ಫೋಟೋ ಗ್ಯಾಲರಿ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Shivanand Patil: ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ

ಬಸವನ ಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಸಚಿವ ಶಿವಾನಂದ ಸಿದ್ದರಾಮಗೌಡ ಪಾಟೀಲ್ ( Shivanand Patil) ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಹಾಕಿರುವ ಸವಾಲಿಗೆ ಉತ್ತರವಾಗಿ ಅವರು ರಾಜೀನಾಮೆ ಸಲ್ಲಿದ್ದಾರೆ ಎಂದು ತಿಳಿದು ಬಂದಿದೆ

ಶಾಸಕ ಸ್ಥಾನಕ್ಕೆ ಸಚಿವ ಶಿವಾನಂದ ಪಾಟೀಲ್ ರಾಜೀನಾಮೆ

Profile Vishakha Bhat May 2, 2025 1:22 PM

ವಿಜಯಪುರ: ರಾಜ್ಯ ರಾಜಕಾರಣದಲ್ಲಿ ಅಚ್ಚರಿ ಬೆಳವಣಿಗೆಯೊಂದು ನಡೆದದಿದೆ. ಬಸವನ ಬಾಗೇವಾಡಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಸಚಿವ ಶಿವಾನಂದ ಸಿದ್ದರಾಮಗೌಡ ಪಾಟೀಲ್ ( Shivanand Patil) ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ. ಬಿಜೆಪಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಅವರು ಹಾಕಿರುವ ಸವಾಲಿಗೆ ಉತ್ತರವಾಗಿ ಅವರು ರಾಜೀನಾಮೆ ಸಲ್ಲಿದ್ದಾರೆ ಎಂದು ತಿಳಿದು ಬಂದಿದೆ. ಶಿವಾನಂದ ಪಾಟೀಲ್ ಅವರು ಪ್ರಸ್ತುತ ಕರ್ನಾಟಕ ಸರ್ಕಾರದಲ್ಲಿ ಕೈಗಾರಿಕೆ, ಜವಳಿ, ಕಬ್ಬು ಅಭಿವೃದ್ಧಿ, ಮತ್ತು ಸಕ್ಕರೆ ನಿರ್ದೇಶನಾಲಯದ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಇತ್ತೀಚೆಗೆ ಮಹಮ್ಮದ್ ಪೈಗಂಬರ್​ ವಿರುದ್ಧ ಹೇಳಿಕೆ ನೀಡಿರುವ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧದ ಜಿಲ್ಲೆಯಾದ್ಯಂತ ಪ್ರತಿಭಟನೆ ನಡೆಸಲಾಗಿತ್ತು. ಅದಕ್ಕೆ ಯತ್ನಾಳ್‌ ಅವರು ಬಹಿರಂಗ ಸವಾಲೆಸಿದ್ದಿದ್ದು, ನಿನಗೆ ಧಮ್‌ ಇದ್ದರೆ ರಾಜಿನಾಮೆ ನೀಡಿ ಪಕ್ಷೇತರನಾಗಿ ಸ್ಪರ್ಧೆ ಮಾಡು ಎಂದಿದ್ದರು. ಇದೀಗ ಸವಾಲನ್ನು ಸ್ವೀಕರಿಸಿರುವ ಶಿವಾನಂದ ಪಾಟೀಲ್‌ ರಾಜಿನಾಮೆ ನೀಡಿದ್ದಾರೆ.

ಈ ಸುದ್ದಿಯನ್ನೂ ಓದಿ: Basanagouda Patil Yatnal: ಈ ಬಾರಿ ಪಾಕಿಸ್ತಾನ ಸರ್ವನಾಶ ಆಗ್ಬೇಕು: ಯತ್ನಾಳ್‌ ಕಿಡಿ

ವಿಜಯಪುರ ನಗರ ಶಾಸಕರಾದ ಬಸನಗೌಡ ಆರ್. ಪಾಟೀಲ (ಯತ್ನಾಳ್) ರವರು ತಮ್ಮ ವಿಜಯಪುರ ಮತಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ, ನನ್ನ ವಿರುದ್ಧ ಬಸವನ ಬಾಗೇವಾಡಿ ಮತಕ್ಷೇತ್ರದಿಂದ ಸ್ಪರ್ಧೆ ಮಾಡುವುದಾಗಿ ಸವಾಲು ಹಾಕಿದ್ದಾರೆ.ನಾನು ಅವರ ಸವಾಲನ್ನು ಸ್ವೀಕರಿಸಿ. ಅವರ ವಿರುದ್ಧ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದೇನೆ. ಹಾಗಾಗಿ ನಾನು ಪ್ರತಿನಿಧಿಸುತ್ತಿರುವ ಬಸವನ ಬಾಗೇವಾಡಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ. ಅವರ ರಾಜಿನಾಮೆ ಅಂಗೀಕಾರವಾದರೆ ಮಾತ್ರ ನನ್ನ ರಾಜಿನಾಮೆ ಸ್ವೀಕರಿಸಿ ಎಂದು ರಾಜಿನಾಮೆ ಪತ್ರದಲ್ಲಿ ಉಲ್ಲೇಖ ಮಾಡಿದ್ದಾರೆ. ಸಚಿವ ಶಿವಾನಂದ ಪಾಟೀಲ್ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರ ನೀಡಿದರೂ ಸ್ಪೀಕರ್ ಅದನ್ನು ಅಂಗೀಕಾರ ಮಾಡಿಲ್ಲ.