ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

Vijayapur Accident: ವಿಜಯಪುರದಲ್ಲಿ ಟಿಪ್ಪರ್-ಸಾರಿಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ

ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ಟಿಪ್ಪರ್ ಟೈರ್ ಬ್ಲಾಸ್ಟ್ ಆದ ಹಿನ್ನೆಲೆ ಅಪಘಾತ ಉಂಟಾಗಿದೆ ಎಂದು ತಿಳಿದುಬಂದಿದೆ. ದುರ್ಘಟನೆಯಲ್ಲಿ ಮೂವರು ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ವಿಜಯಪುರದಲ್ಲಿ ಟಿಪ್ಪರ್-ಸಾರಿಗೆ ಬಸ್ ಡಿಕ್ಕಿಯಾಗಿ ಮೂವರ ದುರ್ಮರಣ

ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ನಡೆದ ಅಪಘಾತದಲ್ಲಿ ಬಸ್‌ ನುಜ್ಜುಗುಜ್ಜಾಗಿರುವುದು. -

Prabhakara R
Prabhakara R Jun 16, 2026 3:15 PM

ವಿಜಯಪುರ: ಜಿಲ್ಲೆಯ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಭೀಕರ ಅಪಘಾತ‌ (Vijayapur Accident) ಸಂಭವಿಸಿದೆ. ಟಿಪ್ಪರ್ ಹಾಗೂ ಸಾರಿಗೆ ಬಸ್ ಡಿಕ್ಕಿಯಾಗಿ, ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಅಲ್ಲದೇ 10ಕ್ಕೂ ಹೆಚ್ಚು ಮಂದಿ ಗಂಭೀರ ಗಾಯವಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಲೋಣಿ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಟಿಪ್ಪರ್ ಟೈರ್ ಬ್ಲಾಸ್ಟ್ ಆದ ಹಿನ್ನೆಲೆ ಅಪಘಾತ ಉಂಟಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ. ಈ ಅಪಘಾತದಲ್ಲಿ ಟಿಪ್ಪರ್​​ನಲ್ಲಿದ್ದ ಚಾಲಕ ಅಶೋಕ್ ಉಟಗಿ ಹಾಗೂ ಪತ್ನಿ ರಾಧಾಬಾಯಿ ಹಾಗೂ ಸಾರಿಗೆ ಬಸ್ ಚಾಲಕ ಹನುಮಂತ ಚಲವಾದಿ ಮೃತಪಟ್ಟಿದ್ದಾರೆ.

ಟಿಪ್ಪರ್ ವಾಹನ ಚಡಚಣದತ್ತ ಹೊರಟಿತ್ತು. ಸರ್ಕಾರಿ ಬಸ್ ಚಡಚಣದಿಂದ ವಿಜಯಪುರದತ್ತ ಹೊರಟಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅರೆಸ್ಟ್

ರಾಯಚೂರು: ಜಿಲ್ಲೆಯ ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಅಕ್ಕ ತಂಗಿಯರ ಮೇಲೆ ಕಿರಾತಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.

8 ಹಾಗೂ 9 ವರ್ಷದ ಬಾಲಕಿಯರ ಮೇಲೆ ದೌರ್ಜನ್ಯ ಎಸಗಲಾಗಿದೆ. ಬಾಲಕಿಯರ ಕುಟುಂಬಕ್ಕೆ ಪರಿಚಯಸ್ಥ ವ್ಯಕ್ತಿಯಿಂದಲೇ ಅತ್ಯಾಚಾರ ನಡೆದಿದೆ. ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ 30 ವರ್ಷದ ಬಾಬಾನನ್ನ ಪೊಲೀಸರು ಬಂಧಿಸಿದ್ದಾರೆ.

ನೀಟ್‌ ಮರು ಪರೀಕ್ಷೆಗೆ ಕೆಲವೇ ದಿನ ಬಾಕಿ ಇರುವಾಗಲೇ ವಿದ್ಯಾರ್ಥಿ ಆತ್ಮಹತ್ಯೆ!

ಬಾಲಕಿಯರ ಪೋಷಕರು ಕೂಲಿ ಕೆಲಸಕ್ಕೆ ಹೋದಾಗ ಅವರ ಶೆಡ್‌ಗೆ ಬಂದು ಕೃತ್ಯ ಎಸಗಿದ್ದಾನೆ. ಕೂಲಿ ಕೆಲಸ ಮಾಡಿಕೊಂಡು ಶೆಡ್‌ನಲ್ಲಿ ಜೀವನ ನಡೆಸುತ್ತಿರುವ ಬಡ ಕುಟುಂಬಕ್ಕೆ ಘಟನೆಯಿಂದ ಆಘಾತವಾಗಿದೆ.