Karnataka Weather: ಇಂದಿನ ಹವಾಮಾನ; ರಾಜ್ಯದ ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ನಿರೀಕ್ಷೆ!
Karnataka Rains: ಜುಲೈ 7ರಂದು ಕೂಡ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಸೇರಿ ಇನ್ನುಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ.


ಬೆಂಗಳೂರು: ರಾಜ್ಯದಲ್ಲಿ ಬೆಂಗಳೂರು ಸೇರಿ ವಿವಿಧೆಡೆ ಭಾನುವಾರ ಉತ್ತಮ ಮಳೆಯಾಗಿದೆ. ಅದೇ ರೀತಿ ಜುಲೈ 7ರಂದು ಕೂಡ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ, ಬಳ್ಳಾರಿ, ಬೆಂಗಳೂರು ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ ಸೇರಿ ಇತರ ಜಿಲ್ಲೆಗಳಲ್ಲಿ ಹಗುರಿಂದ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಜುಲೈ 8ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ ಸೇರಿ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಜುಲೈ 9ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಗದಗ, ಹಾವೇರಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಸೇರಿ ವಿವಿಧ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಈ ಸುದ್ದಿಯನ್ನೂ ಓದಿ | Health Tips: ಬಿಯರ್ ಕುಡಿದರೆ ಹೊಟ್ಟೆ ಬರೋದು ನಿಜನಾ? ಆರೋಗ್ಯಕ್ಕೆ ಇದೆಷ್ಟು ಹಾನಿಕಾರಕ?
ಜುಲೈ 10 ಮತ್ತು 11ರಂದು ಕರಾವಳಿ ಜಿಲ್ಲೆಗಳಲ್ಲಿ ಬಿರುಸಿನ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಬೀದರ್, ಬಾಗಲಕೋಟೆ, ಧಾರವಾಡ, ಕೊಪ್ಪಳ, ಕಲಬುರಗಿ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ಕೋಲಾರ ಸೇರಿ ವಿವಿಧ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದ ಹವಾಮಾನ ಇಲಾಖೆ ತಿಳಿಸಿದೆ.