ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಶಾಲೆಯಲ್ಲಿ ಹಾಜರಾತಿ ವೇಳೆ ‘yes sir’ ಬದಲು ʼಜೈ ಶ್ರೀರಾಮ್ʼ ಅಂತ ಹೇಳಿ: ವಿದ್ಯಾರ್ಥಿಗಳಿಗೆ ಶಾಸಕ ಯತ್ನಾಳ್ ಕರೆ

ಜೂನ್‌ನಲ್ಲಿ ಶಾಲೆಗಳು ಆರಂಭವಾದ ಬಳಿಕ ಪ್ರತಿಯೊಬ್ಬರಿಗೂ ಕೇಸರಿ ಶಾಲು ವಿತರಣೆ ಮಾಡುತ್ತೇನೆ. ಕೇಸರಿ ಶಾಲು ಧರಿಸುವುದಕ್ಕೆ ನಿಷೇಧ ಹೇರಲು ಕಾಂಗ್ರೆಸ್‌ನವರಿಗೆ ಅಧಿಕಾರ ಕೊಟ್ಟವರು ಯಾರು? ಕೇಸರಿ ಶಾಲು ಹಾಕಲು ನಮಗೆ ಹಕ್ಕಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಶಾಸಕ ಯತ್ನಾಳ್‌ ಕಿಡಿಕಾರಿದ್ದಾರೆ.

ಹಾಜರಾತಿ ವೇಳೆ ‘yes sir’ ಬದಲು ʼಜೈ ಶ್ರೀರಾಮ್ʼ ಅಂತ ಹೇಳಿ: ಯತ್ನಾಳ್

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌. -

Prabhakara R
Prabhakara R May 17, 2026 6:14 PM

ವಿಜಯಪುರ: ಇನ್ನುಮುಂದೆ ಶಾಲೆಯಲ್ಲಿ ಹಾಜರಾತಿ ವೇಳೆ ‘yes sir’ ಎನ್ನುವ ಬದಲು ಜೈ ಶ್ರೀರಾಮ್ ಅಂತ ಹೇಳಿ. ಶಿಕ್ಷಕರಿಗೆ ನಮಸ್ಕರಿಸುವಾಗ ಜೈ ಶ್ರೀರಾಮ್ ಎನ್ನಿ ಎಂದು ವಿದ್ಯಾರ್ಥಿಗಳಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda patil yatnal) ಕರೆ ನೀಡಿದ್ದಾರೆ. ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ಧರಿಸಲು ಮತ್ತೆ ಅವಕಾಶ ನೀಡಿರುವ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಶಾಸಕ ಯತ್ನಾಳ್‌ ಹರಿಹಾಯ್ದಿದ್ದಾರೆ.

ಜೂನ್‌ನಲ್ಲಿ ಶಾಲೆಗಳು ಆರಂಭವಾದ ಬಳಿಕ ಪ್ರತಿಯೊಬ್ಬರಿಗೂ ಕೇಸರಿ ಶಾಲು ವಿತರಣೆ ಮಾಡುತ್ತೇನೆ. ಕೇಸರಿ ಶಾಲು ಧರಿಸುವುದಕ್ಕೆ ನಿಷೇಧ ಹೇರಲು ಕಾಂಗ್ರೆಸ್‌ನವರಿಗೆ ಅಧಿಕಾರ ಕೊಟ್ಟವರು ಯಾರು? ಕೇಸರಿ ಶಾಲು ಹಾಕಲು ನಮಗೆ ಹಕ್ಕಿದೆ. ರಾಜ್ಯದ ಎಲ್ಲಾ ಹಿಂದೂಗಳಿಗೆ ಕರೆ ಕೊಡುತ್ತಿದ್ದೇನೆ. ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ತಿಲಕ ಇಟ್ಟು ಕೇಸರಿ ಶಾಲು ಹಾಕಿ ಶಾಲೆಗೆ ಕಳುಹಿಸಿ. ಇವರು ಹೇಗೆ ವಿರೋಧ ಮಾಡುತ್ತಾರೆ? ಹೇಗೆ ತಡೆಯುತ್ತಾರೆ? ನಾವು ನೋಡುತ್ತೇವೆ ಎಂದು ಸವಾಲು ಹಾಕಿದ್ದಾರೆ.

ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಗೆ ಕಾಂಗ್ರೆಸ್‌ ಟೀಕೆ ಬಗ್ಗೆ ಪ್ರತಿಕ್ರಿಯಿಸಿ, ಬಿಜೆಪಿ ಸರ್ಕಾರ ಇದ್ದಾಗ ತಮಿಳುನಾಡಿನಲ್ಲಿ ಸ್ಟಾಲಿನ್ ಬೆಲೆ ಇಳಿಕೆ ಮಾಡಿದ್ದಾರೆ. ಹಾಗೆಯೇ ಬಿಜೆಪಿ ಸರ್ಕಾರವೂ ಇಳಿಕೆ ಮಾಡಬೇಕು ಎಂದು ಕಾಂಗ್ರೆಸ್‌ನವರೇ ಟ್ವೀಟ್ ಮಾಡಿದ್ದರು. ಈಗ ದಮ್ ಇದ್ದರೆ ಕಡಿಮೆ ಮಾಡಿ ತೋರಿಸಲಿ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯುದ್ಧ ನಡೆಯುತ್ತಿರುವ ಅನಿವಾರ್ಯ ಕಾರಣಕ್ಕೆ ಬೆಲೆ ಹೆಚ್ಚಳ ಮಾಡಲಾಗಿದೆ ಎಂದು ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ನಾನು ವೈಯಕ್ತಿಕವಾಗಿ ವಾಹನ ಬಳಕೆ ಕಡಿಮೆ ಮಾಡಿಕೊಳ್ಳುತ್ತೇನೆ. ನೂರಕ್ಕೆ ನೂರರಷ್ಟು ಮಾಡಿಕೊಳ್ಳುವುದಿಲ್ಲ. ಸುಮ್ಮನೇ ವಿಜಯೇಂದ್ರನಂತೆ ನಾಟಕ ಮಾಡುವುದಿಲ್ಲ. ಎಲ್ಲಿಯವರೆಗೆ ಪ್ರಧಾನ ಮಂತ್ರಿಗಳು ಬಂಗಾರ ತೆಗೆದುಕೊಳ್ಳಬೇಡಿ ಅಂತ ಹೇಳುತ್ತಾರೆಯೋ? ಅಲ್ಲಿಯವರೆಗೆ ಒಂದು ಗುಂಜಿ ಬಂಗಾರ ಕೂಡ ಖರೀದಿಸುವುದಿಲ್ಲ ಎಂದು ಪ್ರಧಾನಿ ಮೋದಿ ಅವರ ಮಿತವ್ಯಯ ಕರೆಗೆ ಬೆಂಬಲ ಸೂಚಿಸಿದ್ದಾರೆ.

ವಿದ್ಯಾರ್ಥಿಗಳನ್ನು ಸಾಮರ್‌ ಇಸ್ಲಾಮಿಕ್ ಶಾಲೆಗೆ ಸೇರ್ಪಡೆ ಮಾಡದಂತೆ ಶಾಲಾ ಶಿಕ್ಷಣ ಇಲಾಖೆ ಸೂಚನೆ

ಸಿಎಂ ಸಿದ್ದರಾಮಯ್ಯನವರಿಗೆ ತಾಕತ್ತಿದ್ದರೆ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿರುವ ಶೇ.30 ರಷ್ಟು ತೆರಿಗೆಯನ್ನು ಶೇ. 20ಕ್ಕೆ ಇಳಿಸಲಿ. ಮೊನ್ನೆ ಇವರು ಕರೆಂಟ್ ಬಿಲ್ ಹೆಚ್ಚಳ ಮಾಡಿದ್ದಾರೆ ತಾನೇ? ಮರಣ ಪ್ರಮಾಣಪತ್ರದ ಸ್ಟ್ಯಾಂಪ್ ಡ್ಯೂಟಿಯನ್ನು ನೀವು ಯಾಕೆ ಏರಿಕೆ ಮಾಡಿದ್ದೀರಿ. ರಾಜ್ಯದಲ್ಲಿ ನೀವು ಯಾವುದು ಕಡಿಮೆ ಮಾಡಿದ್ದೀರಿ ಹೇಳಿ? ಹಾಗಾಗಿ, ಕಾಂಗ್ರೆಸಿನವರಿಗೆ ಮಾತನಾಡಲು ಯಾವುದೇ ನೈತಿಕ ಹಕ್ಕಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.