Road Accident: ಕುಂಭ ಮೇಳಕ್ಕೆ ತೆರಳುತ್ತಿದ್ದ ವಾಹನ ಅಪಘಾತ, ವಿಜಯಪುರದ ಇಬ್ಬರ ಸಾವು
ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಮ್ಯಾಕ್ಸಿ ಕ್ಯಾಬ್ ವಾಹನ ಸೋಮವಾರ ತಡರಾತ್ರಿ ಹೊತ್ತಿಗೆ ಗುಜರಾತ್ ರಾಜ್ಯದ ಪೋರಬಂದರ್ ಸಮೀಪ ನಿಂತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಪಟ್ಟಣದ ಇಬ್ಬರು ಯಾತ್ರಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದರು. ಚಾಲಕ ಸಮೇತ ಒಟ್ಟು 17 ಮಂದಿ ಮ್ಯಾಕ್ಸಿ ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದರು.


ವಿಜಯಪುರ: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ (Prayag Raj) ನಡೆಯುತ್ತಿರುವ ಮಹಾ ಕುಂಭ ಮೇಳದಲ್ಲಿ (Maha Kumbh Mela) ಭಾಗವಹಿಸಲು ವಿಜಯಪುರ (Vijayapura news) ಜಿಲ್ಲೆಯ ಚಡಚಣ ಪಟ್ಟಣದಿಂದ ತೆರಳಿದ್ದ ಯಾತ್ರಾರ್ಥಿಗಳ ವಾಹನ ಅಪಘಾತಕ್ಕೀಡಾಗಿ ಪಟ್ಟಣದ ಇಬ್ಬರು ಯಾತ್ರಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಮೃತಪಟ್ಟ ವ್ಯಕ್ತಿಗಳನ್ನು ಚಡಚಣ ಪಟ್ಟಣದ ವಿಶ್ವನಾಥ ಅವಜಿ (55) ಹಾಗೂ ಮಲ್ಲಿಕಾರ್ಜುನ ಸದ್ದಲಗಿ (40) ಎಂದು ಗುರುತಿಸಲಾಗಿದೆ.
ಯಾತ್ರಾರ್ಥಿಗಳು ಪ್ರಯಾಣಿಸುತ್ತಿದ್ದ ಮ್ಯಾಕ್ಸಿ ಕ್ಯಾಬ್ ವಾಹನ ಸೋಮವಾರ ತಡರಾತ್ರಿ ಹೊತ್ತಿಗೆ ಗುಜರಾತ್ ರಾಜ್ಯದ ಪೋರಬಂದರ್ ಸಮೀಪ ನಿಂತಿದ್ದ ಟಿಪ್ಪರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಪಟ್ಟಣದ ಇಬ್ಬರು ಯಾತ್ರಾರ್ಥಿಗಳು ಸ್ಥಳದಲ್ಲಿಯೇ ಸಾವನ್ನಪ್ಪಿದರು. ಚಾಲಕ ಸಮೇತ ಒಟ್ಟು 17 ಮಂದಿ ಮ್ಯಾಕ್ಸಿ ಕ್ಯಾಬ್‌ನಲ್ಲಿ ಪ್ರಯಾಣಿಸುತ್ತಿದ್ದರು. ನಾಲ್ವರು ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪೋರಬಂದರ್‌ನ ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಾಲಕ ನಿದ್ದೆ ಮಂಪರಿನಲ್ಲಿದ್ದಾಗ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ.
ಸಾಲಿಗರ ಕಿರುಕುಳಕ್ಕೆ ಮತ್ತೊಂದು ಬಲಿ, ವಿಷ ಸೇವಿಸಿ ಆತ್ಮಹತ್ಯೆ
ಕೊಪ್ಪಳ: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸೇರಿದಂತೆ ಸಾಲ ನೀಡಿದವರ ಕಿರುಕುಳಕ್ಕೆ ಮತ್ತೊಂದು ಬಲಿಯಾಗಿದ್ದು, ಕೊಪ್ಪಳ ಜಿಲ್ಲೆಯಲ್ಲಿ ವಿಷ ಸೇವಿಸಿ ಪಡಿತರ ವಿತರಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಬೆನಕನಹಾಳ ಗ್ರಾಮದಲ್ಲಿ ಸಾಲಗಾರರ ಕಿರುಕುಳಕ್ಕೆ ಬೇಸತ್ತು ಯಂಕಪ್ಪ ಬಂಗಿ (38) ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ನಿನ್ನೆ ರಾತ್ರಿ ಯಂಕಪ್ಪ ಬಂಗಿ ವಿಷ ಸೇವಿಸಿದ್ದು, ಕೂಡಲೇ ಅವರನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಮೃತಪಟ್ಟಿದ್ದಾರೆ. ಯಂಕಪ್ಪ ವಿವಿಧೆಡೆ 20 ಲಕ್ಷಕ್ಕೂ ಹೆಚ್ಚು ಸಾಲ ಮಾಡಿದ್ದ. ಹನುಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಿನ್ನೆ ಸಾಲದಿಂದ ಬೇಸತ್ತು ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿದ ಘಟನೆ ಮಂಡ್ಯದಲ್ಲಿ ನಡೆದಿತ್ತು. ಆತ್ಮಹತ್ಯೆ ಮಾಡಿಕೊಂಡವರು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನಿವಾಸಿಗಳು. ಮಾಸ್ತಪ್ಪ (65) ಪತ್ನಿ ರತ್ನಮ್ಮ (45) ಮಗಳು ಲಕ್ಷ್ಮಿ (14) ಎಂಬವರು ಮಂಡ್ಯ ತಾಲೂಕಿನ ವಿ ಸಿ ನಾಲಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದರು. ಮಾಸ್ತಪ್ಪ ವಿವಿಧಡೆ ಒಟ್ಟು 12 ಲಕ್ಷ ಸಾಲ ಮಾಡಿಕೊಂಡಿದ್ದರು ಎನ್ನಲಾಗಿದೆ. ಮೈಕ್ರೋ ಫೈನಾನ್ಸ್ ಕಿರುಕುಳ ತಡೆಯಲು ಸುಗ್ರೀವಾಜ್ಞೆ ತಂದರೂ ಆತ್ಮಹತ್ಯೆಗಳು ನಿಂತಿಲ್ಲ.
ಇದನ್ನೂ ಓದಿ: Microfinance Ordinance: ಸಾಲಗಾರರ ಕಿರುಕುಳಕ್ಕೆ ಬ್ರೇಕ್; ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ