ವಿದೇಶ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಕ್ರೈಂ ಫ್ಯಾಷನ್‌ ಲೋಕ ಉದ್ಯೋಗ

Assault Case: ರಾಜ್ಯದಲ್ಲಿ ರಾಕ್ಷಸೀ ಕೃತ್ಯ; ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿ, ಕಣ್ಣು ಗುಡ್ಡೆ ಕಿತ್ತು ಚಿತ್ರಹಿಂಸೆ!

Assault Case: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನಲ್ಲಿ ಘಟನೆ ನಡೆದಿದೆ. ವ್ಯಕ್ತಿಯೊಬ್ಬ ಮೊದಲ ಹೆಂಡತಿ ಇದ್ದರೂ, ಮತ್ತೊಂದು ಮದುವೆ ಮಾಡಿಕೊಂಡಿದ್ದ. ಹೀಗಾಗಿ ಮೊದಲ ಹೆಂಡತಿ ಕಡೆಯವರು ಎರಡನೇ ಹೆಂಡತಿಯನ್ನು ಕಿಡ್ನ್ಯಾಪ್‌ ಮಾಡಿಸಿ ಮಾರಣಾಂತಿಕವಾಗಿ ಹಲ್ಲೆ ಮಾಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಮಹಿಳೆಯನ್ನು ಕಿಡ್ನ್ಯಾಪ್‌ ಮಾಡಿ, ಕಣ್ಣು ಗುಡ್ಡೆ ಕಿತ್ತು ಚಿತ್ರಹಿಂಸೆ!

Profile Prabhakara R Feb 20, 2025 7:50 PM

ಚಿಕ್ಕಬಳ್ಳಾಪುರ: ಮಹಿಳೆಯನ್ನು ಕೋಣೆಯಲ್ಲಿ ಕೂಡಿಹಾಕಿ ರಾತ್ರಿಯಿಡೀ ಚಿತ್ರಹಿಂಸೆ ನೀಡಿ, ಕಣ್ಣುಗುಡ್ಡೆ ಕಿತ್ತು ಭೀಕರವಾಗಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಜಗನಹಳ್ಳಿಯಲ್ಲಿ ನಡೆದಿದೆ. ಹೌದು, ಮಹಿಳೆಯನ್ನು ಕಿಡ್ನ್ಯಾಪ್ ಮಾಡಿ ತೋಟದ ಮನೆಯಲ್ಲಿ ಕೂಡಿಹಾಕಿ ಬ್ಯಾಟ್, ರಾಡ್‌ಗಳಿಂದ ಮಾರಣಾಂತಿಕ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಮುಖದಲ್ಲಿ ರಕ್ತ ಸುರಿಯುವಂತೆ ದುಷ್ಕರ್ಮಿಗಳು ಮನಬಂದಂತೆ ಥಳಿಸಿದ್ದಾರೆ. ವ್ಯಕ್ತಿಯೊಬ್ಬ ಮೊದಲ ಹೆಂಡತಿ ಇದ್ದರೂ, ಮತ್ತೊಂದು ಮದುವೆ ಮಾಡಿಕೊಂಡಿದ್ದ. ಹೀಗಾಗಿ ಮೊದಲ ಹೆಂಡತಿ ಕಡೆಯವರು ಎರಡನೇ ಹೆಂಡತಿಯನ್ನು ಕಿಡ್ನ್ಯಾಪ್‌ ಮಾಡಿಸಿ ಹಲ್ಲೆ ಮಾಡಿಸಿದ್ದಾರೆ ಎಂದು ತಿಳಿದುಬಂದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಜಗನಹಳ್ಳಿ ಗ್ರಾಮದ ಗಂಗರಾಜು ಎಂಬುವವರ ಎರಡನೇ ಪತ್ನಿ ಸಂಗೀತ ಮೇಲೆ ಭೀಕರ ಹಲ್ಲೆ ನಡೆಸಲಾಗಿದೆ. ಮೊದಲ ಪತ್ನಿಯ ಕಡೆಯವರೇ ಹಲ್ಲೆ ನಡೆಸಿದ್ದಾರೆ ಎಂದು ಗಾಯಾಳು ಸಂಗೀತ ಸಹೋದರಿ ಆರೋಪಿಸಿದ್ದಾರೆ.

ಬೆಂಗಳೂರಿನಲ್ಲಿ ಮೂರು ತಿಂಗಳ ಹಿಂದೆ ಗಂಗರಾಜು, ಸಂಗೀತ ಅವರನ್ನು ಎರಡನೇ ಮದುವೆ ಆಗಿದ್ದರು. ಹೀಗಾಗಿ ಗಂಗರಾಜು ಸಂಬಂಧಿ ರಾಜಮ್ಮ ಕಡೆಯವರಿಂದ ಸಂಗೀತ ಮೇಲೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ನಿನ್ನೆ ರಾತ್ರಿ ಸಂಗೀತ ತಂದೆ ಹಾಗೂ ಸಹೋದರಿಯರ ಜತೆಯೂ ಗಲಾಟೆ ಮಾಡಿದ್ದು, ಈ ವೇಳೆ ಸಂಗೀತ ಸಹೊದರಿ ಹಂಸ ಮೇಲೆ ಹಲ್ಲೆ ಮಾಡಲಾಗಿದೆ.

ಸುದ್ದಿ ತಿಳಿದು ಗಂಗರಾಜು ಮತ್ತು ಸಂಗೀತಾ ಗ್ರಾಮಕ್ಕೆ ಬಂದಿದ್ದಾರೆ. ಗ್ರಾಮಕ್ಕೆ ಬಂದಿದ್ದ ಸಂಗೀತ ಮೇಲೆ ದಾಳಿ ನಡೆದಿದೆ. ಹೆಂಡತಿ ಇದ್ದರೂ ಎರಡನೇ ಮದುವೆಯಾಗಿದ್ದ ಗಂಗರಾಜು 9 ವರ್ಷಗಳಿಂದ ಸಂಗೀತ ಜತೆ ಇದ್ದರು. ಹೀಗಾಗಿ ಮೊದಲ ಪತ್ನಿಯ ಕಡೆಯವರು ಸಂಗೀತಾಳನ್ನು ಕಿಡ್ನ್ಯಾಪ್ ಮಾಡಿ ಮನಬಂದಂತೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ.

ಹಂಪಿಯಲ್ಲಿ ಈಜಲು ನದಿಗೆ ಹಾರಿದ್ದ ವೈದ್ಯೆ ಶವವಾಗಿ ಪತ್ತೆ

doctor drowned hampi

ಕೊಪ್ಪಳ: ಸ್ನೇಹಿತರ ಜೊತೆಗೆ ಹಂಪಿ (Hampi) ಪ್ರವಾಸಕ್ಕೆ ಎಂದು ಬಂದಿದ್ದ ಹೈದರಾಬಾದ್ ಮೂಲದ ವೈದ್ಯೆ (Doctor) ನದಿಗೆ ಹಾರಿದ್ದ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಸಾಣಾಪುರದ ಬಳಿ ನಡೆದಿತ್ತು. ಇದೀಗ ವೈದ್ಯೆ ಅನನ್ಯ ರಾವ್ ಶವವಾಗಿ (found dead) ಪತ್ತೆಯಾಗಿದ್ದಾರೆ. ಈಜಲು ಮುಂದಾಗಿದ್ದ (Swimming) ಅವರು ನದಿಗೆ ಹಾರಿದ್ದರು. ಆದರೆ ನೀರಿನ ಸೆಳವಿನಲ್ಲಿ (Drowned) ಕೊಚ್ಚಿಕೊಂಡು ಹೋಗಿದ್ದರು.

ಪೊಲೀಸ್​ ಮೂಲಗಳ ಪ್ರಕಾರ, ಡಾ. ಅನನ್ಯಾ ರಾವ್ ಮತ್ತು ಇತರೆ ಇಬ್ಬರು ಸ್ನೇಹಿತರಾದ ಸತ್ವಿನ್ ಮತ್ತು ಹಶಿತಾ ಜತೆ ಹಂಪಿಗೆ ಪ್ರವಾಸಕ್ಕೆಂದು ಬಂದಿದ್ದರು. ಇದೇ ಸಂದರ್ಭದಲ್ಲಿ ಅನನ್ಯಾ ರಾವ್ ಸುಮಾರು 25 ಅಡಿ ಎತ್ತರದ ಬಂಡೆಯಿಂದ ನೀರಿಗೆ ಹಾರಿ ಈಜಲು ಬಯಸಿದರು. ಬಂಡೆಯಿಂದ ನೀರಿಗೆ ಹಾರಿದ ಅನನ್ಯಾ ಸ್ವಲ್ಪ ಸಮಯದವರೆಗೆ ನೀರಿನಲ್ಲಿ ಈಜುತ್ತಿದ್ದರು. ಆದರೆ, ಶೀಘ್ರದಲ್ಲೇ ನದಿಯಲ್ಲಿ ನೀರಿನ ಹರಿವು ಹೆಚ್ಚಾಗಿ ಕೊಚ್ಚಿಕೊಂಡು ಹೋದರು.

ಹೈದರಾಬಾದ್‌ನ ವಿಕೆಸಿ ಆಸ್ಪತ್ರೆಯಲ್ಲಿ ವೈದ್ಯೆಯಾಗಿ ಸೇವೆ ಸಲ್ಲಿಸುತ್ತಿದ್ದ ಅನನ್ಯ, ರಜೆ ಕಳೆಯಲು ತಮ್ಮ ಸ್ನೇಹಿತರಾದ ಅಶಿತಾ ಮತ್ತು ಸಾತ್ವಿಕ್ ಜೊತೆ ಸಾಣಾಪುರ ಸಮೀಪ ಇರುವ ಖಾಸಗಿ ಗೆಸ್ಟ್‌ ಹೌಸ್‌ಗೆ ಮಂಗಳವಾರ ಸಂಜೆ ಬಂದಿದ್ದರು. ಗೆಸ್ಟ್ ಹೌಸ್ ಹಿಂದೆ ಇರುವ ತುಂಗಭದ್ರಾ ನದಿಯಲ್ಲಿ ಈ ಮೂವರು ಈಜಲು ಹೋದಾಗ ದುರ್ಘಟನೆ ಸಂಭವಿಸಿದೆ. ಈ ಪೈಕಿ ಅನನ್ಯ, ನದಿಯಲ್ಲಿ ಈಜಲು ಸಮೀಪದ ಬಂಡೆಯೊಂದರ ಮೇಲಿಂದ ನೀರಿಗೆ ಜಿಗಿದಿದ್ದಾರೆ. ನದಿಯಲ್ಲಿನ ನೀರಿನ ಸೆಳೆತದಿಂದ ಕೊಚ್ಚಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಪ್ರಿಯತಮೆಯನ್ನು ಕೊಂದು ಪ್ರಿಯಕರ ಆತ್ಮಹತ್ಯೆ

ಚಿಕ್ಕಮಗಳೂರು : ಪ್ರಿಯತಮೆಯನ್ನು ಕೊಂದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ದಾಸರಹಳ್ಳಿಯಲ್ಲಿ ನಡೆದಿದೆ. ಚಿಕ್ಕಮಗಳೂರು ತಾಲೂಕಿನ ಪೂರ್ಣಿಮಾ ಎಂಬ ಯುವತಿಯನ್ನು ಕೊಂದು ಬಳಿಕ ಭದ್ರಾವತಿಯ ಮಧು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಇದನ್ನೂ ಓದಿ: ರೀಲ್ಸ್‌ ಗೀಳು ತಂದ ಆಪತ್ತು; ರೈಲು ಡಿಕ್ಕಿಯಾಗಿ ಮೂವರು ಯುವಕರ ಸಾವು

ಕಾಫಿ ತೋಟದ ರಸ್ತೆಯಲ್ಲಿ ಕಾರಿನಲ್ಲಿ ಪೂರ್ಣಿಮ ಶವ ಪತ್ತೆಯಾಗಿದ್ದು, ಕಾಫಿ ತೋಟದ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಧು ಶವ ಪತ್ತೆಯಾಗಿದೆ. ಸದ್ಯ ಚಿಕ್ಕಮಗಳೂರು ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹಗಳನ್ನು ರವಾನಿಸಲಾಗಿದೆ. ಸ್ಥಳಕ್ಕೆ ಚಿಕ್ಕಮಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.