ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Vijayapur News: ವಿಜಯಪುರದ ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ; ಮೂವರಿಗೆ ಗಾಯ

Vijayapur pan shop Blast: ಪಾನ್ ಶಾಪ್ ಒಳಗಿದ್ದ ಫ್ರಿಡ್ಜ್‌ಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ, ಈ ಸ್ಫೋಟವು ಅಂಗಡಿಯ ಒಳಗಿನ ತಾಂತ್ರಿಕ ದೋಷದಿಂದ ಆಗಿರದೆ, ಹೊರಗಡೆಯಿಂದಲೇ ಯಾರೋ ಕಿಡಿಗೇಡಿಗಳು ಮಾಡಿರುವ ಕೃತ್ಯ ಇರಬಹುದೇ ಅಥವಾ ಬೇರೆನಾದರೂ ಸ್ಫೋಟಕ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ವಿಜಯಪುರದ ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ; ಮೂವರಿಗೆ ಗಾಯ

ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದ ಪಾನ್‌ ಶಾಪ್‌. -

Prabhakara R
Prabhakara R Jun 8, 2026 5:37 PM

ವಿಜಯಪುರ: ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟದಿಂದ ಮೂವರು ತೀವ್ರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ (Vijayapur pan shop Blast) ಬಬಲೇಶ್ವರ ತಾಲೂಕಿನ ಮಮದಾಪುರ ಗ್ರಾಮದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಸ್ಫೋಟದ ತೀವ್ರತೆಗೆ ರವಿಕಿರಣ್ ಎಂಬುವವರ ಶಾಪ್ ಸಂಪೂರ್ಣವಾಗಿ ನುಜ್ಜುಗುಜ್ಜಾಗಿದೆ.

ಘಟನೆಯಲ್ಲಿ ಅಂಗಡಿ ಮಾಲೀಕ ರವಿಕಿರಣ್ ಸೇರಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ಶಬ್ದ ಕೇಳಿ ತಕ್ಷಣ ಸ್ಥಳಕ್ಕೆ ಧಾವಿಸಿದ ಗ್ರಾಮಸ್ಥರು, ಗಾಯಾಳುಗಳನ್ನು ರಕ್ಷಿಸಿ ವಿಜಯಪುರದ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಸ್ಥಿತಿ ಸದ್ಯಕ್ಕೆ ಸ್ಥಿರವಾಗಿದೆ.

ಹೊರಗಿನಿಂದ ಸ್ಫೋಟದ ಶಂಕೆ!

ಸಾಮಾನ್ಯವಾಗಿ ಇಂತಹ ಸಣ್ಣ ಅಂಗಡಿಗಳಲ್ಲಿ ಫ್ರಿಡ್ಜ್ ಕಂಪ್ರೆಸರ್ ಅಥವಾ ಗ್ಯಾಸ್ ಸಿಲಿಂಡ‌ರ್ ಸ್ಫೋಟಗೊಳ್ಳುವ ಸಾಧ್ಯತೆ ಇರುತ್ತದೆ. ಆದರೆ, ಈ ಘಟನೆಯಲ್ಲಿ ಪಾನ್ ಶಾಪ್ ಒಳಗಿದ್ದ ಫ್ರಿಡ್ಜ್‌ಗೆ ಯಾವುದೇ ಹಾನಿಯಾಗಿಲ್ಲ. ಹೀಗಾಗಿ, ಈ ಸ್ಫೋಟವು ಅಂಗಡಿಯ ಒಳಗಿನ ತಾಂತ್ರಿಕ ದೋಷದಿಂದ ಆಗಿರದೆ, ಹೊರಗಡೆಯಿಂದಲೇ ಯಾರೋ ಕಿಡಿಗೇಡಿಗಳು ಮಾಡಿರುವ ಕೃತ್ಯ ಇರಬಹುದೇ ಅಥವಾ ಬೇರೆನಾದರೂ ಸ್ಫೋಟಕ ಕಾರಣವಿದೆಯೇ ಎಂಬ ಬಲವಾದ ಅನುಮಾನ ವ್ಯಕ್ತವಾಗಿದೆ.

ಘಟನೆಯ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಬಬಲೇಶ್ವರ ಠಾಣೆಯ ಪೊಲೀಸರು, ಅಗ್ನಿಶಾಮಕ ದಳ, ಶ್ವಾನದಳ ಹಾಗೂ ವಿಧ್ವಂಸಕ ಕೃತ್ಯ ಪತ್ತೆ ದಳದ (ಸೊಕೋ ತಂಡ) ತಜ್ಞರು ಜಂಟಿಯಾಗಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಹೃದಯಾಘಾತಕ್ಕೆ ಮತ್ತೊಂದು ಬಲಿ; ನೋಡನೋಡುತ್ತಿದ್ದಂತೆ ಕುಸಿದು ಬಿದ್ದು 14 ವರ್ಷದ ಬಾಲಕಿ ಸಾವು

ಈ ಸ್ಫೋಟಕ್ಕೆ ನಿಖರ ಕಾರಣ ಏನೆಂಬುದು ಇನ್ನೂ ತಿಳಿದುಬಂದಿಲ್ಲ. ಸದ್ಯ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದ ಬಳಿಕವಷ್ಟೇ ಸ್ಫೋಟಕ್ಕೆ ಕಾರಣ ಗೊತ್ತಾಗಲಿದೆ.