Actor Darshan: ದರ್ಶನ್‌ಗೆ ಇನ್ನಾದರೂ ಸಿಗುತ್ತಾ ಹಾಸಿಗೆ, ದಿಂಬು? ಅರ್ಜಿ ಪುರಸ್ಕರಿಸಿದ ಕೋರ್ಟ್
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ದೋಷಿ ನಟ ದರ್ಶನ್ ಅವರ ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ ನಡೆಯುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ ಜೈಲಿನ ಅಧಿಕಾರಿಗಳ ವಿರುದ್ಧ ದರ್ಶನ್ ಕೋರ್ಟಿಗೆ ದೂರು ನೀಡಿದ್ದು, ಇದೀಗ ಅರ್ಜಿ ಸ್ವೀಕಾರವಾಗಿದೆ.

ದರ್ಶನ್ -

ಬೆಂಗಳೂರು: ರೇಣುಕಾಸ್ವಾಮಿ ಕೊಲೆ (Renuka swamy murder case) ಪ್ರಕರಣದಲ್ಲಿ ದೋಷಿಯಾಗಿ ಜೈಲಿನಲ್ಲಿರುವ ನಟ ದರ್ಶನ್ (Actor Darshan) ಅವರ ಅರ್ಜಿ ವಿಚಾರಣೆ ಬೆಂಗಳೂರಿನ 57ನೇ ಸೆಷನ್ಸ್ ನ್ಯಾಯಾಲಯದಲ್ಲಿ (Sessions court) ನಡೆಯುತ್ತಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿ ತಮಗೆ ಬೇಕಾಗಿರುವ ವಸ್ತುಗಳನ್ನು ನೀಡದ ಜೈಲಿನ ಅಧಿಕಾರಿಗಳ ವಿರುದ್ಧ ದರ್ಶನ್ ಕೋರ್ಟಿಗೆ ದೂರು ನೀಡಿದ್ದು, ಇದೀಗ ಅರ್ಜಿ ಸ್ವೀಕಾರವಾಗಿದೆ. ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಕಾನೂನು ಸೇವಾ ಪ್ರಾಧಿಕಾರದ ಕಾರ್ಯದರ್ಶಿಗೆ ಜಡ್ಜ್ ಸೂಚಿಸಿದ್ದಾರೆ. ನಟ ದರ್ಶನ್ ಪರ ವಕೀಲ ಹಾಗೂ ಸರ್ಕಾರದ ಪರ ವಕೀಲರ ಸುದೀರ್ಘ ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯ, ಅಧಿಕಾರಿಗಳು ಜೈಲಿಗೆ ಭೇಟಿ ನೀಡಿ ಸವಲತ್ತು ಪರಿಶೀಲಿಸಬೇಕು ಎಂದು ಸೂಚಿಸಿದೆ.
ದರ್ಶನ್ ಜೈಲಿನಲ್ಲಿ ತಮಗೆ ಹೆಚ್ಚುವರಿ ಹಾಸಿಗೆ, ದಿಂಬು ಹಾಗೂ ಇತರ ಮೂಲಸೌಲಭ್ಯ ಕಲ್ಪಿಸಲು ನ್ಯಾಯಾಧೀಶರೇ ಒಮ್ಮೆ ಪರಿಶೀಲಿಸುವಂತೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಕೋರ್ಟ್ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗೆ ಪರಪ್ಪನ ಅಗ್ರಹಾರಕ್ಕೆ ಭೇಟಿ ನೀಡಿ, ಜೈಲಿನಲ್ಲಿ ನಿಯಮ ಪಾಲನೆ ಆಗಿದೆಯೋ, ಇಲ್ಲವೋ ಎನ್ನುವುದನ್ನು ಪರಿಶೀಲಿಸಿ ಅ. 18ರ ಒಳಗೆ ವರದಿ ನೀಡುವಂತೆ ಸೂಚನೆ ನೀಡಿದೆ. ಹೀಗಾಗಿ ದರ್ಶನ್‌ಗೆ ಇನ್ನಾದರೂ ಹಾಸಿಗೆ, ದಿಂಬು ಸಿಗುತ್ತಾ ಎನ್ನುವ ಕುತೂಹಲ ಮೂಡಿಸಿದೆ.
ಈ ಸುದ್ದಿಯನ್ನೂ ಓದಿ: Actor Darshan: ಹಾಸಿಗೆ, ದಿಂಬು ನೀಡಿಲ್ಲ; ಕೋರ್ಟ್‌ಗೆ ದರ್ಶನ್ ಪರ ವಕೀಲರಿಂದ ಮತ್ತೆ ಅರ್ಜಿ
ದರ್ಶನ್ ಪರ ಅರ್ಜಿ
ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸದ ಆರೋಪದ ಹಿನ್ನೆಲೆಯಲ್ಲಿ ಕೋರ್ಟ್‌ನಲ್ಲಿ ದರ್ಶನ್ ಸಲ್ಲಿಸಿದ್ದಾರೆ. ಕೋರ್ಟಿಗೆ ಜೈಲು ಅಧೀಕ್ಷಕ ಸುರೇಶ್ ಖುದ್ದು ಹಾಜರಾಗಿ ಸಂಪೂರ್ಣ ವರದಿ ಸಲ್ಲಿಸಿದ್ದಾರೆ. ಕ್ವಾರಂಟೈನ್ ಸೆಲ್‌ನಿಂದ ಬ್ಯಾರಕ್‌ಗೆ ಸ್ಥಳಾಂತರಿಸಲು ನಟ ದರ್ಶನ್ ಕೋರಿದ್ದಾರೆ. ವಾಕ್ ಮಾಡಲು ಕಡಿಮೆ ಸಮಯ ಜಾಗ ನೀಡಿದ್ದಾರೆ. ಜೈಲಾಧಿಕಾರಿಗಳು ಕೋರ್ಟ್ ಆದೇಶ ಪಾಲಿಸಿಲ್ಲ ಎಂದು ಆರೋಪಿಸಿದ್ದಾರೆ.
ಜೈಲಿನಲ್ಲಿ ಹೆಚ್ಚುವರಿ ಹಾಸಿಗೆ ದಿಂಬು ನೀಡದ ಆರೋಪ ವಿಚಾರಕ್ಕೆ ಸಂಬಂಧಪಟ್ಟಂತೆ ದರ್ಶನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಯುತ್ತಿದೆ. ಜೈಲು ಅಧಿಕಾರಿಗಳ ಪರವಾಗಿ ಎಸ್‍ಪಿಪಿ ಪ್ರಸನ್ನ ಕುಮಾರ್ ವಾದ ಆರಂಭಿಸಿದ್ದಾರೆ. ʼʼಜೈಲು ಕೈಪಿಡಿಯಂತೆ ಕ್ರಮ ಕೈಗೊಳ್ಳಲಾಗಿದೆ. ಟೆಲಿಫೋನ್ ವಿಡಿಯೋ ಕಾನ್ಫರೆನ್ಸ್ ವ್ಯವಸ್ಥೆ ಸಹ ಮಾಡಲಾಗಿದೆ. ಚಾದರ್, ಹಾಸಿಗೆ ದಿಂಬು ಕೊಡಲಾಗಿದೆ. ಪಲ್ಲಂಗ ಕೇಳಿದರೆ ಕೊಡಲು ಅವಕಾಶ ಇಲ್ಲ. ಓಡಾಡಲು ಅವಕಾಶ ಕೇಳಿದರು, ಅದನ್ನು ಸಹ ಕೊಟ್ಟಿದ್ದೇವೆ. ಎಷ್ಟು ಜಾಗವಿದೆಯೋ ಅಲ್ಲಿ ಅವಕಾಶ ಕೊಟ್ಟಿದ್ದೇವೆʼʼ ಎಂದು ಅವರು ಹೇಳಿದ್ದಾರೆ.
ದರ್ಶನ್ ಪರ ವಕೀಲರು ಹೇಳಿದ್ದೇನು?
ಆರೋಪಿ ದರ್ಶನ್ ಪರ ವಕೀಲ ಸುನಿಲ್ ವಾದ ಮಂಡಿಸಿದರು. ʼʼಜೈಲಾಧಿಕಾರಿಗಳಿಗೆ ಕೋರ್ಟ್ ನಿರ್ದೇಶನ ಅರ್ಥವಾಗಿಲ್ಲ. ಅಧಿಕಾರಿಗಳಿಗೆ ಇಂಗ್ಲಿಷ್ ಬರುತ್ತಿಲ್ಲವೆಂದು ಕಾಣುತ್ತದೆ. ಕೋರ್ಟ್ ಆದೇಶದ ಪ್ರತಿಯನ್ನು ಎಸೆದಿದ್ದಾರೆ. ಅವರು ಚಿನ್ನದ ಮಂಚವೇನೂ ಕೇಳಿಲ್ಲ. ಚೆಂಬು ಲೋಟ ಚಾಪೆ ಕೊಟ್ಟಿದ್ದಾರೆ. ಕಾರ್ಪೆಟ್ ಚಾದರ್ ಮೊದಲೇ ಕೊಟ್ಟಿದ್ದರು. ಕಂಬಳಿ ಮಾತ್ರ ಕೋರ್ಟ್ ಆದೇಶದ ಬಳಿಕ ಕೊಟ್ಟಿದ್ದಾರೆ. ಬ್ಯಾರಕ್ ಒಳಗೆ ಮಾತ್ರ ಅರ್ಧ ಗಂಟೆ ಓಡಾಡಲು ಬಿಟ್ಟಿದ್ದಾರೆ. ಹೊರಗಡೆ ಓಡಾಡಲು ಬಿಟ್ಟಿಲ್ಲʼʼ ಎಂದು ತಿಳಿಸಿದ್ದಾರೆ.