CM Siddaramaiah: ಕನ್ನಡ ನಾಡಿನ ಜನ ಕಾಂಗ್ರೆಸ್ ಸರ್ಕಾರವನ್ನು ಒಪ್ಪಿಕೊಂಡಿದ್ದಾರೆ ಎಂದ ಸಿಎಂ
CM Siddaramaiah: ಚುನಾವಣೆ ಪೂರ್ವದಲ್ಲಿ 2022 ರಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದೆವು. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ, ನುಡಿದಂತೆ ನಡೆಯುವುದು ನಮ್ಮ ಬದ್ಧತೆಯಾಗಿದೆ ಎಂದು ವಿಧಾನ ಪರಿಷತ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.


ಬೆಂಗಳೂರು: ಸದಸ್ಯರ ಟೀಕೆಗಳು, ಸಲಹೆ ಸೂಚನೆಗಳನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳಿಗೆ ಸರಿದಾರಿ ತೋರಲು ಟೀಕೆಗಳು ಇರಬೇಕು. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ, ನುಡಿದಂತೆ ನಡೆಯುವುದು ನಮ್ಮ ಬದ್ಧತೆಯಾಗಿದೆ. ರಾಜ್ಯಪಾಲರು ತಮ್ಮ ಭಾಷಣದಲ್ಲಿ ಸರ್ಕಾರದ ಸಾಧನೆಗಳಿಗೆ ಕನ್ನಡಿ ಹಿಡಿದಿದ್ದಾರೆ. ಸಂಪೂರ್ಣ ಸತ್ಯ ಹೇಳಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah) ತಿಳಿಸಿದರು. ವಿಧಾನಪರಿಷತ್‌ನಲ್ಲಿ (Karnataka Assembly session) ಮಂಗಳವಾರ ರಾಜ್ಯಪಾಲರ ಭಾಷಣದ ಕುರಿತ ಚರ್ಚೆ ವೇಳೆ ಮುಖ್ಯಮಂತ್ರಿಗಳು ಮಾತನಾಡಿದ್ದಾರೆ.
ವಂದನಾ ನಿರ್ಣಯದ ಮೇಲೆ ಸುಮಾರು ವಿರೋಧ ಪಕ್ಷದ ನಾಯಕರು ಸೇರಿದಂತೆ 16 ಜನ ಸದಸ್ಯರು ಸುಮಾರು 9ಗಂಟೆ 56 ನಿಮಿಷಗಳ ಕಾಲ ತಮ್ಮ ಅಭಿಪ್ರಾಯವನ್ನು ಮಂಡಿಸಿದ್ದಾರೆ. ಕೆಳಮನೆ ಹಾಗೂ ಮೇಲ್ಮನೆಗೂ ಬರುತ್ತಿರುವುದರಿಂದ , ಚರ್ಚೆಗಳ ಮಟ್ಟ ಎತ್ತರಕ್ಕೆ ಹೋಗಬೇಕೇ ವಿನ: ಗುಣಮಟ್ಟ ಇಳಿಯಬಾರದು. ಸತ್ಯವನ್ನು ಮರೆಮಾಚಿ ಟೀಕೆ ಮಾಡಬಾರದು. ಇದು ಪ್ರಜಾಪ್ರಭುತ್ವದ ಆರೋಗ್ಯಕ್ಕೆ ಮಾರಕ. ವಾಸ್ತವಾಂಶಗಳ ಮೇಲೆ ಬೆಳಕು ಚೆಲ್ಲಬೇಕು. ದಾಖಲಾತಿಗಳನ್ನು ಸದನದ ಮುಂದಿಡಬೇಕು. ಈ ರೀತಿಯನ್ನು ನಾನೆಂದಿಗೂ ಸ್ವಾಗತಿಸುತ್ತೇನೆ ಎಂದು ಸಿಎಂ ಹೇಳಿದರು.
ಸರ್ಕಾರದ ಕಳೆದೊಂದು ವರ್ಷದ ಸಾಧನೆಗಳನ್ನು ರಾಜ್ಯಪಾಲರ ಭಾಷಣದ ಮೂಲಕ ಪ್ರಸ್ತಾಪಿಸಲು ಸಾಧ್ಯವಿಲ್ಲದಿದ್ದರೂ , ಈ ನಿಟ್ಟಿನಲ್ಲಿ ಪ್ರಯತ್ನಿಸಲಾಗಿದೆ. ಇತ್ತೀಚೆಗೆ ಹೆಚ್ಚು ವಿದ್ಯಾವಂತರು , ವಿಚಾರವಂತರು ಕೆಳಮನೆ ಹಾಗೂ ಮೇಲ್ಮನೆಗೂ ಬರುತ್ತಿರುವುದರಿಂದ , ಚರ್ಚೆಗಳ ಮಟ್ಟ ಎತ್ತರಕ್ಕೆ ಹೋಗಬೇಕೇ ವಿನ: ಗುಣಮಟ್ಟ ಇಳಿಯಬಾರದು.
2023ರ ಮೇ ಚುನಾವಣೆಯಲ್ಲಿ ರಾಜ್ಯದ ಜನ ಕಾಂಗ್ರೆಸ್ ಪಕ್ಷವನ್ನು 136 ಸ್ಥಾನಗಳನ್ನು ನೀಡಿ ಗೆಲ್ಲಿಸಿದರು. ಅದರ ನಂತರ 2024 ರಲ್ಲಿ ಲೋಕಸಭೆ ಚುನಾವಣೆ ನಡೆದು, ಜನರು ನಮಗೆ ಹೆಚ್ಚಿನ ಆಶೀರ್ವಾದ ಮಾಡಿದರು. ನಂತರ ನಡೆದ ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರಿನಲ್ಲಿ ನಡೆದ ಉಪ ಚುನಾವಣೆಗಳಲ್ಲಿ ದೊಡ್ಡ ಅಂತರದಿಂದ ಗೆಲುವು ಸಾಧಿಸಿದೆವು. ಚನ್ನಪಟ್ಟಣದಲ್ಲಿ 25 ಸಾವಿರ , ಶಿಗ್ಗಾಂವಿ 13 ಸಾವಿರ, ಸಂಡೂರಿನಲ್ಲಿ 9 ಸಾವಿರ ಅಂತರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿತು.
ಈ ಸುದ್ದಿಯನ್ನೂ ಓದಿ | Congress guarantees: ಗ್ಯಾರಂಟಿಗಳಿಂದ ಬಡವರಲ್ಲಿ ಸ್ವಾಭಿಮಾನ, ಆತ್ಮವಿಶ್ವಾಸ ಹೆಚ್ಚಿದೆ: ಸಿಎಂ
ಕನ್ನಡ ನಾಡಿನ ಜನ ಕಾಂಗ್ರೆಸ್ ಸರ್ಕಾರವನ್ನು ಒಪ್ಪಿಕೊಂಡಿದ್ದಾರೆ. ಚುನಾವಣೆ ಪೂರ್ವದಲ್ಲಿ 2022 ರಲ್ಲಿ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದೆವು. 2023ರಲ್ಲಿ ಜೂನ್ 11 ರಲ್ಲಿ ಶಕ್ತಿ ಯೋಜನೆಯನ್ನು ವಿಧಾನಸೌಧದಲ್ಲಿ, ಜುಲೈ ತಿಂಗಳಲ್ಲಿ ಅನ್ನಭಾಗ್ಯ, ಗೃಹಜ್ಯೋತಿ ಯೋಜನೆಯನ್ನು ಜಾರಿ ಮಾಡಲಾಯಿತು. ಆಗಸ್ಟ್ 1 ರಂದು ಮೈಸೂರಿನಲ್ಲಿ ಗೃಹಲಕ್ಷ್ಮಿಯನ್ನು ಜಾರಿ ಮಾಡಲಾಯಿತು. ಡಿಸೆಂಬರ್‌ನಲ್ಲಿ ಶಿವಮೊಗ್ಗದಲ್ಲಿ ಯುವನಿಧಿಯನ್ನು ಪ್ರಾರಂಭಿಸಲಾಯಿತು. ಗ್ಯಾರಂಟಿ ಯೋಜನೆಗಳನ್ನು ಒಂದು ವರ್ಷದ ಒಳಗೆಯೇ ಜಾರಿ ಮಾಡಲಾಯಿತು. ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಿ ನುಡಿದಂತೆ ನಡೆದಿದ್ದೇವೆ. ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.