Basanagouda Patil Yatnal: ಹಿಂದುಗಳ ರಕ್ಷಣೆಗಾಗಿ ಹೊಸ ರಾಜಕೀಯ ಪಕ್ಷ ಕಟ್ಟುತ್ತೇವೆ: ಶಾಸಕ ಯತ್ನಾಳ್
Basanagouda Patil Yatnal: ವಿಜಯಪುರದ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಮಾತನಾಡಿರುವ ಅವರು, ರಾಜ್ಯದಲ್ಲಿ ಬಿಜೆಪಿಯಿಂದ ಹಿಂದುಗಳ ರಕ್ಷಣೆ ಆಗಲ್ಲ. ಆದ್ದರಿಂದ ಹಿಂದುಗಳ ರಕ್ಷಣೆಗೆ ಹೊಸ ಪಕ್ಷ ಕಟ್ಟುವ ಅನಿವಾರ್ಯತೆ ಬಂದಿದೆ ಎಂದು ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.


ವಿಜಯಪುರ: ಬಿ.ಎಸ್. ಯಡಿಯೂರಪ್ಪ ಕುಟುಂಬದ ವಿರುದ್ಧ ಸಮರ ಸಾರಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಹಿಂದುಗಳ ರಕ್ಷಣೆಗಾಗಿ ಬರುವ ವಿಜಯ ದಶಮಿಗೆ ಹೊಸ ರಾಜಕೀಯ ಪಕ್ಷ ಸ್ಥಾಪನೆ ಮಾಡುವುದಾಗಿ ಘೋಷಿಸಿದ್ದಾರೆ. ಬಿಜೆಪಿಯಲ್ಲಿ ಹಿಂದು ನಾಯಕರನ್ನು ಮೂಲೆಗುಂಪು ಮಾಡುವ ಕುತಂತ್ರವನ್ನು ಬಿಎಸ್‌ವೈ ಕುಟುಂಬ ನಡೆಯುತ್ತಿದೆ. ಹೊಸ ರಾಜಕೀಯ ಪಕ್ಷ ಉದಯವಾಗಬೇಕು ಎಂದು ರಾಜ್ಯದ ಜನ ಬಯಸಿದರೆ ವಿಜಯದಶಮಿಗೆ ಹೊಸ ಪಕ್ಷ ಘೋಷಣೆ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಪಾಟೀಲ್ (Basanagouda Patil Yatnal:) ತಿಳಿಸಿದ್ದಾರೆ.
ವಿಜಯಪುರದ ಸಿದ್ದೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ನೆರವೇರಿಸಿದ ಬಳಿಕ ಮಾತನಾಡಿರುವ ಅವರು, ರಾಜ್ಯದಲ್ಲಿ ಬಿಜೆಪಿಯಿಂದ ಹಿಂದುಗಳ ರಕ್ಷಣೆ ಆಗಲ್ಲ. ಆದ್ದರಿಂದ ಹಿಂದುಗಳ ರಕ್ಷಣೆಗೆ ಹೊಸ ಪಕ್ಷ ಕಟ್ಟುವ ಅನಿವಾರ್ಯತೆ ಬಂದಿದೆ ಎಂದು ಹೇಳಿದ್ದಾರೆ.
ವಿಜಯೇಂದ್ರ ಒಬ್ಬ ಮಹಾ ಭ್ರಷ್ಟ. ಇವನನ್ನು ನಮ್ಮ ಮೇಲೆ ಏಕೆ ಹೇರುತ್ತಿರಿ? ಇವನಿಂದಾಗಿ ಬಿಎಸ್‌ವೈ ಜೈಲಿಗೆ ಹೋಗಬೇಕಾಯಿತು. ನಕಲಿ ಸಹಿ ಮಾಡಿದ ಆರೋಪ ವಿಜಯೇಂದ್ರ ಮೇಲೆ ಇದೆ. 40% ಸೇರಿದಂತೆ ಸಾಕಷ್ಟು ಹಗರಣಗಳಲ್ಲಿ ವಿಜಯೇಂದ್ರ ಹೆಸರಿದೆ. ಹೀಗೆ ಹಗರಣ ಮಾಡಿರುವ ಒಂದು ಕುಟುಂಬವನ್ನ ಪಕ್ಷದಲ್ಲಿ ಮುಂದುವರೆಸುದಾದರೆ ಹಿಂದುತ್ವವಾದಿಗಳು ಹಿಂದೂ ಜನತೆ ಒಂದು ನಿರ್ಣಯ ಕೈಗೊಳ್ಳಬೇಕಾಗುತ್ತೆ. ಆ ಬಗ್ಗೆ ಇಂದಿನಿಂದಲೇ ಆ ಬಗ್ಗೆ ಜಾಗೃತಿ ಮೂಡಿಸಲು ಆರಂಭಿಸುತ್ತೇವೆ ಎಂದು ಹೇಳಿದರು.
ಈ ಸುದ್ದಿಯನ್ನೂ ಓದಿ | ಯತ್ನಾಳ್ ಉಚ್ಚಾಟನೆ ಹಿಂಪಡೆಯದಿದ್ದರೆ ಉಗ್ರ ಹೋರಾಟ; ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ
ಜನರ ಅಭಿಪ್ರಾಯ ಸಂಗ್ರಹಿಸಿ ಒಂದು ಹಿಂದು ಪಕ್ಷ ಆಸ್ತಿತ್ವಕ್ಕೆ ತರಬೇಕಾಗುತ್ತದೆ. ಬಹಳಷ್ಟು ಜನರು ಬಿಜೆಪಿಯಿಂದ ಹಿಂದು ರಕ್ಷಣೆ ಮಾಡುತ್ತಿಲ್ಲವೆಂದು ಅಳಲು ತೋಡಿಕೊಂಡಿದ್ದಾರೆ. ಯಡಿಯೂರಪ್ಪ ಕುಟುಂಬ ಹೊಂದಾಣಿಕೆ ರಾಜಕೀಯ ಮಾಡಿ ಪಕ್ಷವನ್ನು ದುರ್ಬಲ ಮಾಡಿದೆ. ಹೀಗಾಗಿ ಹಿಂದುಗಳ ರಕ್ಷಣೆ, ದೇಶಕ್ಕಾಗಿ ಹಿಂದು ಪಕ್ಷ ಆಸ್ವಿತ್ವ ತರಬೇಕಾಗಿದೆ. ನಾವು, ಬಿಜೆಪಿ-ಪ್ರಧಾನಿ ನರೇಂದ್ರ ಮೋದಿ ವಿರೋಧಿಗಳಲ್ಲ. ಯಡಿಯೂರಪ್ಪ ಬಿಟ್ಟು ನಮಗೆ ಬೇರೆ ಗತಿಯಿಲ್ಲ ಎಂದು ನೀವು ಹೇಳಿದರೆ ನಮ್ಮ ದಾರಿ ನಾವು ಕಂಡುಕೊಳ್ಳಬೇಕಾಗುತ್ತದೆ. ಹಿಂದು ಪಕ್ಷ ಕಟ್ಟುವ ಬಗ್ಗೆ ಬೀದರ್‌ನಿಂದ ಹಿಡಿದು ಚಾಮರಾಜವರೆಗೂ ಒತ್ತಾಯಿಸಿದ್ದಾರೆ. ಹೀಗಾಗಿ ಹೊಸ ಪಕ್ಷದ ಬಗ್ಗೆ ನಾವು ಜನಾಭಿಪ್ರಾಯ ಸಂಗ್ರಹಿಸುತ್ತೇವೆ.
ತಮ್ಮ ಸ್ವಾರ್ಥಕ್ಕಾಗಿ ಬಿಎಸ್‌ವೈ-ವಿಜಯೇಂದ್ರ ಹಿಂದುತ್ವವಾದಿಗಳನ್ನ ತುಳಿಯುತ್ತಾ ಬಂದಿದ್ದಾರೆ. ಅದಕ್ಕೆ ನಾನು ಈಗ ಬಲಿಯಾಗಿದ್ದಾನೆ. ಪಕ್ಷದಲ್ಲಿ ವಂಶಪಾರಂಪರ್ಯ ಮುಂದುವರಿಸಲು ಬಿಎಸ್‌ವೈ ಕುಟುಂಬ ಮುಂದಾಗಿದೆ. ಇದೇ ರೀತಿ ಮುಂದುವರಿದರೆ ನಾವು ಪರ್ಯಾಯ ಮಾರ್ಗ ಕಂಡು ಕೊಳ್ಳಬೇಕಾಗುತ್ತದೆ. ಹೈಕಮಾಂಡ್ ಪಕ್ಷದಲ್ಲಿ ವಂಶಪಾರಪರ್ಯ ಭ್ರಷ್ಟಚಾರಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಪರ್ಯಾಯವಾಗಿ ನಾವು ನಿಲ್ಲಬೇಕಾಗುತ್ತದೆ. ಯುಗಾದಿ ಹಬ್ಬದ ಹೊಸ ವರ್ಷದಿಂದ ಈ ಸಂದೇಶ ನೀಡುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸುದ್ದಿಯನ್ನೂ ಓದಿ | Basanagouda Patil Yatnal: ಬಿಎಸ್‌ವೈ ಕುಟುಂಬದ ವಿರುದ್ಧ ಹೋರಾಟ ಮುಂದುವರಿಸುವೆ: ಗುಡುಗಿದ ಯತ್ನಾಳ್