ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Road Accident: ಶಾಸಕ ಅಶೋಕ್‌ ಮನಗೂಳಿ ಕಾರು ಅಪಘಾತ, ಪ್ರಯಾಣಿಕರು ಪಾರು

Ashok Managuli: ಕಲಬುರಗಿಯಿಂದ ಸಿಂದಗಿ ಕಡೆಗೆ ಬರ್ತಿದ್ದ ಸ್ವಿಫ್ಟ್ ಕಾರು, ಶಾಸಕರ ಕಾರಿಗೆ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎರಡೂ ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಶಾಸಕ ಅಶೋಕ್‌ ಮನಗೂಳಿ ಕಾರು ಅಪಘಾತ, ಪ್ರಯಾಣಿಕರು ಪಾರು

-

ಹರೀಶ್‌ ಕೇರ ಹರೀಶ್‌ ಕೇರ Oct 22, 2025 12:50 PM

ವಿಜಯಪುರ: ಜಿಲ್ಲೆಯ (Vijayapura) ಸಿಂದಗಿ ಬೈಪಾಸ್ ಬಳಿ ಸಿಂದಗಿ ಶಾಸಕ (Sindagi MLA) ಅಶೋಕ್ ಮನಗೂಳಿ (Ashok Managuli) ಅವರ ಕಾರಿಗೆ ವಾಹನವೊಂದು ಡಿಕ್ಕಿ ಹೊಡೆದಿದೆ. ಶಾಸಕರ ಕಾರಿನಲ್ಲಿ ಅವರ ಪುತ್ರಿ, ಸಹೋದರನ ಮಗ ಪ್ರಯಾಣಿಸುತ್ತಿದ್ದರು. KA 03 NT 2827 ನಂಬರ್‌ನ ವಿಧಾನಸೌಧ ಪಾಸ್ ಹೊಂದಿರುವ ಇನ್ನೋವಾ ಹೈಕ್ರಾಸ್ ಕಾರಿಗೆ ಹಾಗೂ ಸ್ವಿಫ್ಟ್ ಕಾರು ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ.

ಕಲಬುರಗಿಯಿಂದ ಸಿಂದಗಿ ಕಡೆಗೆ ಬರ್ತಿದ್ದ ಸ್ವಿಫ್ಟ್ ಕಾರು ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಎರಡೂ ಕಾರುಗಳಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅಪಘಾತದ ಸಂದರ್ಭದಲ್ಲಿ ಸ್ಥಳೀಯರು ಸಹಾಯಕ್ಕೆ ಧಾವಿಸಿದರು.

ಬೆಂಗಳೂರಿನಲ್ಲಿ ಲಿವಿಂಗ್ ಟುಗೆದರ್‌ನಲ್ಲಿದ್ದ ಜೋಡಿ ಆತ್ಮಹತ್ಯೆ

ಬೆಂಗಳೂರು : ಬೆಂಗಳೂರಿನಲ್ಲಿ (Bengaluru) ಲಿವಿಂಗ್ ಟುಗೆದರ್‌ನಲ್ಲಿದ್ದ (Living togethar) ಜೋಡಿಯೊಂದು (Couple) ಆತ್ಮಹತ್ಯೆಗೆ (Self Harming) ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಕಲ್ಲುಬಾಳು ಗ್ರಾಮದಲ್ಲಿ ಒಡಿಶಾ ಮೂಲದ ಸೀಮಾ ನಾಯಕ್ (25), ರಾಕೇಶ್ (23) ಮೃತರು ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: Fire: ವಸತಿ ಕಟ್ಟಡದಲ್ಲಿ ಬೆಂಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಎರಡು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಮೂಡಿದೆ. ಬಾಗಿಲು ತೆರೆಯದ ಹಿನ್ನೆಲೆಯಲ್ಲಿ ಅನುಮಾನಗೊಂಡು ಕಿಟಕಿ ಗಾಜು ಒಡೆದು ನೋಡಿದಾಗ ಬೆಳಕಿಗೆ ಬಂದಿದೆ. ಕೂಡಲೇ ಜಿಗಣಿ ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದ್ದಾರೆ. ರಾಕೇಶ್ ಪದೇ ಪದೆ ಕುಡಿದು ಬಂದು ಜಗಳ ಮಾಡುತ್ತಿದ್ದ. ಭಾನುವಾರವೂ ಜಗಳ ಮಾಡಿದ್ದ. ಸೋಮವಾರ ಬೆಳಗ್ಗೆ ನೋಡಿದಾಗ ರಾಕೇಶ್ ನೇಣು ಬಿಗಿದುಕೊಂಡಿದ್ದ. ಬಳಿಕ ಸೀಮಾ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದುಬಂದಿದೆ.