ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Karnataka weather: ಹವಾಮಾನ ವರದಿ; ರಾಜ್ಯದಲ್ಲಿ ಇಂದು ಎಲ್ಲೆಲ್ಲಿ ಮಳೆಯಾಗಲಿದೆ?

Karnataka weather: ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ 40-50 ಕಿ.ಮೀ. ನೊಂದಿಗೆ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

ಹವಾಮಾನ ವರದಿ; ರಾಜ್ಯದಲ್ಲಿ ಇಂದು ಎಲ್ಲೆಲ್ಲಿ ಮಳೆಯಾಗಲಿದೆ?

Profile Prabhakara R Jun 30, 2025 6:00 AM

ಬೆಂಗಳೂರು: ರಾಜ್ಯದಲ್ಲಿ ಜುಲೈ 4ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ (Karnataka weather) ಸಾಧ್ಯತೆ ಇದೆ. ಹೀಗಾಗಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯ ವೇಗ 40-50 ಕಿ.ಮೀ. ನೊಂದಿಗೆ ನಿರಂತರ ಗಾಳಿ ಬೀಸುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 29°C ಮತ್ತು 21°C ಇರುವ ಸಾಧ್ಯತೆ ಇದೆ.

ಜೂನ್‌ 30ರಂದು ಕರಾವಳಿ ಜಿಲ್ಲೆಗಳಲ್ಲಿ ನಿರಂತರ ಗಾಳಿಯೊಂದಿಗೆ ಗಂಟೆಗೆ 30-40 ಕಿ.ಮೀ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 1ರಂದು ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಜುಲೈ 2ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕ ಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಜುಲೈ 3ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೊಡಗು, ಕೋಲಾರ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ನಿರಂತರ ಗಾಳಿಯೊಂದಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಈ ಸುದ್ದಿಯನ್ನೂ ಓದಿ | Health Tips: ಆಕಳಿಕೆ ಅತಿಯಾದರೆ ತೊಂದರೆಯೇ?

ಜುಲೈ 4 ಮತ್ತು 5ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ, ರಾಮನಗರ, ಬಳ್ಳಾರಿ, ಚಿತ್ರದುರ್ಗ, ಮಂಡ್ಯ, ಮೈಸೂರು, ಕೋಲಾರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.