ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಆಲಮಟ್ಟಿ ಡ್ಯಾಂ ಎತ್ತರ ಹೆಚ್ಚಳ: ಬಬಲೇಶ್ವರ ತಾಲೂಕಿನ 4 ಗ್ರಾಮಗಳಿಗೆ ತುರ್ತು ಪರಿಹಾರ ಒದಗಿಸಲು ಸಚಿವ ಎಂ.ಬಿ. ಪಾಟೀಲ್ ಪತ್ರ

MB Patil: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದಿಂದ ತಾವು ಪ್ರತಿನಿಧಿಸುತ್ತಿರುವ ಬಬಲೇಶ್ವರ ವಿಧಾನಸಭಾ ಕ್ಷೇತ್ರದ 15 ಗ್ರಾಮಗಳ 5,600 ಎಕರೆ ಮುಳುಗಡೆ ಆಗುತ್ತಿದೆ. ಈ ಪೈಕಿ ಮೊದಲ ಹಂತದಲ್ಲಿ 1,000 ಎಕರೆಗಾದರೂ ಪರಿಹಾರ‌ ಕೊಡಬೇಕು ಎಂದು ಬೃಹತ್ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಜಲಸಂಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

ಸಚಿವ ಎಂ.ಬಿ. ಪಾಟೀಲ್ (ಸಂಗ್ರಹ ಚಿತ್ರ)

ಬೆಂಗಳೂರು, ಸೆ. 30: ಆಲಮಟ್ಟಿ ಅಣೆಕಟ್ಟು ಎತ್ತರ ಹೆಚ್ಚಳದಿಂದ ತಾವು ಪ್ರತಿನಿಧಿಸುತ್ತಿರುವ ಬಬಲೇಶ್ವರ ವಿಧಾನಸಭಾ ಕ್ಷೇತ್ರದ 15 ಗ್ರಾಮಗಳ 5,600 ಎಕರೆ ಮುಳುಗಡೆ ಆಗುತ್ತಿದೆ. ಈ ಪೈಕಿ ಮೊದಲ ಹಂತದಲ್ಲಿ 1,000 ಎಕರೆಗಾದರೂ ಪರಿಹಾರ‌ ಕೊಡಬೇಕು ಎಂದು ಬೃಹತ್ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ (MB Patil) ಜಲಸಂಪನ್ಮೂಲ ಸಚಿವ ಎನ್. ಚೆಲುವರಾಯಸ್ವಾಮಿ ಅವರಿಗೆ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಅವರು, ಅಣೆಕಟ್ಟೆಯನ್ನು ಈಗಿರುವ 519.60 ಮೀಟರ್‌ನಿಂದ 524.256 ಮೀಟರ್‌ಗೆ ಎತ್ತರಿಸಲಾಗುತ್ತಿದೆ. ಇದರಿಂದಾಗಿ 184 ಗ್ರಾಮಗಳ 75,563 ಎಕರೆ ಮುಳುಗಡೆ ಆಗುತ್ತಿದೆ. ಇದರಲ್ಲಿ ವಿಜಯಪುರ ಜಿಲ್ಲೆಯ 31 ಗ್ರಾಮಗಳಿದ್ದು, ಬಬಲೇಶ್ವರ ವಿಧಾನಸಭೆ ಕ್ಷೇತ್ರದ 15 ಹಳ್ಳಿಗಳಿವೆ. ಈ ಹಳ್ಳಿಗಳ ವ್ಯಾಪ್ತಿಯಲ್ಲಿ 5,600 ಎಕರೆ ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಹೀಗಾಗಿ ಸದ್ಯ ಪ್ರಸ್ತಾಪಿಸಿರುವ ಅಂದಾಜು 3,000 ಕೋಟಿ ರೂಪಾಯಿ ಪಾವತಿ ಸಂದರ್ಭದಲ್ಲಿ ಬಬಲೇಶ್ವರ ಕ್ಷೇತ್ರ ವ್ಯಾಪ್ತಿಯ ಜಮೀನುಗಳಿಗೆ ಕನಿಷ್ಠ 500 ಕೋಟಿ ಮೀಸಲಿಡಬೇಕು ಎಂದು ಅವರು ಪತ್ರದಲ್ಲಿ ಕೋರಿದ್ದಾರೆ.‌

ಇನ್ಮುಂದೆ ಸಂಚಾರ ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ; ಲೈಸನ್ಸ್‌ ಅಮಾನತು, ದಂಡ ಹೆಚ್ಚಳ

ಇದರಲ್ಲಿ ಈಗಾಗಲೇ ಯೋಜನೆಯ ಕಾಮಗಾರಿ ಪ್ರಗತಿಯಲ್ಲಿರುವ ಚಿಕ್ಕಗಲಗಲಿ, ಶಿರಬೂರು, ಹೊಸೂರು ಮತ್ತು ಕಣಬೂರು ಗ್ರಾಮಗಳನ್ನು ಆದ್ಯತೆಯ ಮೇಲೆ ಪರಿಗಣಿಸಿ, ಮೊದಲ ಸುತ್ತಿನಲ್ಲಿ 500 ಕೋಟಿ ರೂ.ಗಳಷ್ಟು ಪರಿಹಾರ ಕೊಡಬೇಕು.‌ ಉಳಿದ 10 ಗ್ರಾಮಗಳಿಗೆ ಕೂಡ ಅಧಿಸೂಚನೆ ಹೊರಡಿಸಿ, ಪರಿಹಾರ ವಿತರಣೆಗೆ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಬೃಹತ್ ಕೈಗಾರಿಕೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಮನವಿ ಮಾಡಿದ್ದಾರೆ.