ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Yadgir News: ಚಾಕೋಲೆಟ್ ಆಮಿಷವೊಡ್ಡಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರ; ಕೇಸ್‌ ದಾಖಲು

ಅಕ್ಟೋಬರ್ 27ರಂದು ಬಾಲಕಿ ಕಾಣಿಸದಿದ್ದಾಗ ತಾಯಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಸ್ಥಳೀಯರೊಬ್ಬರು ಬಾಲಕಿ ಆರೋಪಿಯ ಮನೆಯ ಕಡೆಗೆ ಹೋಗಿರುವುದಾಗಿ ಮಾಹಿತಿ ನೀಡಿದ್ದಾರೆ. ಆರೋಪಿ ಚಾಕೋಲೆಟ್ ನೀಡುವುದಾಗಿ ಹೇಳಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಯಾದಗಿರಿ: ಚಾಕೋಲೆಟ್ ನೀಡುವುದಾಗಿ ಆಮಿಷವೊಡ್ಡಿ 12 ವರ್ಷದ ಬಾಲಕಿಯನ್ನು ಮನೆಗೆ ಕರೆದೊಯ್ದು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ 30 ವರ್ಷದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ಭೀ.ಗುಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಅಕ್ಟೋಬರ್ 27 ರ ಮಧ್ಯಾಹ್ನ ಬಾಲಕಿ ಕಾಣಿಸದಿದ್ದಾಗ ತಾಯಿ ಹುಡುಕಾಟ ನಡೆಸಿದ್ದಾರೆ. ಈ ವೇಳೆ ಸ್ಥಳೀಯರೊಬ್ಬರು ಬಾಲಕಿ ಆರೋಪಿಯ ಮನೆಯ ಕಡೆಗೆ ಹೋಗಿರುವುದಾಗಿ ಮಾಹಿತಿ ನೀಡಿದ್ದಾರೆ. ಬಳಿಕ ತಾಯಿ ಹಾಗೂ ಸ್ಥಳೀಯರು ಆರೋಪಿಯ ಮನೆಗೆ ತೆರಳಿದಾಗ, ಬಾಲಕಿ ಅಲ್ಲಿರುವುದು ಕಂಡುಬಂದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಬಾಲಕಿಯನ್ನು ವಿಚಾರಿಸಿದಾಗ, ಆರೋಪಿ ಚಾಕೋಲೆಟ್ ನೀಡುವುದಾಗಿ ಹೇಳಿ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬಾಲಕಿ ತಿಳಿಸಿದ್ದಾಳೆ ಎನ್ನಲಾಗಿದೆ.

ಬೆಂಗಳೂರಿನಲ್ಲಿ ಟೆಕ್ಕಿ, ಸ್ನೇಹಿತನ ಕಿಡ್ನಾಪ್ ಪ್ರಕರಣದಲ್ಲಿ ಟ್ವಿಸ್ಟ್‌ ಮೇಲೆ ಟ್ವಿಸ್ಟ್‌: ಅಪಹರಣಕ್ಕೊಳಗಾದವನ ಮೇಲೆಯೇ ಅತ್ಯಾಚಾರ ಆರೋಪ

ಘಟನೆಯಿಂದ ಆತಂಕಗೊಂಡಿದ್ದ ತಾಯಿ, ಸ್ಥಳೀಯರು ಧೈರ್ಯ ತುಂಬಿದ ಬಳಿಕ ಭೀ.ಗುಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಆಧಾರದಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.