Basanagouda Patil Yatnal: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ; ಅಧಿಕಾರ ಉಳಿಯುತ್ತ?
ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಈ ಹಿಂದೆ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಹಾಗಾದರೆ ಅವರ ಅಧಿಕಾರ ಉಳಿಯುತ್ತ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಬಸನಗೌಡ ಪಾಟೀಲ್ ಯತ್ನಾಳ್.

ಬೆಂಗಳೂರು: ವಿಜಯಪುರ ಬಿಜೆಪಿ (BJP) ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangowda Patil Yatnal) ಅವರನ್ನು ಉಚ್ಚಾಟಿಸಲಾಗಿದೆ. ಆ ಮೂಲಕ ರಾಜ್ಯ ಬಿಜೆಪಿಯಲ್ಲಿ ಬಿರುಗಾಳಿ ಎದ್ದಿದೆ. ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿಯಿಂದ ಆದೇಶ ಹೊರಡಿಸಿದೆ. ಈ ಹಿಂದೆ ಶಿಸ್ತು ಸಮಿತಿ ನೀಡಿದ್ದ ಶೋಕಾಸ್ ನೋಟಿಸ್‌ಗೆ ಯಾವುದೇ ಉತ್ತರ ನೀಡದ ಕಾರಣ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು 6 ವರ್ಷಗಳ ಕಾಲ ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. ಹಾಗಾದರೆ ಅವರ ಅಧಿಕಾರ ಉಳಿಯುತ್ತ ಎನ್ನುವ ಪ್ರಶ್ನೆ ಮೂಡಿದೆ.
ಮೂಲಗಳ ಪ್ರಕಾರ ಯತ್ನಾಳ್ ಅವರ ಶಾಸಕ ಸ್ಥಾನಕ್ಕೆ ಯಾವುದೇ ಧಕ್ಕೆ ಉಂಟಾಗುವುದಿಲ್ಲ. ಶಾಸಕರಾಗಿ ಅವರು ಮುಂದುವರಿಯಲಿದ್ದಾರೆ. ಪಕ್ಷೇತರ ಶಾಸಕರಂತೆ ಅವರನ್ನು ಪರಿಗಣಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಈ ಸುದ್ದಿಯನ್ನೂ ಓದಿ: Basanagouda Patil Yatnal: ಬಿಜೆಪಿಯಿಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆ
3ನೇ ಬಾರಿ ಉಚ್ಚಾಟನೆ
1994ರಲ್ಲೇ ರಾಜಕೀಯ ಬದುಕನ್ನು ಆರಂಭಿಸಿದ ಯತ್ನಾಳ್ ಪಕ್ಷದಿಂದ ಉಚ್ಚಾಟಿತರಾಗಿದ್ದು ಇದ್ದು ಮೊದಲ ಸಲವೇನಲ್ಲ. ಈ ಹಿಂದೆ 2009 ಮತ್ತು 2016ರಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿತ್ತು. 2009ರಲ್ಲಿ ಅಂದಿನ ಮುಖ್ಯಮಂತ್ರಿ ಯಡಿಯೂರಪ್ಪ, ಶೋಭಾ ಕರಂದ್ಲಾಜೆ, ಸದಾನಂದಗೌಡ ವಿರುದ್ದ ಮಾತನಾಡಿದ ಕಾರಣಕ್ಕೆ ಅಮಾನತು ಮಾಡಲಾಗಿತ್ತು. 2015ರಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ವಿಜಯಪುರ ಸ್ಥಳೀಯ ಪ್ರಾಧಿಕಾರಗಳ ಅವಳಿ ಕ್ಷೇತ್ರಗಳಿಗೆ ಯತ್ನಾಳ್ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ಇದು ಬಿಜೆಪಿ ನಾಯಕರ ಅಸಮಾಧಾನಕ್ಕೆ ಕಾರಣವಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನುಬಿಜೆಪಿಯಿಂದ ಹೊರಹಾಕಲಾಗಿತ್ತು. 2018ರಲ್ಲಿ ಅವರು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದರು. 2018ರಲ್ಲಿ ವಿಜಯಪುರ ಜಿಲ್ಲೆಯಿಂದ ಬಿಜೆಪಿಯಿಂದ ಸ್ಪರ್ಧಿಸಿದ್ದ ಅವರು ಇದೀಗ ಸತತ 2ನೇ ಬಾರಿ ಶಾಸಕರಾಗಿದ್ದಾರೆ.
ರಾಜಕೀಯ ಹಾದಿ
ಯತ್ನಾಳ್ ಅವರು 1994ರಲ್ಲಿ ರಾಜಕೀಯ ಬದುಕನ್ನು ಆರಂಭಿಸಿದರು. ಬಿಜೆಪಿ ಅಭ್ಯರ್ಥಿಯಾಗಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಬಿಜಾಪುರ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 1999ರ ಲೋಕಸಭಾ ಚುನಾವಣೆಯಲ್ಲಿ ಬಿಜಾಪುರ ಕ್ಷೇತ್ರದಿಂದ ಸ್ಪರ್ಧಿಸಿ ಅಲ್ಲಿಯೂ ಜಯ ಗಳಿಸಿದ್ದರು. ಅವರು 2004ರಲ್ಲಿ ಲೋಕಸಭೆಗೆ ಮರು ಆಯ್ಕೆಯಾಗಿದ್ದರು. ಅವರು 2003ರ ಸೆಪ್ಟೆಂಬರ್ 8ರಿಂದ 2004ರ ಮೇ 16ರವರೆಗೆ ಕೇಂದ್ರದಲ್ಲಿ ರೈಲ್ವೆ ರಾಜ್ಯ ಸಚಿವರಾಗಿ ಸೇವೆ ಸಲ್ಲಿಸಿದ್ದರು.
2010ರಲ್ಲಿ ಯತ್ನಾಳ್ ಜೆಡಿಎಸ್‌ಗೆ ಸೇರ್ಪಡೆಗೊಂಡಿದ್ದರು. 2013ರ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಅವರು ಜೆಡಿಎಸ್ ಅಭ್ಯರ್ಥಿಯಾಗಿ ವಿಜಯಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. ಅದೇ ವರ್ಷದಲ್ಲಿ ಜೆಡಿಎಸ್ ತೊರೆದು ಮತ್ತೆ ಬಿಜೆಪಿಗೆ ಸೇರ್ಪಡೆಯಾಗಿದ್ದರು.
ಉಚ್ಚಾಟನೆ ಆದೇಶದಲ್ಲೇನಿದೆ?
ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025ರ ಫೆ. 10ರಂದು ನೀಡಿದ್ದ ಶೋಕಾಸ್ ನೋಟಿಸ್‌ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್‌ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆ ಮತ್ತು ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತನ್ನು ಪದೇ ಪದೆ ಉಲ್ಲಂಘಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿದೆ. ಆದ್ದರಿಂದ, ನಿಮ್ಮನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದ ಜಾರಿಗೆ ಬರುವಂತೆ 6 ವರ್ಷಗಳ ಅವಧಿಗೆ ಉಚ್ಚಾಟಿಸಲು ನಿರ್ಧರಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.