ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಮುಸ್ಲಿಂ ಯುವತಿಯ ಮದುವೆಯಾಗುವ ಹಿಂದೂ ಯುವಕನಿಗೆ 5 ಲಕ್ಷ ರೂ.: ಯತ್ನಾಳ್‌ ಘೋಷಣೆ

Koppala: ರಾಜ್ಯದಲ್ಲಿ ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿರುವುದು ಮುಸ್ಲಿಂ ಪರ ಸರ್ಕಾರವಾಗಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರ ಅಹಿಂದ ಸರ್ಕಾರ ಎಂದೆನ್ನುತ್ತಿದೆ. ಆದರೆ ರಾಜ್ಯದಲ್ಲಿ ಅಹಿಂದ ಅಲ್ಲ, ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಕಿಡಿಕಾರಿದರು.

ಮುಸ್ಲಿಂ ಯುವತಿಯ ಮದುವೆಯಾಗುವ ಹಿಂದೂ ಯುವಕನಿಗೆ 5 ಲಕ್ಷ ರೂ.: ಯತ್ನಾಳ್‌

ಬಸವನಗೌಡ ಪಾಟೀಲ್‌ ಯತ್ನಾಳ್

ಹರೀಶ್‌ ಕೇರ ಹರೀಶ್‌ ಕೇರ Aug 11, 2025 6:52 AM

ಕೊಪ್ಪಳ: ಹಿಂದೂ ಯುವಕರು (‌hindu man) ಮುಸ್ಲಿಂ ಯುವತಿಯನ್ನು (muslim women) ಮದುವೆಯಾದರೆ (Marriage) 5 ಲಕ್ಷ ರೂ. ಕೊಡುವೆವು ಎನ್ನುವ ಅಭಿಯಾನ ಆರಂಭಿಸಲಿದ್ದೇವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ (Basangouda Patil Yatnal) ಹೇಳಿದ್ದಾರೆ. ಕೊಪ್ಪಳದಲ್ಲಿ (Koppala) ಹತ್ಯೆಯಾದ ಗವಿಸಿದ್ದಪ್ಪ ನಾಯಕ್ ಅವರ ಮನೆಗೆ ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಅವರ ಜೊತೆ ಭೇಟಿ ನೀಡಿ ಯತ್ನಾಳ್‌ ಸಾಂತ್ವನ ಹೇಳಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಯತ್ನಾಳ್, ರಾಜ್ಯದಲ್ಲಿ ಹಿಂದೂ ಯುವಕರಿಗೆ ರಕ್ಷಣೆ ಇಲ್ಲದಂತಾಗಿದೆ. ರಾಜ್ಯದಲ್ಲಿರುವುದು ಮುಸ್ಲಿಂ ಪರ ಸರ್ಕಾರವಾಗಿದೆ. ಸಿದ್ದರಾಮಯ್ಯ ಸರ್ಕಾರ ಅಹಿಂದ ಸರ್ಕಾರ ಎಂದೆನ್ನುತ್ತಿದೆ. ಆದರೆ ರಾಜ್ಯದಲ್ಲಿ ಅಹಿಂದ ಅಲ್ಲ, ಅಲ್ಪಸಂಖ್ಯಾತರ ರಕ್ಷಣೆ ಮಾಡುತ್ತಿದೆ ಎಂದು ಕಿಡಿಕಾರಿದರು.

ಹಿಂದೂ ಯುವಕ ಗವಿಸಿದ್ದಪ್ಪ ನಾಯಕ್ ಕೊಲೆ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸದಿದ್ದರೆ ಸಿಎಂ ಸಿದ್ದರಾಮಯ್ಯ ಸರಕಾರವನ್ನ ಅಧಿವೇಶನದಲ್ಲಿ ನಾವು ತರಾಟೆ ತೆಗೆದುಕೊಳ್ಳಲಿದ್ದೇವೆ. ಯಾರೂ ಮುಸ್ಲಿಂ ಯುವತಿಯರನ್ನು ಪ್ರೀತಿ ಮಾಡಬಾರದಾ ? ಅವರನ್ನು ಮದುವೆ ಆಗಬಾರದೆಂದು ಏಲ್ಲಿದೆ ? ಇನ್ಮುಂದೆ ನಾವು ಹಿಂದೂ ಯುವಕರು ಮುಸ್ಲಿಂ ಯುವತಿಯನ್ನು ಮದುವೆಯಾದರೆ 5 ಲಕ್ಷ ರೂ. ಕೊಡುವೆವು ಎನ್ನುವ ಅಭಿಯಾನ ಆರಂಭಿಸಲಿದ್ದೇವೆ ಎಂದರು.

ಕೊಪ್ಪಳದ ಹಿಂದೂ ಯುವಕನ ಕೊಲೆಯಲ್ಲಿ ಸರಕಾರವೂ ಸಾಥ್ ನೀಡಿದೆ. ಕೊಲೆ ಮಾಡಿದ ಯುವಕನ ಕೈಯಲ್ಲಿ ಲಾಂಗ್ ಹಿಡಿಕೊಂಡು ತೋರಿಸಿ ರೀಲ್ಸ್ ಮಾಡಿದ್ದಾನೆ. ಆದರೆ ಸರಕಾರ ಪೊಲೀಸರ ಕೈ ಕಟ್ಟಿ ಹಾಕಿದೆ. ಆ ಕುಟುಂಬಕ್ಕೆ ನ್ಯಾಯ ಸಿಗುವ ವರೆಗೂ ಹೋರಾಟ ಮಾಡಲಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Basanagouda Patil Yatnal: ಪ್ರವಾದಿ ಕುರಿತು ಅವಹೇಳನಕಾರಿ ಹೇಳಿಕೆ; ಯತ್ನಾಳ್ ವಿರುದ್ಧ ಎಫ್‌ಐಆರ್‌