ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಪದಗ್ರಹಣ ಜೂನ್ 3ರಂದೇ ಏಕೆ? ಇದರ ಹಿಂದಿರುವ ಲೆಕ್ಕಾಚಾರವೇನು?

DKS Taking Oath: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಜೂನ್ 3ರಂದು ಸಂಜೆ 4:10ಕ್ಕೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಗುರುವಾರ (ಮೇ 28) ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕದ ಬಗ್ಗೆ ತೀವ್ರ ಊಹಾಪೋಹಗಳು ಕೇಳಿಬರುತ್ತಿವೆ.

ಡಿ.ಕೆ. ಶಿವಕುಮಾರ್ (ಸಂಗ್ರಹ ಚಿತ್ರ)

ಬೆಂಗಳೂರು, ಮೇ 30: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ (DK Shivakumar) ಜೂನ್ 3ರ ಸಂಜೆ 4:10ಕ್ಕೆ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ನಿಯೋಗ ಶನಿವಾರ (ಮೇ 30) ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ (Thawarchand Gehlot) ಅವರನ್ನು ಭೇಟಿಯಾಗಿ ಪ್ರಮಾಣ ವಚನ ಸ್ವೀಕಾರದ ಬಗ್ಗೆ ಚರ್ಚೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ. ಡಿ.ಕೆ. ಶಿವಕುಮಾರ್ ಅವರ ಹೊಸ ಸಚಿವ ಸಂಪುಟಕ್ಕೆ ಇದು ಸರಳ ಪ್ರಮಾಣ ವಚನ ಸ್ವೀಕಾರ ಸಮಾರಂಭವಾಗಿರಲಿದೆ ಎನ್ನಲಾಗಿದೆ.

ಗುರುವಾರ (ಮೇ 28) ಸಿದ್ದರಾಮಯ್ಯ ಮುಖ್ಯಮಂತ್ರಿ ಹುದ್ದೆಗೆ ರಾಜೀನಾಮೆ ನೀಡಿದ ನಂತರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ದಿನಾಂಕದ ಬಗ್ಗೆ ತೀವ್ರ ಊಹಾಪೋಹಗಳು ಕೇಳಿ ಬರುತ್ತಿವೆ. ಶಿವಕುಮಾರ್ ಧಾರ್ಮಿಕ ನಂಬಿಕೆ ಹೊಂದಿರುವ ವ್ಯಕ್ತಿಯಾಗಿದ್ದು, ತಮ್ಮ ಜ್ಯೋತಿಷಿ ಬೆಳ್ಳೂರು ದ್ವಾರಕನಾಥ್ ಅವರೊಂದಿಗೆ ಸಮಾಲೋಚಿಸಿದ ನಂತರ, ಜೂನ್ 3ರಂದು ಪ್ರಮಾಣ ವಚನ ಸ್ವೀಕರಿಸುವ ದಿನಾಂಕವನ್ನು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಜೂನ್ 3ರ ಸಂಜೆ 4:10ಕ್ಕೆ ಪ್ರಮಾಣ ವಚನ ಸ್ವೀಕರಿಸಲು ಶುಭ ಸಮಯ ಎಂದು ಜ್ಯೋತಿಷಿ ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಮಾಣ ವಚನ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಹೀಗಾಗಿ ಡಿಕೆಶಿ ಜೂನ್ 3ರಂದೇ ಪ್ರಮಾಣ ವಚನ ಸ್ವೀಕರಿಸಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಡಿ.ಕೆ. ಶಿವಕುಮಾರ್ ಅವರೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ. ಒಬ್ಬರು ದಲಿತ ಸಮುದಾಯದವರಾಗಿದ್ದರೆ, ಇನ್ನೊಬ್ಬರು ಅಲ್ಪಸಂಖ್ಯಾತ ಸಮುದಾಯದಕ್ಕೆ ಸೇರಿದವರಾಗಿರುತ್ತಾರೆ.

ರಾಜೀನಾಮೆಗೂ ಮುನ್ನ ಸಿದ್ದರಾಮಯ್ಯ ‘ಟೈಮ್ ಬಾಂಬ್’: ಡಿಕೆಶಿ-ರಾಹುಲ್‌ಗೆ ಜಾತಿ ಗಣತಿ ಸವಾಲು!

ಅಹಿಂದ ನಾಯಕ ಸಿದ್ದರಾಮಯ್ಯ ಅವರ ನಿರ್ಗಮನದ ನಂತರ ಕಾಂಗ್ರೆಸ್‌ನ ಹೊಸ ಸರ್ಕಾರದಲ್ಲಿ ವಿವಿಧ ಜಾತಿ ಮತ್ತು ಸಮುದಾಯಗಳ ನಡುವೆ ಹಾಗೂ ಪಕ್ಷದ ಬಣಗಳ ನಡುವೆ ಸಮತೋಲನ ಸಾಧಿಸುವ ಸಾಧ್ಯತೆಯಿದೆ. ಹೊಸ ಸರ್ಕಾರದಲ್ಲಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಅವರಿಗೆ ಪ್ರಮುಖ ಖಾತೆ ದೊರೆಯುವ ಸಾಧ್ಯತೆಯಿದೆ.

ಡಿ.ಕೆ. ಶಿವಕುಮಾರ್ ನೇತೃತ್ವದ ಹೊಸ ಸರ್ಕಾರದ ರೂಪರೇಷೆಗಳ ಕುರಿತು ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಪ್ರಮುಖ ನಿರ್ದೇಶನಗಳನ್ನು ನೀಡಿದ್ದಾರೆ. ಹೊಸ ಸಚಿವ ಸಂಪುಟದಲ್ಲಿ ದಲಿತರು, ಒಬಿಸಿ ಮತ್ತು ಅಲ್ಪಸಂಖ್ಯಾತರಿಗೆ ಹೆಚ್ಚಿನ ಪ್ರಾತಿನಿಧ್ಯ ಸಿಗಬೇಕು ಎಂಬುದು ರಾಹುಲ್ ಗಾಂಧಿ ಆಶಯ. ಡಿ.ಕೆ. ಶಿವಕುಮಾರ್ ಪಾಳಯದಿಂದ ಬದಲಾವಣೆಗಾಗಿ ನಿರಂತರ ಬೇಡಿಕೆ ಬಂದ ಹಿನ್ನೆಲೆಯಲ್ಲಿ, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಬೇಕಾಗಿ ಬಂದಿದೆ ಎನ್ನಲಾಗಿದೆ.

2028ರಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಮುನ್ನ ಬದಲಾವಣೆಯನ್ನು ಸೂಚಿಸಲು ಮತ್ತು ಹೆಚ್ಚಿನ ಯುವಕರನ್ನು ಆಕರ್ಷಿಸಲು ರಾಹುಲ್ ಗಾಂಧಿ, ಕಿರಿಯ ಮುಖಗಳಿಗೆ ಸಂಪುಟದಲ್ಲಿ ಸ್ಥಾನಮಾನ ನೀಡುವ ಬಗ್ಗೆಯೂ ಉತ್ಸುಕರಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.