ಬೆಂಗಳೂರು, ಜ.12 : ಮಾನಹಾನಿ ಆರೋಪ ಪ್ರಕರಣದಲ್ಲಿ (Defamation case) ವಿಚಾರಣೆಗೆ ಗೈರು ಹಾಜರಾಗಿರುವ ಹಿನ್ನೆಲೆಯಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ (Basangouda Patil Yatnal) ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ರಹಿತ ಬಂಧನ ವಾರೆಂಟ್ (arrest warrant) ಹೊರಡಿಸಿದೆ.
ಸಚಿವ ಶಿವಾನಂದ ಪಾಟೀಲ್ ದಾಖಲಿಸಿರುವ ಖಾಸಗಿ ದೂರು ಸಂಬಂಧ ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಾಲಯ, ಯತ್ನಾಳ್ ವಿಚಾರಣೆಗೆ ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಜಾಮೀನು ರಹಿತ ಬಂಧನ ವಾರೆಂಟ್ ಜಾರಿಗೊಳಿಸಿದೆ. ಮುಂದಿನ ವಿಚಾರಣೆಯನ್ನು ಜ.20ಕ್ಕೆ ಮುಂದೂಡಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಮಾಡುವ ಸಂದರ್ಭದಲ್ಲಿ ಯತ್ನಾಳ್ ಅವರು ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ಸಚಿವ ಶಿವಾನಂದ ಎಸ್.ಪಾಟೀಲ್ ಅವರು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಈ ಖಾಸಗಿ ದೂರು ದಾಖಲಿಸಿದ್ದರು.