೆ ಗುಂಡುಗಳು ತಗುಲಿವೆ. ಈತ ಮಹಾದೇವ ಬೈರಗೊಂಡನ ಪರಮಾಪ್ತ ಹಾಗೂ ಬಲಗೈ ಬಂಟನಾಗಿದ್ದಾನೆ. ಮೂರರಿಂದ ನಾಲ್ವರು ಮುಸುಕುಧಾರಿಗಳಿಂದ ಈ ಕೃತ್ಯ ನಡೆದಿದೆ. ಗುಂಡು ಹಾರಿಸಿದ ಬಳಿಕ‌ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್​ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ ವೇಳೆ ಭೀಮನಗೌಡ ಬಿರಾದಾರ್ ಮೇಲೆ ದಾಳಿ ನಡೆದಿದೆ. ಕಟಿಂಗ್ ಮಾಡುತ್ತಿದ್ದ ಕಣ್ಣಿಗೆ ಖಾರದ ಪುಡಿ ಎರಚಿ ಕೃತ್ಯ ಎಸಗಲಾಗಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಗುಂಡು ಹಾರಿಸಿರುವ ಶಂಕೆ ವ್ಯಕ್ತವಾಗಿದೆ.

ಪ್ರತ್ಯೇಕ ಘಟನೆಯಲ್ಲಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಗಣೇಶ ವಿಸರ್ಜನೆಯ ವೇಳೆ ಪಟಾಕಿ ಸಿಡಿದು ಓರ್ವ ಬಾಲಕ ಸಾವನಪ್ಪಿದ್ದ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮತ್ತೋರ್ವ ಬಾಲಕ ಯೋಗೇಶ್ (15) ಇಂದು ಸಾವನ್ನಪ್ಪಿದ್ದಾನೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಯೋಗೇಶ್ ಗೆ ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಚಿಕಿತ್ಸೆ ಫಲಿಸದೆ ಇಂದು ಬಾಲಕ ಯೋಗೇಶ್ ಸಾವನ್ನಪ್ಪಿದ್ದಾನೆ. ಆಗಸ್ಟ್ 29 ರಂದು ದೊಡ್ಡಬಳ್ಳಾಪುರ ನಗರದ ಮುತ್ತೂರಿನಲ್ಲಿ ಪಟಾಕಿ ದುರಂತ ನಡೆದಿತ್ತು. ಪೊಲೀಸ್‌ ಸೇರಿ ಆರು ಜನರಿಗೆ ಗಂಭೀರ ಗಾಯಗಳಾಗಿದ್ದವು.