ವಿಜಯಪುರ: ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮನಗೂಳಿ ಸಮೀಪದ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಅಪಘಾತ (Vijayapura Car Accident) ಸಂಭವಿಸಿದ್ದು, ತಾಯಿ, ಇಬ್ಬರು ಮಕ್ಕಳು ಸೇರಿ ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸಿದ ಪರಿಣಾಮ ದುರ್ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಸತ್ಯವೇಣಿ (38), ಪುತ್ರರಾದ ಹರಿವೆಂಕಟರಾಮ್ (20), ಜಶ್ವಂತ (18) ಮೃತಪಟ್ಟಿದ್ದಾರೆ. ಗಂಡ ರಾಘವೇಂದ್ರ ಅವರು (41) ಗಂಭೀರವಾಗಿ ಗಾಯಗೊಂಡಿದ್ದಾರೆ.
KA 33 N 4689 ನಂಬರ್‌ನ ಕ್ರೇಟಾ ಕಾರು ಅಪಘಾತಕ್ಕೆ ಒಳಗಾಗಿದೆ. ಕುಟುಂಬಸ್ಥರು ಎಲ್ಲರೂ ಸೇರಿ ಕಾರಿನಲ್ಲಿ ಕಾರಟಗಿಯಿಂದ ಶಿರಡಿಗೆ ತೆರಳುತ್ತಿದ್ದರು. ಯುವಕ ಹರಿವೆಂಕಟರಾಮ್ ಕಾರು ಚಲಾಯಿಸುತ್ತಿದ್ದ. ಹಿಂದಿನ ದಿನ ರಾತ್ರಿಯಿಡೀ ನಿದ್ದೆಗೆಟ್ಟಿದ್ದರು, ನಿದ್ದೆ ಮಂಪರಿನಲ್ಲಿ ವೇಗವಾಗಿ ಕಾರು ಚಲಾಯಿಸಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ.
ಮಣಿಪಾಲದಲ್ಲಿ ಶಾಲಾ ಬಸ್ ಪಲ್ಟಿಯಾಗಿ 7 ವಿದ್ಯಾರ್ಥಿಗಳಿಗೆ ಗಾಯ
ಉಡುಪಿ: ಜಿಲ್ಲೆಯ ಮಣಿಪಾಲದ ಕೊಡಂಗೆ ದೇವಸ್ಥಾನದ ಸಮೀಪ ಇಂದು ಬೆಳಿಗ್ಗೆ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಏಳು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡ ಮಕ್ಕಳನ್ನು ಸ್ಥಳೀಯರ ನೆರವಿನಿಂದ ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಯಾವುದೇ ಪ್ರಾಣಾಪಾಯವಿಲ್ಲ ಎಂದು ತಿಳಿದುಬಂದಿದೆ.
ʼʼನನ್ನನ್ನು ಕ್ಷಮಿಸಿʼʼ: ಶಿಕ್ಷಕಿ ಬೈದಿದ್ದಕ್ಕೆ 8ನೇ ತರಗತಿ ವಿದ್ಯಾರ್ಥಿನಿ ನೇಣಿಗೆ ಶರಣು; ಡೆತ್‌ನೋಟ್‌ನಲ್ಲಿ ಏನಿದೆ?
ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ. ಬಸ್ ಹೇಗೆ ಪಲ್ಟಿಯಾಯಿತು ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಚಾಲಕನ ನಿಯಂತ್ರಣ ತಪ್ಪಿದ್ದೇ ಅಥವಾ ಬೇರೆ ಕಾರಣವಿದೆಯೇ ಎಂಬುದು ತನಿಖೆಯ ಬಳಿಕ ಸ್ಪಷ್ಟವಾಗಲಿದೆ.