Karnataka bandh: ಕರ್ನಾಟಕ ಬಂದ್; ನಾಳೆ ಶಾಲೆಗಳಿಗೆ ರಜೆ ಇರುತ್ತಾ? ಶಿಕ್ಷಣ ಸಚಿವರು ಹೇಳಿದ್ದೇನು?
Karnataka bandh: ಒಂದೆಡೆ ಕನ್ನಡಪರ ಸಂಘಟನೆಗಳು ಮಾ. 22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಮತ್ತೊಂದೆಡೆ ಇಂದಿನಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿವೆ. ಹೀಗಾಗಿ ಶಾಲೆಗಳಿಗೆ ರಜೆ ಇರುತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಶಿಕ್ಷಣ ಸಚಿವರು ಸ್ಪಷ್ಟನೆ ನೀಡಿದ್ದಾರೆ.


ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಸಂಘಟನೆಗಳ ಪುಂಡಾಟ ಖಂಡಿಸಿ ಕನ್ನಡಪರ ಸಂಘಟನೆಗಳಿಂದ ನಾಳೆ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಬಂದ್‌ಗೆ ಕೆಲ ಸಂಘಟನೆಗಳು ಬೆಂಬಲ ನೀಡಿದ್ದು, ಶನಿವಾರ ಬೆಳಗ್ಗೆ 6ಗಂಟೆಯಿಂದಲೇ ಬಂದ್ ಆರಂಭಿಸುವುದಾಗಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಹೇಳಿದ್ದಾರೆ. ಇದರಿಂದ ನಾಳೆ ಶಾಲೆಗಳಿಗೆ ರಜೆ ಇರುತ್ತಾ? ಎಂಬ ಬಗ್ಗೆ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಮೂಡಿದೆ. ಹೀಗಾಗಿ ಇದೀಗ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದಾರೆ.
ಒಂದೆಡೆ ಕನ್ನಡಪರ ಸಂಘಟನೆಗಳು ಮಾ. 22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಿವೆ. ಮತ್ತೊಂದೆಡೆ ಇಂದಿನಿಂದಲೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಿವೆ. ಹೀಗಾಗಿ ಶಾಲೆಗಳಿಗೆ ರಜೆ ಇರುತ್ತಾ ಎಂಬ ಪ್ರಶ್ನೆ ಉದ್ಭವಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ ನೀಡಿದ್ದು, ಈವರೆಗೆ ಶಾಲೆ ಬಂದ್ ಮಾಡುವ ನಿರ್ಧಾರ ಮಾಡಿಲ್ಲ. ಮಧ್ಯಾಹ್ನ ಗೃಹ ಸಚಿವ ಹಾಗೂ ಸಾರಿಗೆ ಸಚಿವರ ಜತೆ ಸಭೆ ಮಾಡಲಾಗುತ್ತದೆ. ಅವರು ಏನು ಹೇಳುತ್ತಾರೋ, ಅದರ ಮೇಲೆ ನಿರ್ಧಾರ ಪ್ರಕಟ ಮಾಡುತ್ತೇನೆ ಎಂದು ಹೇಳಿದ್ದಾರೆ.
ಸಾರಿಗೆ ಹಾಗೂ ಭದ್ರತೆ ಇಲ್ಲದೆ ಶಾಲೆ ತೆರೆಯಲು ಆಗಲ್ಲ. ನಾಳೆ ಮೌಲ್ಯಾಂಕನ ಪರೀಕ್ಷೆ ಇದೆ. ಹೀಗಾಗಿ ಮುಂದೂಡಲು ನಾವು ಸಿದ್ಧವಾಗಿದ್ದೇವೆ. ಆದರೆ ಗೃಹ ಇಲಾಖೆ ಹಾಗೂ ಸಾರಿಗೆ ಇಲಾಖೆಯ ನಿರ್ಧಾರ ನೋಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಈ ಸುದ್ದಿಯನ್ನೂ ಓದಿ | Karnataka Bandh: ನಾಳೆ ಕರ್ನಾಟಕ ಬಂದ್ ಖಚಿತ: ಯಾರ ಬೆಂಬಲ, ಏನಿದೆ, ಏನಿಲ್ಲ? ವಿವರ ಇಲ್ಲಿದೆ
ನಾಳೆ ಬೆಳಗ್ಗೆ 6 ಗಂಟೆಯಿಂದ ಕರ್ನಾಟಕ ಬಂದ್
ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟ ಖಂಡಿಸಿ, ವಿವಿಧ ನದಿ ಯೋಜನೆಗಳ ಆರಂಭಕ್ಕೆ ಆಗ್ರಹಿಸಿ ಮಾರ್ಚ್ 22ರ ನಾಳೆ ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್‌ಗೆ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಯಾವುದೇ ಕಾರಣಕ್ಕೂ ಬಂದ್ ವಾಪಸ್ ಪಡೆಯಲ್ಲ, ಬಂದ್ ನಡೆದೇ ನಡೆಯುತ್ತದೆ. ಕೆಲವು ಸಂಘಟನೆಗಳು ಬೆಂಬಲ ನೀಡಿದೆ. ಎಲ್ಲರೂ ಬೆಂಬಲ ಕೊಡಿ. ನಮ್ಮನ್ನು ಬಂಧಿಸಲಿ, ಏನು ಬೇಕಾದರೂ ಮಾಡಲಿ, ನಾವು ಬಂದ್ ಮಾಡೇ ಮಾಡುತ್ತೇವೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ಇರಲಿದೆ ಎಂದು ತಿಳಿಸಿದ್ದಾರೆ.
ಬೆಳಗಾವಿಯಲ್ಲಿನ ಮರಾಠಿಗಳ ಪುಂಡಾಟಿಕೆ, ಅಟ್ಟಹಾಸ ಹೆಚ್ಚಾಗಿದ್ದು, ಎಂಇಎಸ್ ನಿಷೇಧಿಸಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನ ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಬೇಡವೇ ಬೇಡ. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿ ಪ್ರಕರಣದ ಬಗ್ಗೆ ಸಮಗ್ರವಾಗಿ ತನಿಖೆ ಆಗಬೇಕು. ಮೇಕೆದಾಟು ಬಗ್ಗ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ನೀತಿ ವಿರೋಧಿಸಿ ಹಾಗೂ ಚಾಲಕರಿಗೆ ಶಕ್ತಿ ತುಂಬಲು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಚಳವಳಿಗೆ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.