ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Vijayapura News: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳ ಸಾವು

ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ನಡೆದಿದೆ. ಮೃತರನ್ನು ಸ್ವಪ್ನಾ ರಾಜು ರಾಠೋಡ್ (10), ಶಿವಂ ರಾಜು ರಾಠೋಡ್ (8) ಹಾಗೂ ಕಾರ್ತಿಕ ಈಶ್ವರ ರಾಠೋಡ್ (8) ಎಂದು ಗುರುತಿಸಲಾಗಿದೆ.

ಸಾಂದರ್ಭಿಕ ಚಿತ್ರ

ವಿಜಯಪುರ, ಅ. 16: ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ವಿಜಯಪುರ ತಾಲೂಕಿನ ಮಿಂಚನಾಳ ತಾಂಡಾದಲ್ಲಿ ಅ. 16ರಂದು ನಡೆದಿದೆ (Vijayapura News). ಮೃತರನ್ನು ಸ್ವಪ್ನಾ ರಾಜು ರಾಠೋಡ್ (10), ಶಿವಂ ರಾಜು ರಾಠೋಡ್ (8) ಹಾಗೂ ಕಾರ್ತಿಕ ಈಶ್ವರ ರಾಠೋಡ್ (8) ಎಂದು ಗುರುತಿಸಲಾಗಿದೆ. ಮಿಂಚನಾಳ ತಾಂಡಾದ ಮಾದೇವ ನಗರದ ಈ ಮೂವರು ಮಕ್ಕಳು ಮನೆಯ ಸಮೀಪದ ಹೊಲದ ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

ಮಕ್ಕಳು ತುಂಬ ಹೊತ್ತಾದರೂ ಕಾಣಿಸದೇ ಇದ್ದಾಗ ಚಪ್ಪಲಿ ಗಮನಿಸಿ, ಹೊಂಡದಲ್ಲಿ ಶೋಧ ನಡೆಸಿದ ಬಳಿಕ ಅವರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ. ಈ ಪೈಕಿ ಸ್ವಪ್ನಾ, ಶಿವಂ ಒಂದೇ ಕುಟುಂಬದವರು.

ತಾಲೂಕು ಪಂಚಾಯತ್‌ ಅಧಿಕಾರಿಗಳು, ಆರೋಗ್ಯ ಇಲಾಖೆಯ ಅಧಿಕಾರಿಗಳು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಮೂವರು ಮಕ್ಕಳ ಮೃತದೇಹಗಳನ್ನು ಹೊರತೆಗೆದಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಹೇಗಾಯ್ತು ದುರಂತ?

ಸಂಜೆ ಮಕ್ಕಳು ಕುರಿಗಳೊಂದಿಗೆ ಆಟವಾಡುತ್ತಾ ಕೃಷಿ ಹೊಂಡದ ಬಳಿ ತೆರಳಿದ್ದರು. ಆಟದ ವೇಳೆ ಕಾಲು ಜಾರಿ ಆಯಾತಪ್ಪಿ ಮೂವರು ಒಟ್ಟಿಗೆ ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ. ಮೇಲೆ ಬರಲಾಗದೆ, ಈಜು ಬಾರದೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಅದಿಕಾರಿಗಳು ತಿಳಿಸಿದ್ದಾರೆ.

ಈ ಸುದ್ದಿಯನ್ನೂ ಓದಿ: Chikkaballapur News: ಹೆರಿಗೆಯಾದ 9 ದಿನದ ನಂತರ ಸಾವು- ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ

ಕೃಷಿ ಹೊಂಡಕ್ಕೆ ಬಿದ್ದು ತಾಯಿ, ಇಬ್ಬರು ಮಕ್ಕಳ ಸಾವು

ಈ ವರ್ಷಾರಂಭದಲ್ಲಿ ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ತಾಯಿ ಹಾಗೂ ಇಬ್ಬರು ಗಂಡು ಮಕ್ಕಳು ದಾರುಣವಾಗಿ ಮೃತಪಟ್ಟಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಹರನಾಳ ಬಳಿ ನಡೆದಿತ್ತು. ಜಮೀನಿಗೆ ತೆರಳಿದ್ದ ಗೀತಾ ಬಂಡಿ ಹಾಗೂ ಗಂಡು ಮಕ್ಕಳಾದಂತ ಶ್ರವಣ್, ಶರಣ್ ಆಕಸ್ಮಿಕವಾಗಿ ಕೃಷಿ ಹೊಂಡದಲ್ಲಿ ಬಿದ್ದು ಮೃತಪಟ್ಟಿದ್ದರು. ತಿಅಂದಹಾಗೇ ಗಂಡನ ಜತೆ ಜಗಳವಾಡಿ ಗೀತಾ ಮನೆ ಬಿಟ್ಟು ಬಂದಿದ್ದರು. ಕೃಷಿ ಹೊಂಡದ ಬಳಿಯಲ್ಲಿ ತೆರಳಿದ್ದಾಗ ಕಾಲು ಜಾರಿ ಬಿದ್ದ ಮಕ್ಕಳನ್ನು ರಕ್ಷಿಸಲು ಹೋಗಿ ಈ ದುರಂತ ನಡೆದಿತ್ತು.

ಮೃತ ಗೀತಾ ತಂದೆ ರಾಮಪ್ಪ ನಾಯ್ಕಡಿ ಎಂಬುವರಿಗೆ ಸೇರಿದಂತೆ ಕೃಷಿ ಹೊಂಡದಲ್ಲಿ ಈ ಧಾರುಣ ಘಟನೆ ಸಂಭವಿಸಿತ್ತು. ಈ ಸಂಬಂಧ ದೇವರಹಿಬ್ಬರಗಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ವರದಿಯಾಗಿತ್ತು.