ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ʼʼಫಲಾನುಭವಿಗಳ ಸಂಖ್ಯೆ ಕಡಿಮೆ ಮಾಡಲು ಗೃಹಲಕ್ಷ್ಮಿ ಯೋಜನೆಗೆ ಸರ್ಕಾರದಿಂದ ಕಂಡಿಷನ್ʼʼ: ಸಿ.ಟಿ. ರವಿ ವಾಗ್ದಾಳಿ

CT Ravi: ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ? ಎಂದು ಪ್ರಶ್ನಿಸಿರುವ ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ, ಫಲಾನುಭವಿ ಜನರನ್ನು ಕಡಿಮೆ ಮಾಡಲು ಕಂಡಿಷನ್ ಹಾಕುತ್ತೀರಿ. ನಿಮ್ಮ ಹಳೆ ಭಾಷಣವನ್ನು ಜನರು ಕೇಳಿಸಿಕೊಳ್ಳುತ್ತಾರೆ. ಇದಕ್ಕೆ ಸೂಕ್ತ ಸಮಯದಲ್ಲಿ ಜನರು ಉತ್ತರ ಕೊಡುತ್ತಾರೆ ಎಂದು ಹೇಳಿದ್ದಾರೆ.

ಗೃಹಲಕ್ಷ್ಮಿ ಯೋಜನೆಗೆ ಈಗ ಕಂಡಿಷನ್ ಯಾಕೆ?: ಸಿ.ಟಿ. ರವಿ

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ (ಸಂಗ್ರಹ ಚಿತ್ರ) -

Profile
Siddalinga Swamy Jun 11, 2026 6:34 PM

ಬೆಂಗಳೂರು, ಜೂ. 11: ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಈಗ ಷರತ್ತು ಯಾಕೆ? ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ (CT Ravi) ಪ್ರಶ್ನಿಸಿದ್ದಾರೆ. ಆಗ ಇಲ್ಲದ ಕಂಡಿಷನ್ ಈಗ ಯಾಕೆ? ಎಂದಿದ್ದಾರೆ. ಮಾಧ್ಯಮಗಳೊಂದಿಗೆ ಗುರುವಾರ ಅವರು ಮಾತನಾಡಿದರು. ನಿಮ್ಮ ಕಂಡಿಷನ್ ಯಾಕೆ, ಖಜಾನೆ ಖಾಲಿ ಎಂಬುದು ಜನರಿಗೆ ಗೊತ್ತಿದೆ ಎಂದು ಹೇಳಿದರು.

ಫಲಾನುಭವಿ ಜನರನ್ನು ಕಡಿಮೆ ಮಾಡಲು ಕಂಡಿಷನ್ ಹಾಕುತ್ತೀರಿ. ನಿಮ್ಮ ಹಳೆ ಭಾಷಣವನ್ನು ಜನರು ಕೇಳಿಸಿಕೊಳ್ಳುತ್ತಾರೆ. ಇದಕ್ಕೆ ಸೂಕ್ತ ಸಮಯದಲ್ಲಿ ಜನರು ಉತ್ತರ ಕೊಡುತ್ತಾರೆ ಎಂದು ಹೇಳಿದರು. ನಮಗೂ ಗ್ಯಾರಂಟಿ ಯೋಜನೆಗಳಿಗೂ ಸಂಬಂಧ ಇಲ್ಲ ಎಂದು ಡಿ.ಕೆ. ಶಿವಕುಮಾರ್ ಹೇಳಿದರೆ, ನಾವು ಪ್ರಶ್ನೆ ಮಾಡುವುದಿಲ್ಲ ಎಂದು ಸವಾಲು ಹಾಕಿದರು.

ಗೃಹಲಕ್ಷ್ಮಿ ಕೊಡಬೇಕಾಗುತ್ತದೆ ಎಂದು ಹೊಸ ಬಿಪಿಎಲ್ ಕಾರ್ಡ್ ಕೊಡುವುದನ್ನೂ ನಿಲ್ಲಿಸಿದ್ದಾರೆ. ಇದರಿಂದಾಗಿ ಅರ್ಹ ಫಲಾನುಭವಿಗಳು ಬಿಪಿಎಲ್ ಕಾರ್ಡ್‌ನಿಂದಲೂ ವಂಚಿತರಾಗಿದ್ದಾರೆ ಎಂದು ಆರೋಪಿಸಿದರು.

ರಾಜ್ಯದಲ್ಲಿ ರಸಗೊಬ್ಬರ ಬೇಡಿಕೆಗೆ ಅನುಗುಣವಾಗಿ ಸ್ಟಾಕ್ ಇದೆ ಎಂದು ಹಿಂದಿನ ಕೃಷಿ ಸಚಿವರು ಹೇಳಿಕೆ ನೀಡಿದ್ದರು. ಹಾಗಿದ್ದರೆ ಕೊರತೆ ಹೇಗೆ? ಯಾಕೆ ಕಾಳಸಂತೆಯಲ್ಲಿ ಮಾರಾಟ ಆಗುತ್ತಿದೆ ಎಂಬುದಕ್ಕೆ ಹೊಸ ಸರ್ಕಾರ ಮತ್ತು ಅಧಿಕಾರಿಗಳು ಉತ್ತರ ಕೊಡಲಿ ಎಂದು ಆಗ್ರಹಿಸಿದರು. ಯೂರಿಯ ಕೇರಳ, ತಮಿಳುನಾಡಿಗೆ ಹೋಗುವ ದೂರು ಇದೆ. ಅದರ ಕಡೆ ಗಮನಿಸಿ, ರೈತರಿಗೆ ಸಮರ್ಪಕವಾಗಿ ಗೊಬ್ಬರ ಸಿಗುವಂತೆ ನೋಡಿಕೊಳ್ಳಿ ಎಂದು ಒತ್ತಾಯಿಸಿದ ಅವರು, ಕಾಳಸಂತೆಯಲ್ಲಿ ಫ್ಯಾಕ್ಟರಿಗೆ ಸರಬರಾಜು ಮಾಡಲು ಅವಕಾಶ ಕೊಡದಿರಿ ಎಂದು ಆಗ್ರಹಿಸಿದರು.‌

12 ವರ್ಷಗಳ ದಾಖಲೆಯ ಆಡಳಿತ; ಪ್ರಧಾನಿ ಮೋದಿ ಅಭಿನಂದಿಸಿದ ಎಚ್.ಡಿ.ಕೆ.

ನೀತಿ ಆಯೋಗದ ಸಭೆಗೆ ಹೋಗುವುದು ಮತ್ತು ಹೋಗದೇ ಇರುವುದರಿಂದ ಆಗುವ ವ್ಯತ್ಯಾಸ ಈಗಲಾದರೂ ಕಾಂಗ್ರೆಸ್ಸಿಗೆ ಗೊತ್ತಾಗಿದೆ ಎಂದು ಡಿ.ಕೆ. ಶಿವಕುಮಾರ್ ನೀತಿ ಆಯೋಗದ ಸಭೆಗೆ ಹಾಜರಾಗುವ ಕುರಿತ ಪ್ರಶ್ನೆಗೆ ಉತ್ತರಿಸಿದರು. ಅವರು ಹೋಗಿದ್ದು ಸೂಕ್ತ ಇದೆ. ಈಗಲಾದರೂ ತಡವಾಗಿಯಾದರೂ ಕಾಂಗ್ರೆಸ್ ಎಚ್ಚೆತ್ತುಕೊಂಡಿದ್ದು ಸ್ವಾಗತಾರ್ಹ ಎಂದು ಬಿಜೆಪಿ ರಾಷ್ಟ್ರೀಯ ಮಾಜಿ ಪ್ರಧಾನ ಕಾರ್ಯದರ್ಶಿ ಹಾಗೂ ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ತಿಳಿಸಿದರು.